• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Santhosh Lad: ಅಕ್ಕ ಪಡೆಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌..!

ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ

ಪ್ರತಿಧ್ವನಿ by ಪ್ರತಿಧ್ವನಿ
January 5, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Santhosh Lad: ಅಕ್ಕ ಪಡೆಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌..!
Share on WhatsAppShare on FacebookShare on Telegram
 ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವುದು ಅಕ್ಕ ಪಡೆಯ ಪ್ರಾಥಮಿಕ ಉದ್ದೇಶವಾಗಿದೆ. ಸಹಾನುಭೂತಿ ಮತ್ತು ಸಮುದಾಯ ಸೇವೆಯಲ್ಲಿ ಚಾಲಿತವಾಗಿರುವ ಅಕ್ಕ ಪಡೆ ಸಮಾಜದಲ್ಲಿ ಸ್ಪಂದಿಸುವ ಸುರಕ್ಷತಾ ಘಟಕವಾಗಿ ಮತ್ತು ಶೈಕ್ಷಣಿಕ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು. ಇಲ್ಲಿನ ಸೃಜನಾ ರಂಗಮಂದಿರ ಮುಂಭಾಗದಲ್ಲಿ ಅಕ್ಕ ಪಡೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯ ಸರ್ಕಾರವು ಪ್ರತಿ ಜಿಲ್ಲೆಯಲ್ಲಿ ಮಹಿಳೆಯರ ರಕ್ಷಣೆಗಾಗಿ ತುರ್ತಾಗಿ ಸ್ಪಂದಿಸಲು ಅನುಕೂಲವಾಗುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕರ್ನಾಟಕ ರಾಜ್ಯ ಮಹಿಳಾ ಗೃಹ ರಕ್ಷಕರನ್ನೊಳಗೊಂಡ ಅಕ್ಕ ಪಡೆಯನ್ನು ರಚಿಸಿದೆ. ಮಹಿಳೆಯರೇ ಆರಕ್ಷಕರಿರುವ ಅಕ್ಕ ಪಡೆಯನ್ನು ಆರಂಭಿಸಿದೆ. ಅದರಂತೆ ಧಾರವಾಡ ಜಿಲ್ಲೆಯ ಮಹಾನಗರ ಪೊಲೀಸ್ ಇಲಾಖೆಗೆ ಮಹಿಳಾ ಆರಕ್ಷಕರಿರುವ ಪ್ರತ್ಯೇಕ ವಾಹನ ಹೊಂದಿರುವ ಅಕ್ಕ ಪಡೆಗೆ ಚಾಲನೆ ನೀಡಲಾಗಿದೆ.
ಅಕ್ಕ ಪಡೆ ಉದ್ದೇಶ: ದೌರ್ಜನ್ಯ, ಹಿಂಸೆ, ನಿರ್ಲಕ್ಷ್ಯ ಅಥವಾ ಶೋಷಣೆ ಎದುರಿಸುತ್ತಿರುವ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲಿಕ ಸಹಾಯ ಹಸ್ತ ಮತ್ತು ರಕ್ಷಣೆ ಒದಗಿಸುವುದು ಅಕ್ಕ ಪಡೆಯ ಉದ್ದೇಶವಾಗಿದೆ.  ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ, ಘನತೆ ಮತ್ತು ಸಬಲೀಕರಣವನ್ನು ಉತ್ತೇಜಿಸುವುದಾಗಿದೆ. ಶಿಕ್ಷಣದ ಮೂಲಕ ಹಕ್ಕುಗಳು, ಕಾನೂನುಗಳು, ಸುರಕ್ಷತಾ ಕ್ರಮಗಳು ಮತ್ತು ಲಭ್ಯವಿರುವ ಬೆಂಬಲ ವ್ಯವಸ್ಥೆಗಳ ಬಗ್ಗೆ, ಜಾಗೃತಿ ಮೂಡಿಸುವದು ಮತ್ತು ಸಮಾಜದಲ್ಲಿ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆದು, ಕಾನೂನಿನ ರಕ್ಷಣೆಯೊಂದಿಗೆ ಭಯಮುಕ್ತ ವಾತಾವರಣ ಸೃಷ್ಟಿಸುವುದು ಅಕ್ಕ ಪಡೆಯ ಗುರಿಯಾಗಿದೆ.
ತರಬೇತಿ ಪಡೆದ ಅಕ್ಕ ಪಡೆ ತಂಡಗಳು ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ತಿರುಗಾಟ ಮತ್ತು ಮಹಿಳೆಯರು ಮತ್ತು ಮಕ್ಕಳನ್ನು ಒಳಗೊಂಡ ಸಂಕಷ್ಟದ ಕರೆಗಳಿಗೆ ತ್ವರಿತವಾಗಿ ಸ್ಪಂದಿಸುತ್ತವೆ. ಲಿಂಗ ಸಮಾನತೆ, ಮಕ್ಕಳ ರಕ್ಷಣೆ, ಕಾನೂನು ಹಕ್ಕುಗಳು, ಸಹಾಯವಾಣಿಗಳು ಮತ್ತು ವರದಿ ಮಾಡುವ ಕಾರ್ಯವಿಧಾನಗಳಂತಹ ವಿಷಯಗಳ ಕುರಿತು ಶಾಲೆ, ಕಾಲೇಜು, ಮಾರುಕಟ್ಟೆ ಮತ್ತು ನೆರೆಹೊರಗಳಲ್ಲಿ ಜಾಗೃತಿ ಅಭಿಯಾನಗಳನ್ನು ನಡೆಸುತ್ತದೆ. ಅಕ್ಕ ಪಡೆಯು, ಮಕ್ಕಳ ಕಲ್ಯಾಣ ಸಮಿತಿಗಳು, ಮಹಿಳಾ ಸಹಾಯವಾಣಿಗಳು, ಸರ್ಕಾರೇತರ ಸಂಸ್ಥೆಗಳು, ಕಾನೂನು ನೆರವು ಮತ್ತು ಆಶ್ರಯ ತಾಣಗಳೊಂದಿಗೆ ಸುಗಮ ಸಂಪರ್ಕ ಕಲ್ಪಿಸಿ ಸಮಾಲೋಚನೆ ಬೆಂಬಲವನ್ನು ನೀಡುತ್ತದೆ. ವಿಶ್ವಾಸ ವರ್ಧನೆ, ಸಮುದಾಯದಲ್ಲಿ ಸ್ನೇಹಪರ ಮತ್ತು ವಿಶ್ವಾಸಾರ್ಹ ಸ್ಥಿತಿಯನ್ನು ಸ್ಥಾಪಿಸುವುದು, ಸಂತ್ರಸ್ತೆಯರು ಮತ್ತು ಕುಟುಂಬಗಳು ಭಯವಿಲ್ಲದೆ ಸಹಾಯ ಪಡೆಯಲು ಪ್ರೋತ್ಸಾಹಿಸುತ್ತದೆ.
ಮಹಿಳೆ ಮತ್ತು ಮಕ್ಕಳಿಗೆ ಕಿರುಕುಳ, ಕೌಟುಂಬಿಕ ಹಿಂಸೆ, ಯಾವುದೇ ರೀತಿಯ ದೌರ್ಜನ್ಯವನ್ನು ಎದುರಿಸುತ್ತಿರುವ ಮಹಿಳೆಯರು ಮತ್ತು ಹದಿ ಹರೆಯದ ಹೆಣ್ಣು ಮಕ್ಕಳು. ನಿರ್ಲಕ್ಷö, ಕಳ್ಳಸಾಗಣೆ, ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿ, ಬಾಲಭಿಕ್ಷಾಟನೆ, ಮಾದಕ ದ್ರವ್ಯ ಅಥವಾ ನಿಂದನೆಗೆ ಒಳಗಾದ ಮಕ್ಕಳು, ಜಾಗೃತಿ ಮತ್ತು ಶಿಕ್ಷಣದ ಮೂಲಕ ಇಡೀ ಸಮಾಜವು ಈ ಯೋಜನೆಯ ಫಲಾನುಭವಿಯಾಗಿದ್ದಾರೆ.
ಅಕ್ಕ ಪಡೆ ಕಾರ್ಯ: ಜಿಲ್ಲಾ ಮಟ್ಟದಲ್ಲಿ ಮಹಿಳಾ ಗೃಹ ರಕ್ಷಕರನ್ನೊಳಗೊಂಡ ಅಕ್ಕ ಪಡೆ ತಂಡವು ಸ್ಥಳೀಯ ಪೊಲೀಸರ ನಿಕಟ ಸಹಯೋಗದೊಂದಿಗೆ ಬೆಳಿಗ್ಗೆ ೭ ರಿಂದ ರಾತ್ರಿ ೮ ಗಂಟೆಯವರೆಗೆ ಎರಡು ಪಾಳಿಗಳಲ್ಲಿ ಅಂದರೆ, ಬೆಳಿಗ್ಗೆ ೭ ರಿಂದ ಮಧ್ಯಾಹ್ನ ೨ ಗಂಟೆ ಮತ್ತು ಮಧ್ಯಾಹ್ನ ೨ ರಿಂದ ರಾತ್ರಿ ೮ ಗಂಟೆಯವರೆಗೆ ಕಾರ್ಯನಿರ್ವಹಿಸುತ್ತದೆ.
ತಂಡದ ಸದಸ್ಯರನ್ನು ಶಾಲೆ, ಕಾಲೇಜು, ಬಾಲಕಿಯರ, ಮಹಿಳಾ ಹಾಸ್ಟೆಲ್, ಬಸ್, ರೈಲ್ವೆ ನಿಲ್ದಾಣಗಳು, ಸ್ಥಳೀಯ ಮಾರುಕಟ್ಟೆ, ಪ್ರೇಕ್ಷಣಿಯ ಸ್ಥಳಗಳು ಪವಿತ್ರ ಸ್ಥಳಗಳು ಮತ್ತು ಇತರ ಸೂಕ್ಷ್ಮ ಸ್ಥಳಗಳಲ್ಲಿ ನಿಯೋಜಿಸಲಾಗಿರುತ್ತದೆ. ಈ ವೇಳೆ ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯ ಅಧ್ಯಕ್ಷರಾದ ಶ್ರೀ ಎಚ್ ಎಂ ರೇವಣ್ಣ, ಜಿಲ್ಲಾಧಿಕಾರಿ ದಿವ್ಯಪ್ರಭು, ಜಿಲ್ಲಾ ಪಂಚಾಯಿತಿ ಸಿಇಒ ಶ್ರೀ ಭುವನೇಶ್‌ ಪಾಟೀಲ್‌  ಮತ್ತಿತರರು ಉಪಸ್ಥಿತರಿದ್ದರು.
ADVERTISEMENT
Tags: Akka PadeCEO Bhuvanesh PatilDC Divya PrabhuHM RevannaHubballiKarnatakaLadi Policesanthosh ladWomen Police
Previous Post

ಬಡವರಿಗೆ ನೆರವಾಗಲೆಂದು ಕಾಂಗ್ರೆಸ್ ತಂದಿರುವ ನರೇಗಾ ಯೋಜನೆಯನ್ನು ಬಿಜೆಪಿ ಸತ್ಯನಾಶ ಮಾಡಲು ಹೊರಟಿದೆ..

Next Post

ಬಾಂಗ್ಲಾ ಆಟಗಾರರಿಗೆ ಐಪಿಎಲ್‌ನಲ್ಲಿ ಕೊಕ್‌ : ತನ್ನ ದೇಶದಲ್ಲಿ ಪಂದ್ಯ ಪ್ರಸಾರ ಬ್ಯಾನ್‌ ಮಾಡಿದ ಯೂನಸ್‌ ಸರ್ಕಾರ..

Related Posts

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ
Top Story

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
0

ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ...

Read moreDetails
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK

January 16, 2026
ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ

ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ

January 16, 2026
ಸಿಎಂ ಸ್ಥಾನ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ-ಡಿ.ಕೆ ಶಿವಕುಮಾರ್

ಸಿಎಂ ಸ್ಥಾನ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ-ಡಿ.ಕೆ ಶಿವಕುಮಾರ್

January 16, 2026
Next Post

ಬಾಂಗ್ಲಾ ಆಟಗಾರರಿಗೆ ಐಪಿಎಲ್‌ನಲ್ಲಿ ಕೊಕ್‌ : ತನ್ನ ದೇಶದಲ್ಲಿ ಪಂದ್ಯ ಪ್ರಸಾರ ಬ್ಯಾನ್‌ ಮಾಡಿದ ಯೂನಸ್‌ ಸರ್ಕಾರ..

Recent News

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ
Top Story

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK
Top Story

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK

by ಪ್ರತಿಧ್ವನಿ
January 16, 2026
ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ
Top Story

ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
ಸಿಎಂ ಸ್ಥಾನ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ-ಡಿ.ಕೆ ಶಿವಕುಮಾರ್
Top Story

ಸಿಎಂ ಸ್ಥಾನ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 16, 2026
BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು
Top Story

BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

by ಪ್ರತಿಧ್ವನಿ
January 16, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?

ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?

January 16, 2026
ಮುಂಬೈನಲ್ಲಿ ಬಿಜೆಪಿ ಪಾರುಪತ್ಯ: ಮತದಾರರಿಗೆ ಮೋದಿ ಧನ್ಯವಾದ..

ಮುಂಬೈನಲ್ಲಿ ಬಿಜೆಪಿ ಪಾರುಪತ್ಯ: ಮತದಾರರಿಗೆ ಮೋದಿ ಧನ್ಯವಾದ..

January 16, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!