• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Santhosh Lad: ಅಕ್ಕ-ಕಫೆ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌

ಪ್ರತಿಧ್ವನಿ by ಪ್ರತಿಧ್ವನಿ
October 4, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಮಹಿಳೆಯರ ಆರ್ಥಿಕ ಸಬಲಿಕರಣಕ್ಕೆ ಅಕ್ಕ ಕೆಫೆ ಸಹಕಾರಿ

ADVERTISEMENT

ರಾಜ್ಯದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ರಾಷ್ಟ್ರೀಯ ಜೀವನೋಪಾಯ ಅಭಿಯಾನವನ್ನು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಸದರಿ ಅಭಿಯಾನದ ಉದ್ದೇಶ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನದ ಪ್ರಮಾಣವನ್ನು ಕಡಿಮೆ ಮಾಡುವುದಾಗಿದೆ. ಈ ನಿಟ್ಟಿನಲ್ಲಿ ಅಭಿಯಾನದಡಿ ಸ್ವಸಹಾಯ ಗುಂಪುಗಳ ಮಹಿಳೆಯರೆ ನಿರ್ವಹಿಸಲು ಅವಕಾಶವಾಗುವಂತೆ ಅಕ್ಕ-ಕಫೆ ರೂಪಿಸಲಾಗಿದ್ದು, ಮಹಿಳೆಯರ ಆರ್ಥಿಕ ಸಬಲಿಕರಣಕ್ಕೆ ಇದು ದೊಡ್ಡ ಕೊಡುಗೆ ನೀಡಲಿದೆ ಎಂದು ಕಾರ್ಮಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಹೇಳಿದರು.

ಜಿಲ್ಲಾ ಪಂಚಾಯತ ಸಮೀಪದ ಕಟ್ಟಡದಲ್ಲಿ ಕಬ್ಬೆನೂರು ಗ್ರಾಮದ ಕಾಮಧೇನು ಮಹಿಳಾ ಸ್ವಸಹಾಯ ಸಂಘ ಆರಂಭಿಸಿರುವ ಅಕ್ಕ-ಕಫೆ ಉದ್ಘಾಟಿಸಿ ಅವರು, ಮಾತನಾಡಿದರು.

ಮಹಿಳೆಯರನ್ನು ಸ್ವಸಹಾಯ ಗುಂಪುಗಳಡಿ ಸಂಘಟಿಸಿ, ಅವರಿಗೆ ಕೃಷಿ ಮತ್ತು ಕೃಷಿಯೇತರ ವಿಭಾಗಗಳಡಿ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಒದಗಿಸುವುದರ ಜೊತೆಗೆ ಅವರು, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಅಭಿವೃದ್ಧಿ ಪಥದೊಂದಿಗೆ ಸ್ವಾವಲಂಬನೆಯ ಜೀವನವನ್ನು ನಿರ್ವಹಿಸುವಲ್ಲಿ ನಿರಂತರ ಬೆಂಬಲ ನೀಡಲಾಗುತ್ತಿದೆ. ಪ್ರಮುಖವಾಗಿ ಮಹಿಳೆಯರು ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸಿಕೊಂಡು ಜೀವನೋಪಾಯದೊಂದಿಗೆ ಸಬಲೀಕರಣದ ಬದುಕನ್ನು ರೂಪಿಸಿಕೊಳ್ಳುವಲ್ಲಿ ಅವಶ್ಯಕ ಸಾಮಥ್ರ್ಯಾಭಿವೃದ್ಧಿ ತರಬೇತಿಗಳನ್ನು ಏರ್ಪಡಿಸಿ, ಪ್ರತಿಯೊಬ್ಬ ಮಹಿಳೆಯನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಸೂಕ್ತ ಅವಕಾಶಗಳನ್ನು ಕಲ್ಪಿಸಿ ನಿರಂತರವಾಗಿ ಸರ್ಕಾರ ಶ್ರಮಿಸುತ್ತಿದೆ ಎಂದು ಅವರು ಹೇಳಿದರು.

ಮಹಿಳೆಯರ ಜೀವನೋಪಾಯ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡುವಲ್ಲಿ ರಾಜ್ಯ ಸರ್ಕಾರವು 2024-25ನೇ ಸಾಲಿನ ಆಯವ್ಯಯದಲ್ಲಿ ಅಕ್ಕ-ಕಫೆ ಕಾರ್ಯಕ್ರಮವನ್ನು ಘೋಷಿಸಿದೆ. ಸರ್ಕಾರದ ಆದೇಶದಂತೆ ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಆಹಾರವನ್ನು ಶುಚಿರುಚಿಯಾಗಿ ಕೈಗೆಟಕುವ ದರದಲ್ಲಿ ಒದಗಿಸಲು ಮಹಿಳೆಯರೇ ನಡೆಸುವ 50 ಕೆಫೆ ಸಂಜೀವಿನಿ (ಅಕ್ಕ ಕೆಫೆ) ಕ್ಯಾಂಟೀನ್‍ಗಳನ್ನು ಸ್ಥಾಪಿಸಲು ತಾತ್ವಿಕ ಅನುಮೋದನೆ ನೀಡಿ ಆದೇಶಿಸಿದೆ. ಅದರಂತೆ ಧಾರವಾಡ ಜಿಲ್ಲೆಯ ಜಿಲ್ಲಾ ಕೇಂದ್ರ ಸ್ಥಾನ ಮತ್ತು ಎಲ್ಲ ತಾಲೂಕು ಕೇಂದ್ರ ಸ್ಥಾನಗಳಲ್ಲಿ ಅಕ್ಕ ಕೆಫೆಯನ್ನು ಆರಂಭಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ನವಲಗುಂದ ಶಾಸಕರಾದ ಎನ್. ಎಚ್.ಕೋನರಡ್ಡಿ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ್ ಹಾಗೂ ಪ್ರಭಾರ ಜಿಲ್ಲಾಧಿಕಾರಿ ಆಗಿರುವ ಜಿ.ಪಂ. ಸಿಇಓ ಭುವನೇಶ ದೇವಿದಾಸ ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ ಆರ್ಯ, ಪ್ರೋಬೆಷನರಿ ಐಎಎಸ್ ಅಧಿಕಾರಿ ರೀತಿಕಾ ವರ್ಮಾ, ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಹಾಗೂ ಕಾಮದೇನು ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷೆ ರಾಜಶ್ರೀ ಮಂಜುನಾಥ ಪವಾಡಿ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ವಿವಿಧ ಸ್ವಸಹಾಯ ಸಂಘಗಳ ಸದಸ್ಯೆಯರು, ಸಾರ್ವಜನಿಕರು ಉಪಸ್ಥಿತರಿದ್ದರು.

ಅಕ್ಕ ಕೆಫೆ: ಅಕ್ಕ ಕೆಫೆ ಕಾರ್ಯಕ್ರಮವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಕಾರ್ಯಕ್ರಮದ ಮುಖ್ಯ ಉದ್ದೇಶವು ಮಹಿಳಾ ಸ್ವ-ಸಹಾಯ ಸಂಘಗಳಿಗೆ ಆಹಾರ ಪೂರೈಕೆ ಕ್ಷೇತ್ರದಲ್ಲಿ ಸುಸ್ಥಿರ ಜೀವನೋಪಾಯ ಚಟುವಟಿಕೆಯನ್ನು ಒದಗಿಸುವುದಾಗಿದೆ. ಪ್ರಮುಖವಾಗಿ ಈ ಅಕ್ಕ ಕೆಫೆ ಚಟುವಟಿಕೆಯಡಿ ಉತ್ತಮ ಗುಣಮಟ್ಟದ ಶುಚಿ-ರುಚಿ ಪೌಷ್ಟಿಕ ಆಹಾರವನ್ನು ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಪೂರೈಸುವ ದೂರದೃಷ್ಠಿಯೊಂದಿಗೆ ರಾಜ್ಯದಲ್ಲಿ ಅನುಷ್ಠಾನ ಗೊಳಿಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಗೆ ಎರಡು ಅಕ್ಕ ಕೆಫೆಗಳ ಸ್ಥಾಪನೆಗಾಗಿ ಸ್ಥಳ ಗುರುತಿಸಿ ಸರಕಾರಕ್ಕೆ ಬೇಡಿಕೆ ಸಲ್ಲಿಸಲಾಗಿತ್ತು. ಅದು ಅನುಮೋದನೆಗೊಂಡು ಅನುದಾನ ಬೀಡುಗಡೆಯಾಗಿದೆ. ಸದರಿ ಕೆಫೆ ಅನುಷ್ಠಾನಕ್ಕಾಗಿ ಜಿಲ್ಲಾ ಹಂತದಲ್ಲಿ ಜಂಟಿ ನಿರ್ದೇಶಕರು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆರವರ ಅಧ್ಯಕ್ಷತೆಯಲ್ಲಿ, 7 ಜನರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ.

ಸದರಿ ಸಮಿತಿ ನಿರ್ಣಯದಂತೆ ಆಸಕ್ತ ಸ್ವ-ಸಹಾಯ ಸಂಘಗಳ ಆಯ್ಕೆಗಾಗಿ ಪ್ರಕಟಣೆ ಹೊರಡಿಸಿ, ಸರ್ಕಾರದ ನಿಯಮಾನುಸಾರ ಆಯ್ಕೆ ಮಾಡಲಾಗುತ್ತದೆ. ನಂತರ ಆಯ್ಕೆ ಗೊಂಡ ಸ್ವ-ಸಹಾಯ ಸಂಘಗಳಿಗೆ ಪಾಕ ಪ್ರಾವಿಣ್ಯತೆ, ಶುಚಿತ್ವ , ನೈರ್ಮಲ್ಯ, ನಾಯಕತ್ವ, ನಿರ್ವಹಣೆ ಕುರಿತು ತರಬೇತಿ ನೀಡಲಾಗುತ್ತದೆ.

Tags: labor minister santhosh ladMinister Santhosh Ladsanthosh ladsanthosh lad about modisanthosh lad about pm modisanthosh lad angry onsanthosh lad latest newssanthosh lad latest statementsanthosh lad newssanthosh lad news todaysanthosh lad on bjpsanthosh lad questioned modisanthosh lad speechsanthosh lad statementsanthosh lad today newssanthosh lad vs narendra modiSantosh Ladsantosh lad agesantosh lad mlasantosh lad news
Previous Post

ʼಪಾಕಿಸ್ತಾನ ಜಿಂದಾಬಾದ್‌ʼ ಪೋಸ್ಟ್‌ ಹಂಚಿಕೊಂಡವನಿಗೆ ಜಾಮೀನು!

Next Post

Santhosh Lad: ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ವಿತರಣೆ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್

Related Posts

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
0

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು...

Read moreDetails

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

October 11, 2025

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

October 11, 2025
Next Post

Santhosh Lad: ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ವಿತರಣೆ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada