ದಕ್ಷಿಣಕನ್ನಡ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ, ಬೆಳ್ತಂಗಡಿ ತಾಲೂಕಿನಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ನೀಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.
ಹವಾಮಾನ ಇಲಾಖೆಯು ಇಂದಿನಿಂದ ಜುಲೈ 7ವರೆಗೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಎಚ್ಚರಿಕೆ ನೀಡಿದೆ.

ಜೂನ್ 29 ಮತ್ತು 30ರಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಹಲವೆಡೆ ಜಲಾವೃತವಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ನಿನ್ನೆ ರಾತ್ರಿಯಿಂದ ಮತ್ತೆ ವರುಣನ ಆರ್ಭಟ ಜೋರಾಗಿದ್ದು, ಬೆಳ್ತಂಗಡಿ ತಾಲೂಕಿನಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ನೀಡಿಲಾಗಿದೆ.