ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಬೆರಳೆಣಿಕೆಯ ದಿನಗಳು ಬಾಕಿ ಉಳಿದಿದೆ. ಈ ನಡುವೆ ಪಕ್ಷದಲ್ಲಿ ಟಿಕೆಟ್ ಸಿಗದೇ ಬಂಡಾಯ ಎದ್ದಿರುವ ಅಭ್ಯರ್ಥಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಕಾಂಗ್ರೆಸ್ನಲ್ಲಿ ಬಂಡಾಯ ಎದ್ದಿರುವ ನಾಯಕರು ಸುಮ್ಮನೆ ಚುನಾವಣೆಯಿಂದ ಹಿಂದೆ ಸರಿಯಬೇಕು ಹಾಗೂ ಪಕ್ಷ ಆಯ್ಕೆ ಮಾಡಿರುವ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು. ಇಲ್ಲವಾದಲ್ಲಿ ಪಕ್ಷ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
20ಕ್ಕೂ ಹೆಚ್ಚು ಕಾಂಗ್ರೆಸ್ ಬಂಡಾಯ ನಾಯಕರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇದರಿಂದ ಸಂಬಂಧ ಪಟ್ಟ ಕ್ಷೇತ್ರದಲ್ಲಿ ಮತ ವಿಭಜನೆಯಾಗುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಡಿಕೆಶಿ ಈ ಖಡಕ್ ವಾರ್ನಿಂಗ್ ನೀಡಿದ್ದಾರೆ.