ಬೆಂಗಳೂರು : ಸಿದ್ದರಾಮಯ್ಯ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಶಾಸಕಾಂಗದ ನಾಯಕರಾಗಿ ಈ ಮೂಲಕ ಡಿಕೆ ಶಿವಕುಮಾರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಎಐಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಘೋಷಿಸಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಇಂದು ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿ ಅವರನ್ನು ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಮಾಡಲು ಪ್ರಸ್ತಾಪಿಸಿತ್ತು. ಈ ಹೆಸರನ್ನು ಸಿದ್ದರಾಮಯ್ಯ ಒಪ್ಪಿದರು, ಪರಮೇಶ್ವರ್ ಅನುಮೋದಿಸಿದ್ದಾರೆ ಎಂದು ಹೇಳಿದ್ದಾರೆ.
ಈಗ ಡಿಕೆ ಶಿವಕುಮಾರ್ ಅಧಿಕೃತವಾಗಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಎಲ್ಲರೂ ಏನೇನೋ ಆಗುತ್ತದೆ, ದೊಡ್ಡ ಕೋಲಾಹಲವೇ ನಡೆಯುತ್ತದೆ ಎಂದು ಭಾವಿಸಿದ್ದರು, ಆದರೆ ಇದು ನಮ್ಮ ಕುಟುಂಬವಿದ್ದಂತೆ, ಕಾಂಗ್ರೆಸ್ ಅಂದ್ರೆ ಒಗ್ಗಟ್ಟು, ಇಲ್ಲಿ ಎಲ್ಲವೂ ಸರಳವಾಗಿ ನಡೆದಿದೆ. ಇದು ಕಾಂಗ್ರೆಸ್ ಪಕ್ಷದ ಹೆಮ್ಮೆಯಾಗಿದೆ, ಸಿದ್ದರಾಮಯ್ಯ ಬೆಂಬಲದಿಂದ 2028ಕ್ಕೆ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ವೇಣುಗೋಪಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.






