ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಾಗಾರ ಹಾಗೂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು, ಅಭಿವೃದ್ಧಿ ಸೇರಿದಂತೆ ಸರ್ಕಾರದ ಗ್ಯಾರಂಟಿ ಕಾರ್ಯಕ್ರಮಗಳ ಪ್ರಗತಿಯ ಬಗ್ಗೆ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು.

ಈ ವೇಳೆ ಬೆಂಗಳೂರು ದಕ್ಷಿಣ ಜಿಲ್ಲಾ ಉಸ್ತುವಾರಿ ಹಾಗೂ ಸಾರಿಗೆ ಸಚಿವರಾದ ಶ್ರೀ ರಾಮಲಿಂಗಾ ರೆಡ್ಡಿ, ಶಾಸಕರಾದ ಇಕ್ಬಾಲ್ ಹುಸೇನ್, ಸಿ.ಪಿ. ಯೋಗೇಶ್ವರ್ ಹಾಗೂ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಹೆಚ್.ಎಂ. ರೇವಣ್ಣ ಅವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
