ಮೈಸೂರು: ಬಿಜೆಪಿ ಹಾಗೂ ಜೆಡಿಎಸ್‌ನಲ್ಲಿ ನಾಯಕತ್ವದ ಕೊರತೆ ಎದುರಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಟಾಂಗ್ ನೀಡಿದರು.
ಜಗದೀಶ್ ಶೆಟ್ಟರ್ ಅವರು ಮತ್ತೆ ಬಿಜೆಪಿಗೆ ಸೇರುತ್ತಾರೆ ಎಂಬ ವಿಷಯದ ಬಗ್ಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರು ಬಿಟ್ಟು ಕಾಂಗ್ರೆಸ್‌ಗೆ ಬಂದಿದ್ದಾರೆ. ಅವರನ್ನೇ ವಾಪಸ್ ಪಕ್ಷಕ್ಕೆ ಸೇರಿಸಿಕೊಳ್ಳಲು ಬಿಜೆಪಿಯವರು ಸಂಪರ್ಕಿಸುತ್ತಿದ್ದಾರೆ ಅಂದರೆ ಏನರ್ಥ? ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದೆ. ಏಕೆ ನಿಮ್ಮಲ್ಲಿ ಲೀಡರ್‌ಗಳು ಇಲ್ವ? ಒಳ್ಳೆಯ ಕ್ಯಾಂಡಿಡೇಟ್‌ಗಳು ಇದ್ದರೆ ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಿಕೊಳ್ಳಿ ಎಂದು ಟೀಕಿಸಿದರು.
ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ಕಣ್ಣೀರು ಹಾಕಿಸಿದವರು ಯಾರು? ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದಿದ್ದು ಯಾರು? ಇದೆಲ್ಲವನ್ನೂ ರಾಜ್ಯ ರಾಜಕಾರಣ ನೋಡಿದೆ. ಈಗ ಅವರಿಬ್ಬರೂ ತಬ್ಬಿಕೊಳ್ಳುತ್ತಿದ್ದಾರೆ. ಕುಮಾರಸ್ವಾಮಿ ಅವರು ಮೈತ್ರಿ ಸರ್ಕಾರ ತೆಗೆದವರನ್ನೇ ತಬ್ಬಿಕೊಳ್ಳುತ್ತಿದ್ದಾರೆ ಎಂದರೆ ಎರಡೂ ಪಕ್ಷದಲ್ಲಿ ನಾಯಕತ್ವದ ಕೊರತೆ ಇದೆ ಅಂತ ಅರ್ಥ ಎಂದು ಕಿಡಿಕಾರಿದರು.
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
ಉಡುಪಿ: ವಿದ್ಯಾರ್ಥಿಗಳ ಜನಿವಾರ ತೆಗೆಯುವಂತೆ ಒತ್ತಾಯಿಸಿ ಕಾರಣವಿಲ್ಲದೇ ಮನಸೋ ಇಚ್ಛೆ ಬಸ್ಕಿ ಹೊಡೆಸಿರುವ ಶಿಕ್ಷಕನನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಕಾರ್ಕಳದ ಮೊರಾರ್ಜಿ ದೇಸಾಯಿ ಇಂಗ್ಲಿಷ್ ಮಾಧ್ಯಮ ವಸತಿ...
Read moreDetails












