• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜೈಲಿಗೆ ಹಾಕಿದರೂ ರಾಹುಲ್ ಗಾಂಧಿ ಹಿಂಜರಿಯುವುದಿಲ್ಲ-ಡಿ.ಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
December 1, 2025
in Top Story, ಕರ್ನಾಟಕ, ದೇಶ, ರಾಜಕೀಯ
0
ಜೈಲಿಗೆ ಹಾಕಿದರೂ ರಾಹುಲ್ ಗಾಂಧಿ ಹಿಂಜರಿಯುವುದಿಲ್ಲ-ಡಿ.ಕೆ ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ಮೇಲೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ʼರಾಜಕೀಯ ದ್ವೇಷಕ್ಕಾಗಿ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆʼ ಎಂದು ಆರೋಪಿಸಿದ್ದಾರೆ.

ADVERTISEMENT
PM Modi: ಸಂಸತ್‌ ಮುಂದೆ ಪ್ರಧಾನಿ ಮೋದಿ ಭಾಷಣ..! #pmmodi #parliament #parliamentsession

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼಇದು ಅನ್ಯಾಯ. ಯಾರಿಗೆ ಆಗಲಿ ಕಿರುಕುಳ ನೀಡುವುದಕ್ಕೆ ಒಂದು ಮಿತಿ ಇದೆ. ಈ ಪ್ರಕರಣದಲ್ಲಿ ಕಿರುಕುಳ ನೀಡುವ ಅಗತ್ಯವಿಲ್ಲ. ನ್ಯಾಷನಲ್ ಹೆರಾಲ್ಡ್ ಸೋನಿಯಾ ಗಾಂಧಿ ಅಥವಾ ರಾಹುಲ್ ಗಾಂಧಿ ಅವರ ಆಸ್ತಿಯಲ್ಲ. ಪಕ್ಷದ ಅಧ್ಯಕ್ಷ ಸ್ಥಾನದಲ್ಲಿದ್ದ ಕಾರಣಕ್ಕೆ ಅವರು ಈ ಸಂಸ್ಥೆಯ ಷೇರುಗಳ ಪಾಲಕರಾಗಿದ್ದರು. ನಾನು ಹಾಗೂ ಸಿಎಂ ಅವರೂ ಕೂಡ ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರಾಗಿದ್ದೇವೆ.

ಅಧ್ಯಕ್ಷರಾದ ಹಿನ್ನೆಲೆಯಲ್ಲಿ ಅವರ ಹೆಸರಿನಲ್ಲಿ ಕನಿಷ್ಠ 1-2 ಷೇರುಗಳು ಇರುತ್ತವೆ. ನಮ್ಮ ಅಧಿಕಾರ ಮುಗಿದ ನಂತರ ಈ ಷೇರುಗಳು ವರ್ಗಾವಣೆಯಾಗುತ್ತದೆ. ಅದೇ ರೀತಿ ನಮ್ಮ ನಾಯಕರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ ಕಾರಣ, ಜವಹಾರ್ ಲಾಲ್ ನೆಹರೂ ಅವರ ಕಾಲದಿಂದ ನಡೆದುಕೊಂಡು ಬಂದಿರುವ ಪ್ರತೀತಿಯಂತೆ ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಜವಾಬ್ದಾರಿ ಹೊತ್ತಿರುತ್ತಾರೆʼ ಎಂದು ವಿವರಿಸಿದರು.

Parliament wintersession:  ಲೋಕಸಭೆ ಕಲಾಪ ಆರಂಭದಲ್ಲೇ ಭಾರೀ ಗದ್ದಲ!  #pratidhvani #ParliamentWinterSession

ನ್ಯಾಷನಲ್ ಹೆರಾಲ್ಡ್ ವೈಯಕ್ತಿಕ ಆಸ್ತಿಯಲ್ಲ, ಪಕ್ಷದ ಆಸ್ತಿ

ʼಯಂಗ್ ಇಂಡಿಯಾ ಅಗಲಿ, ನ್ಯಾಷನಲ್ ಹೆರಾಲ್ಡ್ ಆಗಲಿ ನಮ್ಮ ವೈಯಕ್ತಿಕ ಆಸ್ತಿಯಲ್ಲ ಎಂದು ಅವರು ಈಗಾಗಲೇ ಘೋಷಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಆಸ್ತಿ. ಕಾಂಗ್ರೆಸ್ ಪಕ್ಷದ ಪಾಲಕರು ಅವರಾಗಿದ್ದಾರೆ. ಇಲ್ಲಿ ಅನೇಕ ಸದಸ್ಯರುಗಳು ಇದ್ದಾರೆ. ಮೊರಾರ್ಜಿ ಅವರು, ಅಹ್ಮದ್ ಪಟೇಲ್ ಅವರ ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಹಿತಕ್ಕಾಗಿ ಕೆಲವು ನಿರ್ಧಾರ ಕೈಗೊಳ್ಳಲಾಗಿತ್ತು. ಕೇಸರಿ ಅವರ ಕಾಲದಲ್ಲಿ ಪಕ್ಷ ಸಂಕಷ್ಟದ ಸಮಯದಲ್ಲಿದ್ದಾಗ, ಕಾಂಗ್ರೆಸ್ ಪಕ್ಷದ ನಾಯಕರಾದ ನಾವುಗಳು ಸೋನಿಯಾ ಗಾಂಧಿ ಅವರ ಮುಂದೆ ಹೋಗಿ ಪಕ್ಷದ ಜವಾಬ್ದಾರಿ ವಹಿಸಿಕೊಳ್ಳುವಂತೆ ಬೇಡಿಕೊಂಡೆವು. ಅವರು ನೇತೃತ್ವ ವಹಿಸಿದ ನಂತರ ನಮ್ಮ ಪಕ್ಷ ದೇಶದ ಅತ್ಯುತ್ತಮ ಆರ್ಥಿಕ ತಜ್ಞರ ಮುಂದಾಳತ್ವದಲ್ಲಿ 10 ವರ್ಷ ಆಡಳಿತ ನಡೆಸಿದೆ.

Virat Kohli: ಆಫ್ರಿಕಾ ವಿರುದ್ಧ ಸೆಂಚುರಿ ಸಿಡಿಸಿದ ಕಿಂಗ್‌ ಕೊಹ್ಲಿ..! #viratkohli #rohitsharma

ಈಗ ರಾಜಕೀಯವಾಗಿ ಕಿರುಕುಳ ನೀಡಲು ಈ ರೀತಿ ಮಾಡಲಾಗುತ್ತಿದೆ. ಇತಿಹಾಸ ಮರುಕಳಿಸಲಿದೆ. ಅವರು ರಾಹುಲ್ ಗಾಂಧಿ ಅವರನ್ನು ಜೈಲಿಗೆ ಹಾಕಿದರೂ ಅವರು ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. ಕೇಂದ್ರ ಸರ್ಕಾರದ ಈ ದ್ವೇಷ ರಾಜಕಾರಣ ಸರಿಯಲ್ಲ. ಇದರಿಂದ ಅವರಿಗೆ ಯಾವುದೇ ಪ್ರಯೋಜನ ಆಗುವುದಿಲ್ಲ ಎಂದು ಕೇಂದ್ರಕ್ಕೆ ಹೇಳಲು ಬಯಸುತ್ತೇನೆ. ಇದು ಕೇಂದ್ರ ಸರ್ಕಾರದ ನೈತಿಕತೆಯನ್ನಷ್ಟೇ ಕುಗ್ಗಿಸಲಿದೆ. ರಾಜಕೀಯವನ್ನು ನೇರಾನೇರವಾಗಿ ಜನರ ಮಧ್ಯೆ ಮಾಡೋಣ. ಚುನಾವಣೆಯಲ್ಲಿ ಹೋರಾಡೋಣ. ಆದರೆ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡು ಈ ರೀತಿ ಕಿರುಕುಳ ನೀಡುವುದು ಸರಿಯಲ್ಲʼ ಎಂದು ತಿಳಿಸಿದರು.

Tags: congressDK ShivakumarIndiaKarnatakanational herald casePoliticsRahul Gandhi
Previous Post

ಈಶಾ ಯೋಗ ಕೇಂದ್ರದಲ್ಲಿ ನೆರವೇರಿದ ನಟಿ ಸಮಂತಾ-ರಾಜ್ ನಿಡಿಮೋರು ವಿವಾಹ

Next Post

ನಾವು ಹುಟ್ಟುವಾಗಲೂ ಒಬ್ಬರೇ, ಸಾಯುವಾಗಲೂ ಒಬ್ಬರೇ: ಡಿ.ಕೆ ಶಿವಕುಮಾರ್‌

Related Posts

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?
ರಾಜಕೀಯ

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

by ಪ್ರತಿಧ್ವನಿ
April 27, 2026
0

ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೋರಾಟ ಕೇವಲ ಪಕ್ಷಗಳ ನಡುವಿನ ಪೈಪೋಟಿಯಲ್ಲ, ಪ್ರಾದೇಶಿಕ ಅಸ್ಮಿತೆ ಮತ್ತು ರಾಷ್ಟ್ರೀಯ ರಾಜಕೀಯದ ನಡುವಿನ ಸಂಘರ್ಷವಾಗಿ ರೂಪುಗೊಂಡಿದೆ. ಇದೇ ಹಿನ್ನೆಲೆಯಲ್ಲಿ...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
Next Post
ನಾವು ಹುಟ್ಟುವಾಗಲೂ ಒಬ್ಬರೇ, ಸಾಯುವಾಗಲೂ ಒಬ್ಬರೇ: ಡಿ.ಕೆ ಶಿವಕುಮಾರ್‌

ನಾವು ಹುಟ್ಟುವಾಗಲೂ ಒಬ್ಬರೇ, ಸಾಯುವಾಗಲೂ ಒಬ್ಬರೇ: ಡಿ.ಕೆ ಶಿವಕುಮಾರ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada