• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಇಂತಹ ನೀಚ ರಾಜಕಾರಣ ಹಿಂದೆಂದೂ ಕಂಡಿಲ್ಲ : ಡಿ.ಕೆ.ಶಿವಕುಮಾರ್ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
June 14, 2022
in ಕರ್ನಾಟಕ, ದೇಶ, ರಾಜಕೀಯ
0
ಇಂತಹ ನೀಚ ರಾಜಕಾರಣ ಹಿಂದೆಂದೂ ಕಂಡಿಲ್ಲ : ಡಿ.ಕೆ.ಶಿವಕುಮಾರ್ ಕಿಡಿ
Share on WhatsAppShare on FacebookShare on Telegram

‘ಬಿಜೆಪಿ ಸರ್ಕಾರ ಹೊಸ ಸಂಪ್ರದಾಯ ಆರಂಭಿಸುತ್ತಿದ್ದು, ಇದೇನು ತುರ್ತು ಪರಿಸ್ಥಿತಿಯೇ? ಇದು ಪ್ರಜಾಪ್ರಭುತ್ವದ ಸರ್ಕಾರವೇ? ಪ್ರತಿಭಟನೆ ಮಾಡುವುದು ನಮ್ಮ ಹಕ್ಕು. ಇ.ಡಿ. ಅಧಿಕಾರಿಗಳು ನನ್ನನ್ನು ಕರೆದುಕೊಂಡು ಹೋದಾಗ ಸಾವಿರಾರು ಜನ ನ್ಯಾಷನಲ್ ಕಾಲೇಜಿನಿಂದ ಫ್ರೀಡಂ ಪಾರ್ಕ್ ವರೆಗೂ ಮೆರವಣಿಗೆ ಬಂದಿದ್ದರು. ಆಗ ಯಾರಾದರೂ ಗಲಾಟೆ ಮಾಡಿದ್ದರಾ? ಅವರ ನೋವು, ದುಃಖ, ಬೇಸರವನ್ನು ವ್ಯಕ್ತಪಡಿಸಿದರು. ಇಡೀ ದೇಶದುದ್ದಗಲಕ್ಕೂ ನಮ್ಮ ನಾಯಕರು ತಮಗಾಗುತ್ತಿರುವ ಅನ್ಯಾಯವನ್ನು ಪ್ರಶ್ನಿಸುತ್ತಿದ್ದಾರೆ. ಪ್ರತಿಭಟನೆ ಮಾಡುವುದು ನಮ್ಮ ಹಕ್ಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ADVERTISEMENT

ನಿನ್ನೆ ಪ್ರತಿಭಟನೆ ಆರಂಭವಾಗುವ ಮುನ್ನವೇ ನಮ್ಮ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಬಿ ವಿ ಶ್ರೀನಿವಾಸ್ ಅವರನ್ನು ಬಂಧಿಸಲು ಪ್ರಯತ್ನಿಸಿದ್ದರು. ಅವರು ಪ್ರತಿಭಟನೆಗೆ ಹೋಗುವ ಮುನ್ನವೇ ವಶಕ್ಕೆ ಪಡೆಯಲು ಯತ್ನಿಸಿದರು. ಇಂದು ನಮ್ಮ ಪಾಲಿಗೆ ಪಕ್ಷದ ಕಚೇರಿ ಮನೆ, ದೇವಾಲಯ ಇದ್ದಂತೆ. ನಮ್ಮ ನಾಯಕರು ಎಐಸಿಸಿ ಕಚೇರಿಗೆ ಹೋದರೆ, ಅಲ್ಲೇ ಅವರನ್ನು ಬಂಧಿಸುತ್ತೇನೆ ಎಂದರೆ ಇದು ಅನ್ಯಾಯವಲ್ಲವೇ? ನಮ್ಮ ನಾಯಕರು ಯಾವ ಅಪರಾಧ ಮಾಡಿದ್ದಾರೆ? ಎಂದು ಕಿಡಿಕಾರಿದ್ದಾರೆ.

ಇಂತಹ ನೀಚ ರಾಜಕಾರಣ ಹಿಂದೆಂದೂ ಕಂಡಿಲ್ಲ. ಇದು ತುರ್ತು ಪರಿಸ್ಥಿತಿಗೂ ಮೀರಿದ ಹೀನಾಯ ಸ್ಥಿತಿ. ನಾವಿದನ್ನು ಖಂಡಿಸುತ್ತೇವೆ. ನಮ್ಮ ಹೋರಾಟ ಮುಂದುವರಿಸುತ್ತೇವೆ. ನಮ್ಮ ನಾಯಕರು ತಪ್ಪು ಮಾಡಿಲ್ಲ. ದೇಶದ ಸ್ವಾತಂತ್ರ್ಯ ಹೋರಾಟ ಸಮಯದಲ್ಲಿ ನೆಹರೂ, ತಿಲಕರು ಹಾಗೂ ವಲ್ಲಭಬಾಯಿ ಪಟೇಲರು ಸೇರಿ ಆರಂಭಿಸಿದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಉಳಿಸಿಕೊಂಡು ಬಂದಿದ್ದೇವೆ. ಇದು ಖಾಸಗಿ ಆಸ್ತಿಯಲ್ಲ, ದೇಶದ ಆಸ್ತಿ. ನಮ್ಮ ನಾಯಕರು ಕೇವಲ ಟ್ರಸ್ಟಿಯಾಗಿದ್ದಾರೆ ಅಷ್ಟೇ ಎಂದಿದ್ದಾರೆ.

ಖರ್ಗೆ ಅವರು ಈಗ ಟ್ರಸ್ಟಿಯಾಗಿದ್ದಾರೆ. ಅವರೇನು ಅದರ ಆಸ್ತಿನೆಲ್ಲಾ ಬರೆದುಕೊಂಡು ಬಂದಿದ್ದಾರಾ? ನೆಹರೂ ಕುಟುಂಬದವರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದ್ದು, ಇದಕ್ಕೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ಹೆದರುವುದಿಲ್ಲ.

ತಪ್ಪು ಮಾಡಿಲ್ಲ ಎಂದಾದರೆ ವಿಚಾರಣೆ ಎದುರಿಸಬೇಕಲ್ಲವೇ ಎಂಬ ಬಿಜೆಪಿ ವಾದದ ಬಗ್ಗೆ ಕೇಳಿದ ಪ್ರಶ್ನೆಗೆ, ‘ರಾಹುಲ್ ಗಾಂಧಿ ಅವರನ್ನು 10 ಗಂಟೆಗಳ ಕಾಲ ವಿಚಾರಣೆ ನಡೆಸುವ ಅಗತ್ಯ ಏನಿದೆ? ಎಲ್ಲ ವಿವರಗಳನ್ನು ಚುನಾವಣೆ ಅಫಿಡವಿಟ್ ನಲ್ಲಿ ನೀಡಿರಲಿಲ್ಲವೇ? ನಾನೇನು ಮಾಡಿದ್ದೆ ಎಂದು ನನ್ನನ್ನು 10 ದಿನ ವಿಚಾರಣೆ ಮಾಡಿದ್ದರು? ನಾನು ಇನ್ನು ಸಾಕಷ್ಟು ವಿಚಾರಗಳ ಬಗ್ಗೆ ಮಾತನಾಡಿಲ್ಲ. ಯಾವ ರೀತಿ ಕಿರುಕುಳ ನೀಡಿದ್ದಾರೆ ಎಂಬುದು ನನಗಷ್ಟೇ ಗೊತ್ತಿದೆ. ಬಿಜೆಪಿ ನಾಯಕರ ಮನೆ ಮೇಲೆ ದಾಳಿ ಆದಾಗ ಎಷ್ಟು ಹಣ ಸಿಕ್ಕವು? ಅವರ ವಿರುದ್ಧ ಪ್ರಕರಣ ಯಾಕೆ ಇಡಿಗೆ ಹೋಗಿಲ್ಲ?’ ಎಂದು ಪ್ರಶ್ನಿಸಿದ್ದಾರೆ.

ನಿನ್ನೆಯ ಪಾದಯಾತ್ರೆ ತಿಹಾರ್ ಜೈಲಿಗೆ ಹೋಗುತ್ತೆ ಎಂಬ ಸಚಿವ ಅಶ್ವತ್ಥ್ ನಾರಾಯಣ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ‘ಅವರು ದೇಶದಲ್ಲೇ ಅತ್ಯಂತ ಭ್ರಷ್ಟ ಶಿಕ್ಷಣ ಸಚಿವ. ಉಪಕುಲಪತಿಗಳಿಂದ ಪ್ರತಿ ಹುದ್ದೆ ನೇಮಕಾತಿಗೂ ಹಣ ಪಡೆದಿದ್ದಾರೆ. ಬೇರೆ ವಿಚಾರದಲ್ಲಿ ಹಣ ಪಡೆದದ್ದು, ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಹಣ ಪಡೆದಿದ್ದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸುಮ್ಮನೆ ಇದ್ದಾರೆ. ಆತ ಏನಾದರೂ ಹೇಳಲಿ, ಮಾತನಾಡಲಿ. ಆ ಗಂಡಿಗೆ ಈಗ ಉತ್ತರ ಕೊಡುವುದಿಲ್ಲ. ಸಮಯ ಬಂದಾಗ ಕೊಡುತ್ತೇನೆ ಎಂದು ಸಚಿವ ಅಶ್ವತ್ಥನಾರಾಯಣಗೆ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ನವರು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂಬ ಸಿ.ಟಿ ರವಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಶಿವಕುಮಾರ್, ‘ಯಾರು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಜನಕ್ಕೆ ಗೊತ್ತಾಗುತ್ತಿಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

1 ಕೋಟಿ ಹುದ್ದೆ ಖಾಲಿ ಇವೆ: ಪ್ರಧಾನಿ ಮೋದಿಗೆ ವರುಣ್ ಗಾಂಧಿ ಟಾಂಗ್

Next Post

ರಥ ಚಕ್ರ ಮುರಿದು ಇಬ್ಬರು ಸಾವು, ಮೂವರ ಸ್ಥಿತಿ ಗಂಭೀರ!

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
Next Post
ರಥ ಚಕ್ರ ಮುರಿದು ಇಬ್ಬರು ಸಾವು, ಮೂವರ ಸ್ಥಿತಿ ಗಂಭೀರ!

ರಥ ಚಕ್ರ ಮುರಿದು ಇಬ್ಬರು ಸಾವು, ಮೂವರ ಸ್ಥಿತಿ ಗಂಭೀರ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada