Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ರಾಜಕೀಯ ನಿಂತ ನೀರಲ್ಲ, ಇಲ್ಲಿ ಯಾರೂ ಶಾಶ್ವತವಲ್ಲ : ಡಿ.ಕೆ.ಶಿವಕುಮಾರ್‌

ಪ್ರತಿಧ್ವನಿ

ಪ್ರತಿಧ್ವನಿ

December 1, 2022
Share on FacebookShare on Twitter

ಸಂವಿಧಾನಕ್ಕೆ ತಿದ್ದುಪಡಿ ತರುವ ಮೂಲಕ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ದೊರಕಿಸಿಕೊಟ್ಟು 10 ವರ್ಷ ಪೂರ್ಣಗೊಂಡಿದ್ದು, ಇದರಿಂದ ಈ ಭಾಗದ ಜನರಿಗೆ ಆಗಿರುವ ಅನುಕೂಲಗಳ ಬಗ್ಗೆ ಅರಿವು ಮಾಡಿಕೊಡಬೇಕು. ನಮ್ಮ ಪಕ್ಷದ ಆಚಾರ, ವಿಚಾರ ತಿಳಿಸಬೇಕು. ಈ ನಿಟ್ಟಿನಲ್ಲಿ ಇಂದು ಪೂರ್ವಭಾವಿ ಸಭೆ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಕೋಲಾರದಲ್ಲಿ ನಿಲ್ಲಬೇಕೋ ಓಡಿ ಹೋಗಬೇಕೋ ನನಗೆ ಬಿಟಿದ್ದು, ಯಡುಯೂರಪ್ಪ ಯಾರು ಹೇಳೋಕೆ : Siddaramaiah | yediyurappa

Nalin Kumar Kateel..ಒಬ್ಬ ವಿದೂಷಕ : Siddaramaiah

Rameshjarkiholi Video ಬಿಡುಗಡೆ ಮಾಡಿದ್ದು D K Shivakumar ಅಂತೆ ..ನನಗೆ ಏನು ಗೊತ್ತಿಲ್ಲ : Siddaramaiah

ಇಡೀ ಕಲ್ಯಾಣ ಕರ್ನಾಟಕ ಭಾಗದ ಜನ ರಾಹುಲ್ ಗಾಂಧಿ ಅವರ ಭಾರತ ಐಕ್ಯತಾ ಯಾತ್ರೆ ಸಂದರ್ಭದಲ್ಲಿ ಅತ್ಯಂತ ಉತ್ಸಾಹ ಹಾಗೂ ಪ್ರೀತಿ ತೋರಿದ್ದಾರೆ. ಬಳ್ಳಾರಿಯಲ್ಲಿ ಐತಿಹಾಸಿಕ ಪಕ್ಷದ ಶಕ್ತಿ ಪ್ರದರ್ಶನ ಮಾಡಲಾಗಿತ್ತು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅವರ ಭರವಸೆ ಕೇವಲ ಕಾಗದದ ಮೇಲೆ ಉಳಿದಿದ್ದು, ಕಾರ್ಯರೂಪಕ್ಕೆ ಬಂದಿಲ್ಲ. ಹೀಗಾಗಿ ಇದೇ 10 ರಂದು 371 ಜೆ ತಿದ್ದುಪಡಿ ಜಾರಿಗೆ ಪರಿಶ್ರಮ ಹಾಗೂ ಅದು ಜಾರಿಯಾದ ನಂತರ ಜನರ ಬದುಕಿನಲ್ಲಿ ಆಗುವ ಬದಲಾವಣೆ ಬಗ್ಗೆ ತಿಳಿಸಲಾಗುವುದು.

ಬಿಜೆಪಿ ಕೇವಲ ಭಾವನೆಗಳ ವಿಚಾರದ ಮೇಲೆ ರಾಜಕೀಯ ಮಾಡುತ್ತದೆ. ನಮ್ಮ ಪಕ್ಷ ಜನರ ಬದುಕಿನ ಬಗ್ಗೆ ಚಿಂತನೆ ನಡೆಸಿದೆ. ಕಲ್ಬುರ್ಗಿ ಕಾರ್ಯಕ್ರಮದಲ್ಲಿ ಯಾರೆಲ್ಲಾ ರಾಷ್ಟ್ರೀಯ ನಾಯಕರು ಭಾಗಿಯಾಗಲಿದ್ದಾರೆ ಎಂಬ ಪ್ರಶ್ನೆಗೆ ಈ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಆಹ್ವಾನ ನೀಡುತ್ತೇವೆ ಎಂದರು.

ಕಾಂಗ್ರೆಸ್ ನಲ್ಲಿ ಬಹಳಷ್ಟು ರೌಡಿಗಳಿದ್ದು, ಲೆಕ್ಕ ಹಾಕಿ ಹೇಳಲಿ ಎಂಬ ಬಿಜೆಪಿ ಮುಖಂಡರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ ಈಗ ಅವರು ಯಾರ ಜತೆ ಪ್ರೀತಿ, ವಿಶ್ವಾಸ ಹೊಂದಿದ್ದಾರೆ, ಅವರ ಸಂಸ್ಕೃತಿ ಏನು ಎಂಬುದು ಎಲ್ಲವೂ ಬಹಿರಂಗವಾಗುತ್ತಿದೆ. ಇದೇನು ಹೊಸತಲ್ಲ. ತಮ್ಮಲ್ಲಿರುವ ಕಲಹ ಬಿಟ್ಟು ಬೇರೆಯವರ ಕಲಹದ ಬಗ್ಗೆ ಮಾತನಾಡುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.

ಪಕ್ಷಕ್ಕೆ ಬೇರೆ ಪಕ್ಷದ ನಾಯಕರ ಸೇರ್ಪಡೆ ಬಗ್ಗೆ ಮಾತನಾಡಿ ನಮ್ಮ ಪಕ್ಷದ ಸಿದ್ಧಾಂತ ಹಾಗೂ ನಾಯಕತ್ವ ಒಪ್ಪಿ ಯಾರೆಲ್ಲಾ ಷರತ್ತುರಹಿತವಾಗಿ ಪಕ್ಷ ಸೇರಲು ಬಯಸುತ್ತಾರೋ ಅವರು ಅರ್ಜಿ ಹಾಕಲಿ. ಇದುವರೆಗೂ ನಾವು ಯಾರ ಜತೆ ಸಂಪರ್ಕ ಹೊಂದಿದ್ದೇವೆ ಎಂಬುದರ ಬಗ್ಗೆ ಈಗ ಬಹಿರಂಗಪಡಿಸುವುದಿಲ್ಲ. ಈ ವಿಚಾರವಾಗಿ ಅಲ್ಲಂ ವೀರಭದ್ರಪ್ಪ ಅವರ ಸಮಿತಿ ಇದೆ. ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಂದ ಹಿಡಿದು ಸ್ಥಳೀಯ ಮಟ್ಟದ ನಾಯಕರವರೆಗೆ ಎಲ್ಲರ ಜತೆ ಚರ್ಚೆ ಮಾಡಿ, ಪಕ್ಷಕ್ಕೆ ಧಕ್ಕೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಪಕ್ಷದ ನಾಯಕರಲ್ಲಿ ಅಂತರ ಹೆಚ್ಚಾಗುತ್ತಿದೆಯಲ್ಲಾ ಎಂಬ ಪ್ರಶ್ನೆಗೆ, ನಮ್ಮಲ್ಲಿ ಯಾವುದೇ ಅಂತರವಿಲ್ಲ. ಇದನ್ನು ಬಿಜೆಪಿ ಹಾಗೂ ಮಾಧ್ಯಮದವರು ಸೃಷ್ಟಿಸುತ್ತಿದ್ದಾರೆ. ರಾಜಕೀಯ ನಿಂತ ನೀರಲ್ಲ. ಇಲ್ಲಿ ಯಾರೂ ಶಾಶ್ವತವಲ್ಲ. ಪಿಜಿಆರ್ ಸಿಂಧ್ಯಾ ಅವರ ಜತೆ ನಾನು ಚುನಾವಣೆಯಲ್ಲಿ ಹೋರಾಡಿದರೂ, ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿಲ್ಲವೇ?. ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರ ಮಧ್ಯೆ ಅಂತರ ಇದ್ದರೂ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವಂತೆ ಪತ್ರ ನೀಡಲಿಲ್ಲವೇ? ಬಿಜೆಪಿಯಲ್ಲಿ ಬಿರುಕಿದ್ದು, ನಮ್ಮಲ್ಲಿ ಬಿರುಕು ಮೂಡಿಸಲು ಯತ್ನಿಸುತ್ತಿದ್ದಾರೆ. ಅವರ ಪಕ್ಷದಲ್ಲಿ ಜಗದೀಶ್ ಶೆಟ್ಟರ್, ಸದಾನಂದಗೌಡರು, ಬಸನಗೌಡ ಯತ್ನಾಳ್, ಯಡಿೂರಪ್ಪನವರ ಗುಂಪು ಇಲ್ಲವೇ. ಅವರ ಪಕ್ಷದಲ್ಲಿ ಸಾಕಷ್ಟು ಸಮಸ್ಯೆಗಳಿವೆ ಎಂದು ಚಾಟಿ ಬೀಸಿದ್ದಾರೆ.

ಸಿದ್ದರಾಮಯ್ಯ ಅವರು ಯಾವ ಕ್ಷೇತ್ರಕ್ಕೆ ಟಿಕೆಟ್ ಬೇಕು ಎಂದು ಅರ್ಜಿ ಹಾಕಿದ್ದಾರೆ ಎಂದು ಕೇಳಿದಾಗ, ‘ ಹೈಕಮಾಂಡ್ ಸೂಚಿಸಿದ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಅವರು ಪಕ್ಷದ ಹೈಕಮಾಂಡ್ ಗೆ ಜವಾಬ್ದಾರಿ ಬಿಟ್ಟಿದ್ದಾರೆ. ನಮ್ಮ ಪಕ್ಷದಲ್ಲಿ ಈ ಮಟ್ಟದ ಶಿಸ್ತು ಇದೆ. ಯತೀಂದ್ರ ಅವರು ಹೇಳಿದ್ದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

ರೌಡಿ ನಾಗ ಸಚಿವ ಸೋಮಣ್ಣ ಅವರ ನಿವಾಸಕ್ಕೆ ಭೇಟಿ ನೀಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಅವರ ಪಕ್ಷದಲ್ಲಿ ಕಾರ್ಯಕರ್ತರು ಇಲ್ಲ. ಹೀಗಾಗಿ ರೌಡಿಗಳನ್ನು ಸೇರಿಸಿಕೊಳ್ಳುತ್ತಿದ್ದಾರೆ. ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸೇರುತ್ತಿದ್ದು, ಹೀಗಾಗಿ ಅವರು ರೌಡಿಗಳನ್ನು ಸೇರಿಸಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

ರಾಜಕೀಯ

ಕಾಂಗ್ರೆಸ್ ನವರಿಗೆ ಸೋಲಿನ ಭೀತಿ ಶುರುವಾಗಿದೆ

by ಪ್ರತಿಧ್ವನಿ
January 28, 2023
Ramesh Jarkiholi: ಡಿಕೆಗೆ ನನ್ನ ಕಂಡ್ರೆ ಹೆದರಿಕೆ, ನಾನೊಬ್ಬನೇ ಅವನನ್ನು ಎದರಿಸೋನು | Pratidhvani
ರಾಜಕೀಯ

Ramesh Jarkiholi: ಡಿಕೆಗೆ ನನ್ನ ಕಂಡ್ರೆ ಹೆದರಿಕೆ, ನಾನೊಬ್ಬನೇ ಅವನನ್ನು ಎದರಿಸೋನು | Pratidhvani

by ಪ್ರತಿಧ್ವನಿ
January 25, 2023
ಅದಾನಿ ಬೆದರಿಕೆಗೆ ಬಗ್ಗಲ್ಲ, ನಮ್ಮ ವಿರುದ್ಧ ಮೊಕದ್ದಮೆ ಹೂಡಲಿ: ಹಿಂಡೆನ್‌ಬರ್ಗ್ ರಿಸರ್ಚ್ ಸವಾಲು
ವಿದೇಶ

ಅದಾನಿ ಬೆದರಿಕೆಗೆ ಬಗ್ಗಲ್ಲ, ನಮ್ಮ ವಿರುದ್ಧ ಮೊಕದ್ದಮೆ ಹೂಡಲಿ: ಹಿಂಡೆನ್‌ಬರ್ಗ್ ರಿಸರ್ಚ್ ಸವಾಲು

by ಪ್ರತಿಧ್ವನಿ
January 26, 2023
| JAGGESH | ಟಗರು ಸಿದ್ದರಾಮಯ್ಯ ಗೆ ನವರಸ ನಾಯಕ ಜಗ್ಗೇಶ್ ಟಕ್ಕರ್..| SIDDARAMAIAH | BJP | CONGRESS |
ರಾಜಕೀಯ

| JAGGESH | ಟಗರು ಸಿದ್ದರಾಮಯ್ಯ ಗೆ ನವರಸ ನಾಯಕ ಜಗ್ಗೇಶ್ ಟಕ್ಕರ್..| SIDDARAMAIAH | BJP | CONGRESS |

by ಪ್ರತಿಧ್ವನಿ
January 24, 2023
Veerappa : ಪಂಜಾಬ್ ಗಿಂತ ಹಸಿರುಭೂಮಿ ಕೋಲಾರ ಆಗುತ್ತೆ ನಮ್ ಸಿದ್ದರಾಮಯ್ಯ ಮಾಡ್ತಾರೆ | Prajadhwani Yatre
ರಾಜಕೀಯ

Veerappa : ಪಂಜಾಬ್ ಗಿಂತ ಹಸಿರುಭೂಮಿ ಕೋಲಾರ ಆಗುತ್ತೆ ನಮ್ ಸಿದ್ದರಾಮಯ್ಯ ಮಾಡ್ತಾರೆ | Prajadhwani Yatre

by ಪ್ರತಿಧ್ವನಿ
January 24, 2023
Next Post
ನನ್ನ ಜೀವನದಲ್ಲಿ ರೌಡಿಗಳ ಪರಿಚಯವೇ ಇಲ್ಲ ಅದರ ಅವಶ್ಯಕತೆಯೂ ನನಗಿಲ್ಲ : ವಿ.ಸೋಮಣ್ಣ

ನನ್ನ ಜೀವನದಲ್ಲಿ ರೌಡಿಗಳ ಪರಿಚಯವೇ ಇಲ್ಲ ಅದರ ಅವಶ್ಯಕತೆಯೂ ನನಗಿಲ್ಲ : ವಿ.ಸೋಮಣ್ಣ

ಡಿಸೆಂಬರ್‌ 2ಕ್ಕೆ ತೆರೆ ಮೇಲೆ ಹಿಟ್ -2

ಡಿಸೆಂಬರ್‌ 2ಕ್ಕೆ ತೆರೆ ಮೇಲೆ ಹಿಟ್ -2

ಪ್ರಾಯಶಃ ಸ್ನೇಹಿತರಿಗಾಗಿ ಮಾಡಿದ ಸಿನಿಮಾ : Ranjith Rao | Krishnaa Bhat | Ranjith Rao | Arha Creations

ಪ್ರಾಯಶಃ ಸ್ನೇಹಿತರಿಗಾಗಿ ಮಾಡಿದ ಸಿನಿಮಾ : Ranjith Rao | Krishnaa Bhat | Ranjith Rao | Arha Creations

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist