Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಜನ ಬಿಜೆಪಿ ಸರ್ಕಾರವನ್ನು ಕಿತ್ತು ಹಾಕಲು ಇಚ್ಛಿಸಿದ್ದಾರೆ : ಡಿ.ಕೆ.ಶಿವಕುಮಾರ್‌

ಪ್ರತಿಧ್ವನಿ

ಪ್ರತಿಧ್ವನಿ

August 7, 2022
Share on FacebookShare on Twitter

ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಅದರ ಅಂಗವಾಗಿ ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಪ್ರವಾಸ ಮಾಡುತ್ತಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

BSPಯಿಂದ ಲೋಕಸಭಾ ಸಂಸದ ಡ್ಯಾನಿಶ್‌ ಅಲಿ ಉಚ್ಛಾಟನೆ

ಪಕ್ಷ ವಿರೋಧಿ ಚಟುವಟಿಕೆ- JDSನಿಂದ ಸಿ.ಎಂ.ಇಬ್ರಾಹಿಂ ಉಚ್ಛಾಟನೆ

‘ BJP ಅಂದರೆ ಬಕೆಟ್ ಜನತಾ ಪಾರ್ಟಿ’

ಸರ್ಕಾರ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಅವಕಾಶ ತಪ್ಪಿಸಲು ಬೇಕಾಬಿಟ್ಟಿಯಾಗಿ ಮೀಸಲಾತಿ ಪಟ್ಟಿ ಪ್ರಕಟಿಸಿದೆ. ಇದರ ವಿರುದ್ಧ ನಮ್ಮ ಪಕ್ಷದ ನಾಯಕರು ಪ್ರತಿಭಟಿಸಿ, ನಗರಾಭಿವೃದ್ಧಿ ಇಲಾಖೆ ಕಚೇರಿಗೆ ಬಿಜೆಪಿ ಕಚೇರಿ ಎಂದು ನಾಮಫಲಕ ಹಾಕಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರಕಾರ ಮಾಡಿದ್ದು ತಪ್ಪು ಎಂದು ಹೇಳಬೇಕಾಗಿರುವುದು ನಮ್ಮ ಕರ್ತವ್ಯ ಎಂದಿದ್ದಾರೆ.

ಹಿಂದುಳಿದವರು, ಪರಿಶಿಷ್ಟರು, ಮಹಿಳೆಯರಿಗೆ ನೀಡಬೇಕಾದ ಮೀಸಲಾತಿಯನ್ನು ಸರಿಯಾಗಿ ಹಂಚಿಕೆ ಮಾಡಿಲ್ಲ. ಬೊಮ್ಮನಹಳ್ಳಿ ಕ್ಷೇತ್ರದ 14 ವಾರ್ಡ್ ಗಳ ಪೈಕಿ 9 ವಾರ್ಡ್ ಗಳಿಗೆ ಮಹಿಳಾ ಮೀಸಲಾತಿ ನೀಡಿದ್ದಾರೆ. ಜಯನಗರದಲ್ಲಿ ಒಂಬತ್ತಕ್ಕೆ ಎಂಟು ವಾರ್ಡ್, ಬಿಟಿಎಂ ಲೇಔಟ್ ನಲ್ಲಿ 8 ವಾರ್ಡ್ ಹಾಗೂ ಗಾಂಧಿ ನಗರದಲ್ಲಿ 7 ಕ್ಕೆ 7 ವಾರ್ಡ್ ಗಳಲ್ಲಿ, ಚಾಮರಾಜಪೇಟೆಯ 6 ವಾರ್ಡ್ ಗಳಲ್ಲಿ ಮಹಿಳೆಯರಿಗೆ ಮೀಸಲು ನೀಡಿದ್ದಾರೆ. ಕಾಂಗ್ರೆಸ್ ಶಾಸಕರ ಕ್ಷೇತ್ರಗಳ ಒಟ್ಟು 93 ವಾರ್ಡ್ ಗಳ ಪೈಕಿ 76 ಕಡೆ ಮಹಿಳೆಯರಿಗೆ ಮೀಸಲಾತಿ ನೀಡಿದ್ದಾರೆ. ಇದು ನ್ಯಾಯವೋ, ಅನ್ಯಾಯವೋ ನೀವೇ ತೀರ್ಮಾನಿಸಿ.

ನೆಹರು ಅವರು ಕೂಡ ಅಲಹಾಬಾದ್ ಪಾಲಿಕೆ ಅಧ್ಯಕ್ಷರಾಗಿ ಕೆಲಸ ಮಾಡಿದವರು. ಕೆಂಗಲ್ ಹನುಮಂತಯ್ಯ ಅವರು ಬೆಂಗಳೂರು ಪಾಲಿಕೆ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ವಿಲಾಸ್ ರಾವ್ ದೇಶ್ ಮುಖ್ ಕೂಡ ಪಂಚಾಯ್ತಿ ಅಧ್ಯಕ್ಷರಾಗಿದ್ದರು. ಬಿ.ಡಿ ಜತ್ತಿ ಅವರೂ ಕೂಡ ಪಂಚಾಯ್ತಿ ಅಧ್ಯಕ್ಷರಾಗಿದ್ದರು. ಈಗಿನ ರಾಷ್ಟ್ರಪತಿಗಳು ಕೂಡ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಯಾಗಿ ಕೆಲಸ ಮಾಡಿದ್ದಾರೆ. ಭವಿಷ್ಯದಲ್ಲಿ ಶಾಸಕರಾಗುವವರಿಗೆ ಇದು ಬಹುಮುಖ್ಯ ಚುನಾವಣೆ.

ಬೆಂಗಳೂರಿನಲ್ಲಿ ನಾವು ಸಮೀಕ್ಷೆ ಮಾಡಿದ್ದು ಜನ ದೊಡ್ಡ ಬದಲಾವಣೆಯನ್ನು ಬಯಸಿದ್ದಾರೆ. ಬಿಜೆಪಿ ಸರ್ಕಾರವನ್ನು ಕಿತ್ತು ಹಾಕಲು ಅವರು ಇಚ್ಛಿಸಿದ್ದಾರೆ. ಒಂದು ಕಾಲದಲ್ಲಿ ಬಸವನಗುಡಿ, ರಾಜಾಜಿನಗರದಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದರು. ಎಸ್.ಎಂ. ಕೃಷ್ಣ ಅವರ ಸರ್ಕಾರದ ನಂತರ ನಮ್ಮ ಪಕ್ಷದವರು ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು, ನಂತರ ಶಾಸಕರಾದ ಇತಿಹಾಸ ಇದೆ.

ನಾವು ಮಹಿಳೆಯರಿಗೆ ಮೀಸಲಾತಿ ವಿರೋಧಿಸುವುದಿಲ್ಲ. ಅವರಿಗೆ ರಾಜಕೀಯ ಶಕ್ತಿ ನೀಡಬೇಕೆಂಬುದು ನಮ್ಮ ಉದ್ದೇಶ. ಆದರೆ ಅವಕಾಶವನ್ನು ಸಮಾನವಾಗಿ ಹಂಚಬೇಕು. ಆದರೆ ಮೀಸಲಾತಿಯನ್ನು ಒಂದು ಕಡೆಗೆ ಕೇಂದ್ರೀಕರಿಸಿರುವುದು ಬಹಳ ಅನ್ಯಾಯ.

ಈ ಬಗ್ಗೆ ಹೋರಾಟ ಮುಂದುವರಿಸಿ, ಅಕ್ಷೇಪ ಸಲ್ಲಿಸಿ ಎಂದು ನಾವು ತಿಳಿಸಿದ್ದೇವೆ. ಮತದಾರರ ಪಟ್ಟಿಯಿಂದ ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ಪರಿಶಿಷ್ಟ ಮತದಾರರನ್ನು ತೆಗೆದುಹಾಕಲಾಗಿದೆ. ಹೀಗಾಗಿ ಪಕ್ಷದ ಕಾರ್ಯಕರ್ತರಿಗೆ ಪಟ್ಟಿ ಪರಿಶೀಲನೆ ಮಾಡುವಂತೆ ಸೂಚನೆ ನೀಡಿದ್ದೇನೆ. ಈ ಬಗ್ಗೆ ಪ್ರತ್ಯೇಕ ಸಭೆ ಮಾಡುತ್ತೇವೆ. ಕಾಂಗ್ರೆಸ್ ಪಕ್ಷ ಪಾಲಿಕೆ ಚುನಾವಣೆಗೆ ಸಿದ್ಧವಾಗಿದ್ದು, ಚುನಾವಣೆ ಎದುರಿಸಲು ತಯಾರಿ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

75ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಲು ನಮ್ಮೆಲ್ಲರಿಗೂ ಅವಕಾಶ ಸಿಕ್ಕಿದೆ. ಆ. 15 ರಂದು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದವರೆಗೂ ರಾಷ್ಟ್ರಧ್ವಜ ಹಿಡಿದು ಸ್ವಾತಂತ್ರ್ಯ ನಡಿಗೆ ಹಮ್ಮಿಕೊಳ್ಳಲಾಗಿದೆ.

ಸಂಜೆ ಸಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಇದು ರಾಜಕೀಯೇತರ ಕಾರ್ಯಕ್ರಮ. ಇದರಲ್ಲಿ ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳು, ನೌಕರರು, ಕಲಾವಿದರು, ಬೇರೆ ಬೇರೆ ಕ್ಷೇತ್ರಗಳ ಎಲ್ಲರಿಗೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಳ್ಳಬೇಕೆಂದು ಮನವಿ ಮಾಡುತ್ತೇನೆ.

ಈಗಾಗಲೇ ಸುಮಾರು 29,000 ಮಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ನೊಂದಣಿ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವವರು ರೈಲ್ವೇ ಸೇವೆ ಹಾಗೂ ಮೆಟ್ರೋ ಮಾರ್ಗಗಳನ್ನು ಬಳಸಿಕೊಳ್ಳಬೇಕು. ಆದಷ್ಟು ವಾಹನ ಬಳಕೆ ಕಡಿಮೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಆಗಸ್ಟ್ 15 ರಂದು ಮೆಟ್ರೋ ಪ್ರಯಾಣಿಕರಿಗೆ ಶೇ.50ರಷ್ಟು ವಿನಾಯಿತಿ ನೀಡಬೇಕು ಎಂದು ನಾನು ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಇದು ಈ ದೇಶದ ಸ್ವಾತಂತ್ರ್ಯದ ಹಬ್ಬವಾಗಿದೆ. ಇದನ್ನು ಸಂಭ್ರಮದಿಂದ ಆಚರಿಸಬೇಕು. ಈ ಅವಕಾಶ ನಿಮಗೆ ಮತ್ತೆ ಸಿಗುವುದಿಲ್ಲ.

ಬಿಜೆಪಿ ಸ್ನೇಹಿತರು ಮನೆಮನೆಗೂ ರಾಷ್ಟ್ರಧ್ವಜವನ್ನು 25 ರೂಪಾಯಿ ನಿಗದಿ ಮಾಡಿದ್ದಾರೆ. ಸರ್ಕಾರ ಉಚಿತವಾಗಿ ರಾಷ್ಟ್ರಧ್ವಜ ನೀಡಬಹುದಿತ್ತು. ನೋಂದಣಿ ಮಾಡಿಕೊಂಡವರಿಗೆ ನಾವು 1.5 ಲಕ್ಷ ರಾಷ್ಟ್ರಧ್ವಜ, ಟೋಪಿ, ಟಿ ಶರ್ಟ್ ಉಚಿತವಾಗಿ ನೀಡುತ್ತೇವೆ. ಅನೇಕರು ಸ್ತಬ್ಧ ಚಿತ್ರಗಳನ್ನು ಮಾಡಲು ಮುಂದಾಗಿದ್ದಾರೆ. ಕಲಾವಿದರೂ ತಮ್ಮ ಪ್ರತಿಭೆ ಪ್ರದರ್ಶಿಸಬಹುದು. ಇದರಲ್ಲಿ ಭಾಗವಹಿಸುವವರಿಗೆ ಪ್ರಮಾಣಪತ್ರ ನೀಡಲಾಗುವುದು.

ಈ ಕಾರ್ಯಕ್ರಮ ಮಾಡುವಂತೆ ಎಐಸಿಸಿ ನಾಯಕರೇ ಸೂಚಿಸಿದ್ದು, ಅವರಿಗೆ ಆಹ್ವಾನ ನೀಡಲಾಗಿದೆ. ಬೇರೆ ರಾಜ್ಯಗಳಲ್ಲೂ ಈ ಕಾರ್ಯಕ್ರಮ ನಡೆಯಲಿದ್ದು, ಯಾರು ಬರಬೇಕು ಎಂದು ಅವರೇ ತೀರ್ಮಾನ ಮಾಡುತ್ತಾರೆ. ನಮ್ಮ ರಾಜ್ಯಕ್ಕೆ ಯಾರು ಬರುತ್ತಾರೆ ಎಂದು ನಾನು ಈಗಲೇ ಹೇಳುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಾಹಿತಿ ನೀಡಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
6246
Next
»
loading
play
Shashikumar : ಲೀಲಮ್ಮನ ಅಂತಿಮ ದರ್ಶನಕ್ಕೆ ಬಂದ ಶಶಿಕುಮಾರ್
play
DK Shivakumar : ಮೊನ್ನೆ ಕೊನೆ ಭೇಟಿ, ಲೀಲಾವತಿ ನನ್ನ ಮನೆಗೆ ಬಂದಿದ್ರು
«
Prev
1
/
6246
Next
»
loading

don't miss it !

CM ಸಿದ್ದರಾಮಯ್ಯ ಕಾರಿಗೆ ದಾರಿ ಮಾಡಿಕೊಡಲು ಕುಮಾರಸ್ವಾಮಿ ಕಾರು ಪಕ್ಕಕ್ಕೆ ನಿಲ್ಲಿಸಿದ ಪೊಲೀಸರು
ಕರ್ನಾಟಕ

CM ಸಿದ್ದರಾಮಯ್ಯ ಕಾರಿಗೆ ದಾರಿ ಮಾಡಿಕೊಡಲು ಕುಮಾರಸ್ವಾಮಿ ಕಾರು ಪಕ್ಕಕ್ಕೆ ನಿಲ್ಲಿಸಿದ ಪೊಲೀಸರು

by Prathidhvani
December 6, 2023
Assembly Live Results
ಇತರೆ

ಉತ್ತರದಲ್ಲಿ ಬಿಜೆಪಿ ನಿರಾಳ

by ಪ್ರತಿಧ್ವನಿ
December 3, 2023
ರಾಜಸ್ಥಾನದಲ್ಲಿ ಕೆಲಸ ಮಾಡದ ಗ್ಯಾರಂಟಿ : ಅಧಿಕಾರ ಬದಲಾವಣೆಗೆ ಮತದಾರರ ಒಲವು
ದೇಶ

ರಾಜಸ್ಥಾನದಲ್ಲಿ ಕೆಲಸ ಮಾಡದ ಗ್ಯಾರಂಟಿ : ಅಧಿಕಾರ ಬದಲಾವಣೆಗೆ ಮತದಾರರ ಒಲವು

by Prathidhvani
December 3, 2023
ಪ.ಬಂಗಾಳಕ್ಕೆ ಸಿಗುತ್ತಿಲ್ಲ ಕೇಂದ್ರದ ಅನುದಾನ- ಶೀಘ್ರವೇ ಪ್ರಧಾನಿ ಮೋದಿ ಭೇಟಿಯಾಗಲಿರುವ ದೀದಿ..!
ದೇಶ

ಪ.ಬಂಗಾಳಕ್ಕೆ ಸಿಗುತ್ತಿಲ್ಲ ಕೇಂದ್ರದ ಅನುದಾನ- ಶೀಘ್ರವೇ ಪ್ರಧಾನಿ ಮೋದಿ ಭೇಟಿಯಾಗಲಿರುವ ದೀದಿ..!

by Prathidhvani
December 9, 2023
ತೆಲಂಗಾಣದ ಹೊಸ ಮುಖ್ಯಮಂತ್ರಿಯಾಗಿ ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷ ರೇವಂತ್‌ ರೆಡ್ಡಿ ಆಯ್ಕೆ
Top Story

ತೆಲಂಗಾಣದ ಹೊಸ ಮುಖ್ಯಮಂತ್ರಿಯಾಗಿ ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷ ರೇವಂತ್‌ ರೆಡ್ಡಿ ಆಯ್ಕೆ

by Prathidhvani
December 4, 2023
Next Post
ಚಾಲೆಂಜಿಂಗ್‌ ಸ್ಟಾರ್‌ ವಿರುದ್ದ ಸಮರ ಸಾರಿದ ಅಪ್ಪು ಫ್ಯಾನ್ಸ್

ಚಾಲೆಂಜಿಂಗ್‌ ಸ್ಟಾರ್‌ ವಿರುದ್ದ ಸಮರ ಸಾರಿದ ಅಪ್ಪು ಫ್ಯಾನ್ಸ್

ನೆರೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ : ಎಂ.ಬಿ.ಪಾಟೀಲ್

ನೆರೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ : ಎಂ.ಬಿ.ಪಾಟೀಲ್

ಗಾಜಾ ಪಟ್ಟಿಯಲ್ಲಿ ಇಸ್ರೇಲಿ ವೈಮಾನಿಕ ದಾಳಿ: ಮೃತರ ಸಂಖ್ಯೆ 31ಕ್ಕೇರಿಕೆ

ಗಾಜಾ ಪಟ್ಟಿಯಲ್ಲಿ ಇಸ್ರೇಲಿ ವೈಮಾನಿಕ ದಾಳಿ: ಮೃತರ ಸಂಖ್ಯೆ 31ಕ್ಕೇರಿಕೆ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist