ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಡಿಕೆ ಶಿವಕುಮಾರ್ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಹಾಗೂ ಗೋಪ್ಯತಾ ವಚನ ಬೋಧಿಸಿದರು.
ಇಂದು ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ಸಂವಿಧಾನ ಪುಸ್ತಕ ಹಿಡಿದ ಡಿಕೆ ಶಿವಕುಮಾರ್ ಅವರು ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದಾರೆ.
ಇನ್ನೂ ಡಿಕೆ ಶಿವಕುಮಾರ್ ಜೊತೆಯಾಗಿ ಲೋಕ ಭವನದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಹಿರಿಯ ಕಾಂಗ್ರೆಸ್ ನಾಯಕ ಡಾ. ಜಿ. ಪರಮೇಶ್ವರ ಕೂಡ ಪ್ರಮಾಣ ವಚನ ಸ್ವೀಕರಿಸಿದರು.






