• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಗಣಪತಿ ಮೂರ್ತಿ 2-4 ಅಡಿ ನಿರ್ಬಂಧ ಹಿಂಪಡೆಯಲು ಸರ್ಕಾರಕ್ಕೆ ಡಿ.ಕೆ. ಶಿವಕುಮಾರ್ ಆಗ್ರಹ

Any Mind by Any Mind
September 8, 2021
in ಕರ್ನಾಟಕ
0
ಗಣಪತಿ ಮೂರ್ತಿ 2-4 ಅಡಿ ನಿರ್ಬಂಧ ಹಿಂಪಡೆಯಲು ಸರ್ಕಾರಕ್ಕೆ ಡಿ.ಕೆ. ಶಿವಕುಮಾರ್ ಆಗ್ರಹ
Share on WhatsAppShare on FacebookShare on Telegram

‘ಗಣೇಶ ಹಬ್ಬಕ್ಕೆ ಕೇವಲ ಮೂರು ದಿನ ಬಾಕಿ ಇರುವಾಗ ರಾಜ್ಯ ಸರಕಾರವು ಮನೆಯಲ್ಲಿ 2 ಅಡಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಗಣೇಶ ಮೂರ್ತಿ ಇಡಬೇಕೆಂಬ ಅರ್ಥಹೀನ ನಿರ್ಬಂಧ ಹೇರುವ ಮೂಲಕ ಮೂರ್ತಿ ತಯಾರಕರ ಬದುಕಿನ ಜತೆ ಚೆಲ್ಲಾಟವಾಡಿದೆ. ತಕ್ಷಣ ಈ ಆದೇಶ ಹಿಂಪಡೆಯಬೇಕು ಅಥವಾ ಮೂರ್ತಿ ತಯಾರಿಕರಿಗೆ ಪರಿಹಾರ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.

ADVERTISEMENT

‘ಕಳೆದ 2 ತಿಂಗಳಿಂದ ಗಣೇಶ ಮೂರ್ತಿ ತಯಾರಕರು ಲಕ್ಷಾಂತರ ಮೂರ್ತಿಗಳನ್ನು ಮಾಡಿದ್ದಾರೆ. ಸರ್ಕಾರ ಕೊನೆ ಕ್ಷಣದಲ್ಲಿ ಇಂತಹ ನಿರ್ಬಂಧ ಹೇರಿದರೆ ಅವರ ಸ್ಥಿತಿ ಏನಾಗಬೇಕು? ಸರ್ಕಾರ ಇದನ್ನೇ ಎರಡು ಮೂರು ತಿಂಗಳ ಹಿಂದೆಯೇ ಹೇಳಿದ್ದರೆ, ಮೂರ್ತಿ ತಯಾರಕರು ದೊಡ್ಡ ಮೂರ್ತಿಗಳನ್ನು ಮಾಡುತ್ತಲೇ ಇರಲಿಲ್ಲ’ ಎಂದು ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

‘ಕೋವಿಡ್ ಸಮಯದಲ್ಲಿ ಆದಾಯವಿಲ್ಲದಿದ್ದ ಗಣೇಶ ಮೂರ್ತಿ ತಯಾರಕರು, ತಮ್ಮ ಬಳಿ ಇದ್ದಬದ್ದ ಹಣ ಹಾಕಿ ಮೂರ್ತಿಗಳನ್ನು ತಯಾರಿಸಿದ್ದಾರೆ. ಕೊನೆ ಗಳಿಗೆಯಲ್ಲಿ ಈ ನಿರ್ಬಂಧ ಹೇರಿದರೆ ಅವರು ಎಲ್ಲಿಗೆ ಹೋಗಬೇಕು? ಸರ್ಕಾರ ಇದುವರೆಗೂ ಇವರಿಗೆ ನಯಾ ಪೈಸೆ ಕೋವಿಡ್ ಪರಿಹಾರ ಕೊಟ್ಟಿಲ್ಲ. ಹೀಗಿರುವಾಗ ಈ ರೀತಿ ನಿರ್ಬಂಧ ಎಷ್ಟು ಸರಿ? ದೇವರ ಮೂರ್ತಿ ಮಾಡಿಕೊಂಡು ಜೀವನ ನಡೆಸುವವರ ಬದುಕಿಗೆ ಸರಕಾರ ಕೊಳ್ಳಿ ಇಟ್ಟಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ರಾಜ್ಯ ಸರ್ಕಾರ ಗಣಪತಿ ಉತ್ಸವಕ್ಕೆ ಕಡಿವಾಣ ಹಾಕುವ ಭರದಲ್ಲಿ ಭಕ್ತ ಹಾಗೂ ಭಗವಂತನ ನಡುವೆ ಕಂದಕ ನಿರ್ಮಿಸಿರುವುದು ದುರಾದೃಷ್ಟಕರ ಸಂಗತಿ. ಗಣೇಶ ಪ್ರತಿಮೆಯನ್ನು ಮನೆಯಲ್ಲಿ 2 ಅಡಿ, ಸಾರ್ವಜನಿಕ ಪ್ರದೇಶದಲ್ಲಿ 4 ಅಡಿಗೆ ಸೀಮಿತಗೊಳಿಸಿ, ದೇವರಿಗೂ ನೀನು ಇಷ್ಟೇ ಎತ್ತರ ಇರಬೇಕು ಎಂದು ನಿಯಂತ್ರಣ ಹೇರುತ್ತಿದ್ದಾರೆ’ ಎಂದು ಸರ್ಕಾರವನ್ನ  ಕುಟುಕಿದ್ದಾರೆ.

‘ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚು ಜನ ಸೇರಬಾರದು, ಮೆರವಣಿಗೆ ಮಾಡಬಾರದು ಎಂಬುದನ್ನು ಒಪ್ಪುತ್ತೇವೆ. ಆದರೆ ಗಣೇಶನ ಪ್ರತಿಮೆ 2ರಿಂದ – 4 ಅಡಿ ಇರಬೇಕು ಎಂಬ ನಿರ್ಬಂಧದ ಹಿಂದೆ ಯಾವ ತರ್ಕ ಇದೆ? ಹಿಂದೂ ಸಂಸ್ಕೃತಿ ವಕ್ತಾರರು ಎಂದು ಹೇಳಿಕೊಳ್ಳುವವರು ಮಾಡುವ ಕೆಲಸ ಇದೇನಾ?’ ಎಂದು ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

‘ಸರ್ಕಾರ ಅಂತಿಮ ಗಳಿಗೆಯಲ್ಲಿ ಈ ನಿರ್ಧಾರ ತೆಗೆದುಕೊಂಡರೆ, ಈಗ ಮಾಡಿರುವ ಮೂರ್ತಿಗಳನ್ನು ನಿರ್ಧಾರ ಪ್ರಕಟಿಸಿರುವವರ ಮನೆ ಮುಂದೆ ಇಡಬೇಕಾ? ನಿರ್ಧಾರ ಪ್ರಕಟಿಸಿರುವವರೇ ಇವುಗಳನ್ನು ಖರೀದಿಸಲಿ ಎಂದು ಒತ್ತಾಯಿಸಿದ್ದಾರೆ.

ಸರಕಾರದ ಈ ತಿಕ್ಕಲುತನದ ನಿರ್ಧಾರ “ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ” ಎಂಬಂತಿದೆ ಎಂದು ಅವರು ಟೀಕಿಸಿದ್ದಾರೆ.

ನಾವು ಕೋವಿಡ್ ನಿಯಮದ ಬಗ್ಗೆ ಪ್ರಶ್ನೆ ಮಾಡುತ್ತಿಲ್ಲ, ಸರ್ಕಾರದ ಅವೈಜ್ಞಾನಿಕ ತೀರ್ಮಾನ ಪ್ರಶ್ನಿಸುತ್ತಿದ್ದೇವೆ. ಈ ವೃತ್ತಿ ಅವಲಂಬಿಸಿರುವವರ ಬದುಕು ಬೀದಿ ಪಾಲಾಗಬಾರದು. ಗಣೇಶ ಹಬ್ಬಕ್ಕೆ ಇನ್ನು ಎರಡು ದಿನ ಕಾಲಾವಕಾಶ ಇದೆ. ಸರ್ಕಾರ ಈ ಅರ್ಥಹೀನ ನಿರ್ಬಂಧ ವಾಪಸ್ ಪಡೆಯಬೇಕು ಅಥವಾ ಮೂರ್ತಿ ತಯಾರಕರಿಗೆ ಪರಿಹಾರ ನೀಡಬೇಕು’ ಎಂದು ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.

Tags: BJPCovid 19covid guidelinescovid19D K ShivakumarGanesh ChaturthiGanesha Idol Makersಕೋವಿಡ್-19ಬಿಜೆಪಿ
Previous Post

ಅರ್ಕಾವತಿ ಅಕ್ರಮ: ಸಿದ್ದರಾಮಯ್ಯಗೆ ಮುಳುವಾಗಲಿದೆಯೇ ಹಗರಣ?

Next Post

ವ್ಯವಸ್ಥೆಯ ಕ್ರೌರ್ಯವೂ ಪರ್ಯಾಯದ ಅನಿವಾರ್ಯತೆಯೂ

Related Posts

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
0

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ‌. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk...

Read moreDetails
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
Next Post
ದೇಶವನ್ನು ರಾಹು ಕೇತುಗಳಂತೆ ಆವರಿಸಿಕೊಂಡಿರುವ ಬಿಜೆಪಿಯನ್ನು ಸಂಪೂರ್ಣವಾಗಿ ತೊಲಗಿಸಬೇಕು – ಸಿದ್ದರಾಮಯ್ಯ

ವ್ಯವಸ್ಥೆಯ ಕ್ರೌರ್ಯವೂ ಪರ್ಯಾಯದ ಅನಿವಾರ್ಯತೆಯೂ

Please login to join discussion

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!