ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಬಿಜೆಪಿ ನಾಯಕರ ವಿರುದ್ಧವೂ ಕ್ರಮ ಜರುಗಬೇಕು. ಇಲ್ಲದಿದ್ದರೆ ಅಧಿಕಾರಿಗಳ ವಿರುದ್ಧ ಹೋರಾಟ ಮಾಡುತ್ತೇವ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವ ವಿಚಾರವಾಗಿ ನಾನು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ನಮ್ಮ ಪಕ್ಷದ ನಿಯೋಗ ಅವರನ್ನು ಭೇಟಿ ಮಾಡಿತ್ತು. ಈ ವಿಚಾರವಾಗಿ ಇಂದು ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿ, ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ. ಅಧಿಕಾರಿಗಳು ಕ್ರಮ ಕ್ರಮೈಗೊಳ್ಳದಿದ್ದರೆ, ಅವರ ವಿರುದ್ಧ ಹೋರಾಟ ಮಾಡಲು ಕಾರ್ಯತಂತ್ರ ರೂಪಿಸುತ್ತೇವೆ ಎಂದರು.
ಬಿಜೆಪಿಯಲ್ಲೇ ಕೋವಿಡ್ ನಿರ್ಬಂಧದ ಬಗ್ಗೆ ಗೊಂದಲ ಸೃಷ್ಟಿಯಾಗಿವೆ. ಅವರು ಜನರ ಪ್ರಾಣ ತೆಗೆಯುತ್ತಿದ್ದಾರೆ. ಬದುಕಿರುವವರನ್ನು ಸಾಯಿಸುತ್ತಿದ್ದಾರೆ. ವ್ಯಾಪಾರ, ವಹಿವಾಟು ಏನಾಗಬೇಕು? ವಿದೇಶಗಳಲ್ಲಿ ಯಾವುದೇ ನಿರ್ಬಂಧ ಬೇಡ ಎಂದು ತೀರ್ಮಾನಿಸಿದ್ದಾರೆ. ನಾನು ಹೈದರಾಬಾದ್ ಗೆ ಹೋಗಿದ್ದೆ, ಅಲ್ಲಿ ಯಾವುದೇ ನಿರ್ಬಂಧವಿಲ್ಲ ಎಂದರು.
ಆರೋಗ್ಯದ ವಿಚಾರದಲ್ಲಿ ಅಗತ್ಯವಾದ ಕ್ರಮ ಕೈಗೊಳ್ಳಲಿ, ಆದರೆ ಅವರ ದಿನನಿತ್ಯದ ಬದುಕಿನ ಸಂಪಾದನೆ ಹಾಳು ಮಾಡುವುದೇಕೆ? ಬ್ಯಾಂಕ್ ನವರು ಅವರಿಗೆ ನೀಡಿರುವ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುತ್ತಾರಾ? ಅಥವಾ ಸರ್ಕಾರದವರು ಅವರ ಬಾಡಿಗೆಯನ್ನಾದರೂ ಮನ್ನಾ ಮಾಡುತ್ತಾರಾ? ವ್ಯಾಪಾರಸ್ಥರು, ಹೊಟೇಲ್ ಉದ್ಯಮದವರು ಏನಾಗಬೇಕು? ಹೊಟೇಲ್ ಕ್ಷೇತ್ರದವರು ಕೇಳುತ್ತಿರುವುದರಲ್ಲಿ ಅರ್ಥವಿದೆ ಎಂದರು.