ಇಂದು ದಕ್ಷಿಣ ಕನ್ನಡ (Dakshina kannada) ಹಾಗೂ ಉಡುಪಿ ಜಿಲ್ಲೆಗೆ ಡಿಸಿಎಂ ಶಿವಕುಮಾರ್ (Dcm Dk Shivakumar) ಭೇಟಿ ನೀಡಲಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನದ (Bengaluru international airport) ಮೂಲಕ ಮಂಗಳೂರಿಗೆ ತೆರಳಲಿರುವ ಡಿಕೆಶಿ, ಇತಿಹಾಸ ಪ್ರಸಿದ್ದ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದಲ್ಲಿ ಭಾಯಿಯಾಗಲಿದ್ದಾರೆ.

ಆ ನಂತರ ಮಧ್ಯಾಹ್ನ ಉಡುಪಿ ಜಿಲ್ಲೆಯ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿರುವ ಡಿಕೆಶಿ, ವಿವಿಧ ಜಿಲ್ಲಾ ನಾಯಕರ ಜೊತೆಗೆ ಸಭೆ ನಡೆಸಲಿದ್ದಾರೆ.ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಕೂಡ ಡಿಕೆಶಿ ಭಾಗಿಯಾಗಲಿದ್ದಾರೆ. ಆ ನಂತರ ಇವತ್ತು ರಾತ್ರಿ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಆ ಮೂಲಕ ಕರಾವಳಿ ಭಾಗದಲ್ಲಿ ಪಕ್ಷ ಸಂಘಟನೆ ಕುರಿತು ಡಿಕೆ ಶಿವಕುಮಾರ್ ಗಮನ ಹರಿಸಲಿದ್ದು, ಸಭೆಯಲ್ಲಿ ನಾಯಕರು ಮತ್ತು ಕಾರ್ಯಕರ್ತರ ಅಭಿಪ್ರಾಯ ಆಲಿಸಲಿದ್ದಾರೆ.