ಹುಬ್ಬಳ್ಳಿ (Hubballi): ರಾಜ್ಯ ಬಜೆಟ್ (State Budget) ಆಶಾದಾಯಕವಾಗಿರಲಿದೆ. ಗ್ಯಾರಂಟಿ ಯೋಜನೆಗಳಿಗೆ ಶಕ್ತಿ ತುಂಬಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(dkshivakumar) ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಜೆಟ್ ಬಗ್ಗೆ ಎಲ್ಲ ವಿಷಯಗಳನ್ನು ಮುಂಚಿತವಾಗಿ ಬಹಿರಂಗ ಪಡಿಸಲು ಆಗುವುದಿಲ್ಲ, ಈ ಬಜೆಟ್ ರಾಜ್ಯಕ್ಕೆ ಹೊಸ ದಿಕ್ಸೂಚಿಯಾಗಲಿದೆ ಎಂದಿದ್ದಾರೆ.
ಜನರ ಬದುಕಿಗೆ ಶಕ್ತಿ ತುಂಬುವ ಕಾರ್ಯಕ್ರಮ ರೂಪಿಸಿದ್ದೇವೆ. ಗ್ಯಾರಂಟಿ ಹೊರತುಪಡಿಸಿ ನೀರಾವರಿ ಯೋಜನೆ, ಬೇರೆ ಬೇರೆ ಚಿಂತನೆ ಮಾಡಿದ್ದೇವೆ. ಅನೇಕ ಕಾರ್ಯಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಕಳೆದ 8 ತಿಂಗಳುಗಳಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಅವನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನ ಮಾಡಲು ಕ್ರಮ ಕೈಗೊಂಡಿದ್ದೇವೆ ಎಂದರು.
#karnataka #hubballi #statebudget #budget #dkshivakumar