• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಆಸ್ಪತ್ರೆಗಳು ಹೆಚ್ಚಿನ ಶುಲ್ಕ ವಿಧಿಸಿದರೆ ನನ್ನ ಗಮನಕ್ಕೆ ತನ್ನಿ; ರಾಜ್ಯದ ಜನರಿಗೆ ಡಿ.ಕೆ ಶಿವಕುಮಾರ್ ಮನವಿ

Any Mind by Any Mind
May 24, 2021
in ರಾಜಕೀಯ
0
ಆಸ್ಪತ್ರೆಗಳು ಹೆಚ್ಚಿನ ಶುಲ್ಕ ವಿಧಿಸಿದರೆ ನನ್ನ ಗಮನಕ್ಕೆ ತನ್ನಿ; ರಾಜ್ಯದ ಜನರಿಗೆ ಡಿ.ಕೆ ಶಿವಕುಮಾರ್ ಮನವಿ
Share on WhatsAppShare on FacebookShare on Telegram

ADVERTISEMENT

ಸುಪ್ರೀಂ ಕೋರ್ಟಿನ ನಿರ್ದೇಶನವನ್ನು ಉಲ್ಲಂಘಿಸಿ ಯಾವುದಾದರೂ ಆಸ್ಪತ್ರೆ ಅಧಿಕ ಶುಲ್ಕ ಪಡೆಯುತ್ತಿದ್ದರೆ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಗಮನಕ್ಕೆ ತರಲು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ‌ ಶಿವಕುಮಾರ್ ಜನರಲ್ಲಿ ಮನವಿ‌ ಮಾಡಿಕೊಂಡಿದ್ದಾರೆ.

ಸೋಮವಾರ ಟ್ವೀಟ್ ಮಾಡಿದ ಅವರು, “ಕೋವಿಡ್‌ನಿಂದ ಕಂಗಾಲಾಗಿರುವ ಜನರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಸ್ಪತ್ರೆಯ ಬಿಲ್ಲುಗಳೂ ಶಾಕ್ ನೀಡುತ್ತಿವೆ. ಮಾನ್ಯ ಸುಪ್ರೀಂ ಕೋರ್ಟ್ ಆದೇಶವನ್ನು‌ ಉಲ್ಲಂಘಿಸಿ ಹಲವು ಆಸ್ಪತ್ರೆಗಳು‌ ಹೆಚ್ಚಿನ ಶುಲ್ಕ ವಿಧಿಸುತ್ತಿವೆ.

ಆಸ್ಪತ್ರೆಗಳ ಈ‌ ಕೃತ್ಯ ಕೂಡಲೇ ಕೊನೆಯಾಗಬೇಕು. ನೀವು ಇಂತಹ ಸಮಸ್ಯೆ ಎದುರಿಸುತ್ತಿದ್ದರೆ ನನ್ನನ್ನು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಟ್ಯಾಗ್ ಮಾಡಿ. ಕೂಡಲೇ ಆ ಕುರಿತು ಮಾಹಿತಿ ಪಡೆದು, ಸೂಕ್ತ ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಗಮನ ಹರಿಸುತ್ತೇನೆ. #CongressCares” ಎಂದಿದ್ದಾರೆ.

“ಜನರಿಂದ ಅತ್ಯಧಿಕ ಶುಲ್ಕ ಪಡೆದು ಶೋಷಿಸುತ್ತಿರುವ ಆಸ್ಪತ್ರೆ ಹಾಗೂ ವೈದ್ಯಕೀಯ ಸೇವೆ ಒದಗಿಸುವವರನ್ನು ಕರ್ನಾಟಕ ಸರ್ಕಾರ ಪೋಷಿಸುತ್ತಿದೆ. ಮನುಕುಲದ ಸಂಕಷ್ಟದ ಸಮಯದಲ್ಲಿ ಲಾಭ ಮಾಡಿಕೊಳ್ಳುವ ಮನಃಸ್ಥಿತಿಯು ಅಪರಾಧವಾಗಿದೆ.” ಎಂದ ಡಿ.ಕೆ‌ ಶಿವಕುಮಾರ್ “ಭರಿಸಲಸಾಧ್ಯವಾದ ವೈದ್ಯಕೀಯ ಶುಲ್ಕಗಳು ಹಾಗೂ ಬಡಜನರ ಸಂಕಷ್ಟ ನೋಡಲು ನೋವೆನಿಸುತ್ತದೆ.” ಎಂದರು.

“ಜನರ ಸಂಕಷ್ಟದ ಜೊತೆಗೆ ವೈದ್ಯಕೀಯ ಶುಲ್ಕವೂ ಏರುತ್ತಿದೆ. ಈ ಕುರಿತು ಜಾಣಕುರುಡು ಪ್ರದರ್ಶಿಸುತ್ತಿರುವ ಬಿಜೆಪಿ ಸರ್ಕಾರ, ಜನರಿಗೆ ತಲೆನೋವಾಗಿ ಪರಿಣಮಿಸಿದೆ ಎಂದು ನಮಗನ್ನಿಸುತ್ತಿದೆ. ಆಸ್ಪತ್ರೆಗಳು ಆಮ್ಲಜನಕ, ಹಾಸಿಗೆ, ಕೋವಿಡ್ ಪರೀಕ್ಷೆ ಹಾಗೂ ಆಂಬುಲೆನ್ಸ್‌ಗಳಿಗೆ ಅಧಿಕ ಶುಲ್ಕ ಪಡೆಯುತ್ತಿರುವಾಗ ರಾಜ್ಯದ ಮುಖ್ಯಮಂತ್ರಿಗಳು ಮೌನವಹಿಸಿರುವುದು‌ ದುರಂತವೇ ಸರಿ” ಎಂದು ಡಿ.ಕೆ‌ ಶಿವಕುಮಾರ್ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ನ ಆದೇಶದನ್ವಯ ನಿಗದಿತ ಸೇವಾಶುಲ್ಕಗಳ ಮಾಹಿತಿಯನ್ನು ಕೆಪಿಸಿಸಿ ಅಧ್ಯಕ್ಷರು ಹಂಚಿಕೊಂಡಿದ್ದಾರೆ.

“ಇಂತಹ ಸಂಕಷ್ಟದ ಸಮಯದಲ್ಲಿ ಒಬ್ಬರಿಗೊಬ್ಬರು ಸಹಾಯಕ್ಕೆ ಮುಂದಾಗಬೇಕು. ಈ ಕುರಿತು ಹಲವು ದಿನಗಳಿಂದ ದೂರನ್ನು ಕೇಳುತ್ತಿದ್ದೆ, ಇದೀಗ ಕ್ರಮಕ್ಕೆ ಮುಂದಾಗಿದ್ದೇನೆ. ವೈದ್ಯಕೀಯ ಶುಲ್ಕ ಭರಿಸಲಾಗದೆ ಯಾರೂ ಕೂಡ ಜೀವ ಕಳೆದುಕೊಳ್ಳಬಾರದು” ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು. ಆಸ್ಪತ್ರೆಗಳಿಂದ ತೊಂದರೆಗೊಳಗಾದರೆ ಟ್ವಿಟರ್‌ನಲ್ಲಿ ಡಿಕೆ. ಶಿವಕುಮಾರ್ ಎಂದು ಟ್ಯಾಗ್ ಮಾಡಲು ತಿಳಿಸಿದ್ದಾರೆ.

“ದಿನೇ ದಿನೇ ಪ್ರಕರಣಗಳು ಹೆಚ್ಚುತ್ತಿವೆ, ವೈದ್ಯಕೀಯ ಸೌಕರ್ಯಗಳಲ್ಲಿ ಯಾವುದೇ ಬದಲಾವಣೆ ಕಾಣುತ್ತಿಲ್ಲ.‌ ಇದರಿಂದ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಅಣ್ಣ-ತಮ್ಮಂದಿರು ಹಾಗೂ ಅಕ್ಕ-ತಂಗಿಯರನ್ನು ಕಳೆದುಕೊಳ್ಳುತ್ತಿದ್ದೇವೆ. ಲಸಿಕೆಯನ್ನು ವಿತರಿಸುವ ನಮ್ಮ ಯೋಜನೆಗೆ ಅನುಮತಿ ನೀಡದ ಸರ್ಕಾರ ಜನರ ಜೀವವನ್ನು ಅಪಾಯದಂಚಿಗೆ ನೂಕುತ್ತಿದೆ.” ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಕೊರೋನಾ ಪಿಡುಗು ಬಾಧಿಸುತ್ತಿರುವಾಗ ಅನೇಕ‌ ವೈದ್ಯಕೀಯ ಸಂಸ್ಥೆಗಳು ಲಾಭದ ಉದ್ದೇಶದಿಂದ ಕೆಲಸ ಮಾಡುತ್ತಿವೆ. ಕೆಲವು ಪ್ರಕರಣದಲ್ಲಿ ಸರಿಯಾದ ಆರೈಕೆಯ ಕೊರತೆಯಿಂದ ಅನಾಹುತಗಳಾಗುತ್ತಿವೆ. ಹಲವು ವಿಷಯಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕವು ಇದೀಗ ಒಂದೇ ದಿನದಲ್ಲಿ‌ ಅತಿ‌ಹೆಚ್ಚು‌ ಸಾವನ್ನು‌ ದಾಖಲಿಸಿರುವ ರಾಜ್ಯವಾಗಿರುವುದು ಅತ್ಯಂತ ನೋವಿನ‌ ಸಂಗತಿ ಎಂದವರು ಹೇಳಿದ್ದಾರೆ.

ಈಗಾಗಲೇ ನೂರಾರು ಜನರು ಸಹಾಯ ಕೋರಿ ಕೆಪಿಸಿಸಿ‌ ಅಧ್ಯಕ್ಷರನ್ನು ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಿದ್ದಾರೆ. ರಾಜ್ಯದ 31 ಜಿಲ್ಲೆಗಳಲ್ಲಿಯೂ ಕೆಪಿಸಿಸಿ ಅಧ್ಯಕ್ಷರು ತಮ್ಮದೇ ಆದ ತಂಡದ ಮೂಲಕ ನೆರವಿಗೆ ಧಾವಿಸಿದ್ದಾರೆ.

Previous Post

ಕ್ರೂರ ವ್ಯವಸ್ಥೆಯ ಕರಾಳ ಮುಖಗಳು.!

Next Post

ಶ್ವೇತಪತ್ರ ಎಂದರೆ ಸುಳ್ಳು ಹೇಳುವುದಲ್ಲ, ಸತ್ಯಾಂಶವನ್ನು ಜನರ ಮುಂದೆ ಇಡುವಂಥದ್ದು -ಸಿದ್ದರಾಮಯ್ಯ

Related Posts

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
0

ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಗೆ (KS Eshwarappa) ಲೋಕಾಯುಕ್ತ (Lokayukta) ಶಾಕ್ ಎದುರಾಗಿದೆ. ಈ ಹಿಂದೆ ಬಿಜೆಪಿ (Bjp) ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಈಶ್ವರಪ್ಪ ಅವರ...

Read moreDetails
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

ಡಿಕೆ ಸುರೇಶ್‌ ಸುದ್ದಿಗೋಷ್ಠಿ..!

July 3, 2025
Next Post
ಶ್ವೇತಪತ್ರ ಎಂದರೆ ಸುಳ್ಳು ಹೇಳುವುದಲ್ಲ, ಸತ್ಯಾಂಶವನ್ನು ಜನರ ಮುಂದೆ ಇಡುವಂಥದ್ದು -ಸಿದ್ದರಾಮಯ್ಯ

ಶ್ವೇತಪತ್ರ ಎಂದರೆ ಸುಳ್ಳು ಹೇಳುವುದಲ್ಲ, ಸತ್ಯಾಂಶವನ್ನು ಜನರ ಮುಂದೆ ಇಡುವಂಥದ್ದು -ಸಿದ್ದರಾಮಯ್ಯ

Please login to join discussion

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!