ಮೈಸೂರು :ನಾಳೆ ರಾಜ್ಯಾದ್ಯಂತ ಮತದಾನ ನಡೆಯಲಿದೆ. ನಾಳೆ ರಾಜಕೀಯ ಅಭ್ಯರ್ಥಿಗಳ ಭವಿಷ್ಯ ಮತಗಟ್ಟೆಯಲ್ಲಿ ಭದ್ರವಾಗಲಿದೆ. ಈ ಎಲ್ಲದರ ನಡುವೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಟೆಂಪಲ್ರನ್ ಮಾಡಿದ್ದಾರೆ.

ಮೈಸೂರಿನ ನಾಡದೇವತೆ ಚಾಮುಂಡೇಶ್ವರಿ ಸನ್ನಿಧಿಗೆ ತೆರಳಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶೇಷ ಪೂಜೆ ಸಲ್ಲಿಸಿದ್ರು.
ಕಾಂಗ್ರೆಸ್ನ 5 ಗ್ಯಾರಂಟಿಯನ್ನು ರಾಜ್ಯದ ಜನತೆಗೆ ತಲುಪಿಸಲು ಪಕ್ಷಕ್ಕೆ ಶಕ್ತಿ ನೀಡುವಂತೆ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಪ್ರಾರ್ಥನೆ ಸಲ್ಲಿಸಿದ್ದಾರೆ.