• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಿನ ಅರಮನೆ ಮೈದಾನದಲ್ಲಿ ಗುರುವಾರ ಆಟೋ ಚಾಲಕರ ಜತೆ ಡಿ.ಕೆ.ಶಿವಕುಮಾರ್ ಸಂವಾದ

Any Mind by Any Mind
March 24, 2023
in Top Story, ಕರ್ನಾಟಕ, ರಾಜಕೀಯ
0
ಬೆಂಗಳೂರಿನ ಅರಮನೆ ಮೈದಾನದಲ್ಲಿ ಗುರುವಾರ ಆಟೋ ಚಾಲಕರ ಜತೆ ಡಿ.ಕೆ.ಶಿವಕುಮಾರ್ ಸಂವಾದ
Share on WhatsAppShare on FacebookShare on Telegram

ಬೆಂಗಳೂರು: ಮಾ.24: ಇಂದು ನನ್ನ ಜೀವನದಲ್ಲಿ ಬಹಳ ನೆನಪಿನಲ್ಲಿ ಉಳಿಯಲಿರುವ ದಿನ. ಕಾರಣ ಇಂದು ನಾನು ಪವಿತ್ರ ಆಟೋ ಚಾಲನೆ ಮಾಡಿದ ದಿನ. ನಿಮ್ಮ ಕುಟುಂಬದ ಸದಸ್ಯನಾಗಿ ನಾನು ಇಲ್ಲಿ ನಿಂತಿದ್ದೇನೆ. ಇದಕ್ಕಾಗಿ ನನಗೆ ಹೆಮ್ಮೆ ಇದೆ. ನೀವು ಸ್ವಾಭಿಮಾನದ ಬದುಕು ನಡೆಸುತ್ತಿದ್ದೀರಿ. ನೀವು ದೇಶ ಹಾಗೂ ಜನ ಸೇವಕರು. ಮಧ್ಯಮವರ್ಗ ಹಾಗೂ ಜನ ಸಾಮಾನ್ಯರ ಸಾರಥಿಗಳು.

ADVERTISEMENT

ಇಡೀ ಪ್ರಪಂಚದಲ್ಲಿ ಈ ವರ್ಗಕ್ಕೆ ಜಾತಿ, ಧರ್ಮದ ಬೇಧವಿಲ್ಲ. ಜನ ಎಲ್ಲಿಗೆ ತಲುಪಬೇಕೋ ಅಲ್ಲಿಗೆ ತಲುಪಿಸುವ ಪವಿತ್ರ ಕೆಲಸ ಮಾಡಿಕೊಂಡು ಬಂದಿದ್ದೀರಿ. ನಾನು ಆಗಾಗ್ಗೆ, ಅರ್ಚಕನ ಪ್ರಭಾವದಿಂದ ಶಿಲೆಯಲ್ಲೂ ಶಂಕರನನ್ನು ಕಾಣಬಹುದು ಎಂಬ ಮಾತು ಹೇಳುತ್ತಿರುತ್ತೇನೆ. ಅದರಂತೆ ಒಬ್ಬ ವ್ಯಕ್ತಿ ಸಾಧನೆಗೆ ನೀವು ಸಂಪರ್ಕದ ವ್ಯವಸ್ಥೆಯಾಗಿದ್ದೀರಿ. ಜನರ ನಂಬಿಕೆ ಗಳಿಸಿದ್ದೀರಿ. ನಿಮಗೆ ಕೋಟಿ ಧನ್ಯವಾದಗಳು. ಇತ್ತೀಚೆಗೆ ನಡೆಯುತ್ತಿರುವ ಸಮೀಕ್ಷೆಗಳಲ್ಲಿ ಶೇ.80 ರಷ್ಟು ಜನ ಕಾಂಗ್ರೆಸ್ ಪಕ್ಷದ ಪರ ಒಲವು ತೋರಿಸುತ್ತಿದ್ದಾರೆ. ನೀವು ದಿನ ನಿತ್ಯ ಗ್ಯಾಸ್, ಡೀಸೆಲ್ ಮೂಲಕ ಗಾಡಿ ಚಾಲನೆ ಮಾಡುತ್ತಿದ್ದು, ಬೆಲೆ ಏರಿಕೆಯಿಂದ ಸರ್ಕಾರ ನಿಮ್ಮ ಜೇಬನ್ನು ದಿನನಿತ್ಯ ಪಿಕ್ ಪಾಕೆಟ್ ಮಾಡುತ್ತಿದೆ.

ಕೋವಿಡ್ ಸಮಯದಲ್ಲಿ ನಿಮ್ಮ ಬದುಕಿನ ಮೇಲೆ ಬರೆ ಹಾಕಿದರು. ಈ ಸಮಯದಲ್ಲಿ ನಾವು ಚಾಲಕರಿಗೆ ನೆರವು ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಗ್ರಹ ಮಾಡಿದೆವು. ಪ್ರತಿ ತಿಂಗಳು10 ಸಾವಿರ ರೂ. ಪರಿಹಾರ ನೀಡುವಂತೆ ಕೇಳಿದೆವು. ಆದರೆ ಈ ಸರ್ಕಾರ 5 ಸಾವಿರ ಘೋಷಣೆ ಮಾಡಿ, ಒಂದು ತಿಂಗಳೂ ಅದನ್ನು ಸರಿಯಾಗಿ ನೀಡಲಿಲ್ಲ. ನಮ್ಮ ಹಿರಿಯ ನಾಯಕ ಆಸ್ಕರ್ ಫರ್ನಾಂಡೀಸ್ ಅವರು ಪಕ್ಷದಲ್ಲಿ ಚಾಲಕರ ವಿಭಾಗ ಆರಂಭಿಸಬೇಕು ಎಂದು ಸಲಹೆ ನೀಡಿದರು. ಅವರ ಸಲಹೆಯಂತೆ ಪಕ್ಷದಲ್ಲಿ ಚಾಲಕರ ಘಟಕ ಆಂರಂಭಿಸಿದ್ದೆವೆ. ಆ ಮೂಲಕ ನಿಮ್ಮ ಮನೆ ಸದಸ್ಯರಾಗಿದ್ದೇವೆ.

ಬೆಲೆ ಏರಿಕೆಯಿಂದ ಪರದಾಡುತ್ತಿರುವ ಜನರಿಗೆ ಸಹಾಯ ಮಾಡಲು ಕಾಂಗ್ರೆಸ್ ಪಕ್ಷ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿದೆ. ಗೃಹಜ್ಯೋತಿ ಕಾರ್ಯಕ್ರಮದ ಮೂಲಕ ಪ್ರತಿ ತಿಂಗಳು 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ಮುಂದಿನ ಜೂನ್ ನಂತರ ಚಾಲಕರು ಯಾರೂ ವಿದ್ಯುತ್ ಬಿಲ್ ಕಟ್ಟುವಂತಿಲ್ಲ. ಅದೇ ರೀತಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರದಂತೆ ವರ್ಷಕ್ಕೆ 24 ಸಾವಿರ ಪ್ರೋತ್ಸಾಹ ಧನ ನೀಡುತ್ತೇವೆ. ಇನ್ನು ಬಡ ಕುಟುಂಬಗಳ ಪ್ರತಿ ಸದಸ್ಯರಿಗೆ ಅನ್ನಭಾಗ್ಯ ಯೋಜನೆ ಮೂಲಕ 10 ಕೆ.ಜಿ ಉಚಿತ ಅಕ್ಕಿ ನೀಡಲಾಗುವುದು. ಇನ್ನು ನಿರುದ್ಯೋಗಿ ಯುವಕರಿಗೆ ನೆರವು ನೀಡಲು ಪದವೀಧರ ಯುವಕರಿಗೆ 3 ಸಾವಿರ ಹಾಗೂ ಡಿಪ್ಲೋಮಾ ಮಾಡಿರುವವರಿಗೆ ಪ್ರತಿ ತಿಂಗಳು 1500 ರೂ.ಗಳನ್ನು ನೀಡಲಾಗುವುದು.

ಪೊಲೀಸರು ನಿಮಗೆ ನೀಡುತ್ತಿರುವ ಕಿರುಕುಳ ತಪ್ಪಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗುವುದು. ಮುಂದೆ ನಿಮ್ಮ ಕಾಂಗ್ರೆಸ್ ಸರ್ಕಾರ ಬರಲಿದೆ. ನಿಮ್ಮ ಹೋರಾಟದ ದಿಕ್ಕು ಮೇ ತಿಂಗಳಲ್ಲಿ ರಾಜ್ಯದಲ್ಲಿ ಬದಲಾವಣೆ ತರುವತ್ತ ಇರಬೇಕು. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಆಟೋಗಳ ಮೇಲೆ ಹಾಕಿಕೊಂಡು ಪ್ರಚಾರ ಮಾಡುತ್ತಿರುವವರಿಗೆ ಧನ್ಯವಾದಗಳು. ಈ ಹೊಸ ವರ್ಷದ ಸಂದರ್ಭದಲ್ಲಿ ನಿಮಗೆ ಒಳ್ಳೆಯದಾಗಲಿ, ನಾನು ನಮ್ಮ ಪಕ್ಷದ ನಾಯಕರೆಲ್ಲರೂ ನಿಮ್ಮ ಜತೆ ಇರುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

Tags: autodriversautodriversmeetingBengaloreccongressCongress PartyDKShivakumardkswithautodriversKPCCKPCC presidentಬಿಜೆಪಿಸಿದ್ದರಾಮಯ್ಯ
Previous Post

ಬಾದಾಮಿ ಕ್ಷೇತ್ರದತ್ತ ಸಿದ್ದರಾಮಯ್ಯ ಪ್ರವಾಸ : ಬಾದಾಮಿ ಜನತೆಯಲ್ಲಿ ಚಿಗುರೊಡೆದ ಉತ್ಸಾಹ

Next Post

ಅಮಿತ್‌ ಶಾರಿಗೆ ಬಿಎಸ್‌ವೈಗಿಂತ ವಿಜಯೇಂದ್ರ ಮುಖ್ಯವಾದರಾ?

Related Posts

ಟ್ರಂಪ್ ವಿರುದ್ಧ ಪೋಪ್ ಲಿಯೋ ಕಟು ಟೀಕೆ:ಯುದ್ಧೋನ್ಮಾದಕ್ಕೆ ‘ಹುಚ್ಚುತನ’ ಎಚ್ಚರಿಕೆ
ರಾಜಕೀಯ

ವಿನಯ್ ಕುಲಕರ್ಣಿ ವಿರುದ್ಧ ಅತ್ಯಾಚಾರ ಆರೋಪ: CID ‘ಬಿ ರಿಪೋರ್ಟ್’ ಸಲ್ಲಿಕೆ

by ಪ್ರತಿಧ್ವನಿ
April 13, 2026
0

ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಸಿಐಡಿ ತನಿಖೆಯಲ್ಲಿ ಆರೋಪ ಸಾಬೀತಾಗದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ‘ಬಿ ರಿಪೋರ್ಟ್’ ಸಲ್ಲಿಸಲಾಗಿದೆ....

Read moreDetails
ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

April 13, 2026
ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬಳಕೆದಾರರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಗುಡ್‌ನ್ಯೂಸ್‌ ಏನದು?

ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬಳಕೆದಾರರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಗುಡ್‌ನ್ಯೂಸ್‌ ಏನದು?

April 13, 2026
“ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ”

“ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ”

April 13, 2026
ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

April 13, 2026
Next Post
ಅಮಿತ್‌ ಶಾರಿಗೆ ಬಿಎಸ್‌ವೈಗಿಂತ ವಿಜಯೇಂದ್ರ ಮುಖ್ಯವಾದರಾ?

ಅಮಿತ್‌ ಶಾರಿಗೆ ಬಿಎಸ್‌ವೈಗಿಂತ ವಿಜಯೇಂದ್ರ ಮುಖ್ಯವಾದರಾ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada