ಬೆಂಗಳೂರು : ಮುಂದಿನ ಐದು ವರ್ಷಗಳ ಅವಧಿಗೆ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯಲಿದ್ದಾರೆ. ಡಿಕೆ ಶಿವಕುಮಾರ್ ಡಿಸಿಎಂ ಆಗಿಯೇ ಇರಲಿದ್ದಾರೆ ಎಂದು ಸಚಿವ ಎಂಬಿ ಪಾಟೀಲ್ ನೀಡಿರುವ ಹೇಳಿಕೆ ಕಾಂಗ್ರೆಸ್ನಲ್ಲಿ ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿಸಿದೆ.

ಈ ವಿಚಾರಚಾಗಿ ಇಂದು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಡಿಕೆಶಿ ಸಹೋದರ ಸಂಸದ ಡಿ.ಕೆ ಸುರೇಶ್ ಎಂಬಿ ಪಾಟೀಲ್ಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಎಂಬಿ ಪಾಟೀಲ್ ನೀಡಿರುವ ಹೇಳಿಕೆ ಬಗ್ಗೆ ನಿಮಗೆ ಹೆಚ್ಚಿನ ಮಾಹಿತಿ ಬೇಕು ಎಂದರೆ ರಣದೀಪ್ ಸುರ್ಜೆವಾಲಾರ ಜೊತೆ ಮಾತನಾಡಿ. ಎಂಬಿ ಪಾಟೀಲ್ ನೀಡಿರುವ ಹೇಳಿಕೆಗೆ ಖಡಕ್ ಉತ್ತರ ನೀಡೋಕೆ ನನಗೂ ಬರುತ್ತೆ. ಆದರೆ ಈಗ ಅವೆಲ್ಲ ಬೇಡ ಎಂದು ಗುಡುಗಿದ್ದಾರೆ.