ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಸಿಎಂ ಆಗುವ ಅವಕಾಶ ತಪ್ಪಿರುವ ವಿಚಾರವಾಗಿ ಸಹೋದರ ಹಾಗೂ ಸಂಸದ ಡಿಕೆ ಸುರೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ .
ಈ ವಿಚಾರವಾಗಿ ಮಾತನಾಡಿದ ಅವರು ಭವಿಷ್ಯದಲ್ಲಿ ಏನೇನಾಗುತ್ತೆ ಅನ್ನೋದನ್ನು ಕಾದು ನೋಡೋಣ ಎಂದು ಹೇಳುವ ಮೂಲಕ ಮಾರ್ಮಿಕವಾಗಿ ಮಾತನಾಡಿದ್ದಾರೆ .
ನಾವು ನೀಡಿದ ಭರವಸೆಗಳನ್ನು ಮೊದಲು ಈಡೇರಿಸಬೇಕು. ಇದಕ್ಕಾಗಿ ಡಿಕೆಶಿವಕುಮಾರ್ ಕಾಂಗ್ರೆಸ್ ಹೈಕಮಾಂಡ್ ಮಾತನ್ನು ಒಪ್ಪಿಕೊಳ್ಳಬೇಕಾಯ್ತು ಎಂದು ಡಿ.ಕೆ ಸುರೇಶ್ ಹೇಳಿದ್ದಾರೆ.
 
			
 
                                 
                                 
                                
