• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನಾವು ಸುಳ್ಳು ಹೇಳುವವರಲ್ಲ, ಅತ್ತು ನಾಟಕ ಮಾಡುವವರಲ್ಲ, ಬಾಕಿ ಕೆಲಸ ತ್ವರಿತಗೊಳಿಸಲು ಸೂಚಿಸಿದ ಡಿಕೆ ಸುರೇಶ್..

ಪ್ರತಿಧ್ವನಿ by ಪ್ರತಿಧ್ವನಿ
March 4, 2026
in Top Story, ಇದೀಗ, ಕರ್ನಾಟಕ
0
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Share on WhatsAppShare on FacebookShare on Telegram

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್..

ADVERTISEMENT

ಮಾಗಡಿ : “ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ ನೀರಿನ ಅಭಾವ ನೀಗಿಸುವ ಕೆಲಸವನ್ನ ಡಿ.ಕೆ.ಶಿವಕುಮಾರ್ ಅವರು ಮಾಡುತ್ತಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ರಾಜ್ಯದಲ್ಲಿಯೇ ನಂ.1 ಮಾಡುವ ಕನಸು ಶಿವಕುಮಾರ್ ಅವರದ್ದು” ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರು ಬಣ್ಣಿಸಿದ್ದಾರೆ.

ತಾಲೂಕಿನ ಚಕ್ರಬಾವಿಯಲ್ಲಿ ನಡೆದ ವೈ.ಜಿ.ಗುಡ್ಡ ಏತನೀರಾವರಿ ಯೋಜನೆಯ ಶಂಕುಸ್ಥಾಪನೆ ಸಮಾರಂಭದಲ್ಲಿ ಸುರೇಶ್ ಮಾತನಾಡಿ, ನಾವು ಸುಳ್ಳು ಹೇಳಿ ಕೆಲಸ ಮಾಡುವವರಲ್ಲ‌‌. ನಿಮ್ಮ ಬಳಿ ಅತ್ತು ಕರೆದು ನಾಟಕ ಮಾಡುವವರಲ್ಲ. ನಾನು ಕೊಟ್ಟ ಮಾತನ್ನು ಉಳಿಸಿಕೊಳ್ಳುವವನು, ಕೊಟ್ಟ ಭರವಸೆ ಈಡೇರುವ ತನಕ ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ.‌

Krishnabyregowda :   ಬೆಂಗಳೂರು ಗ್ರಾಮಾಂತರ ಜಿಲ್ಲೆಯ 15,000 ಕುಟುಂಬಗಳಿಗೆ ಹಕ್ಕುಪತ್ರ #pratidhvani

“ಮಾಗಡಿಯ ಅಭಿವೃದ್ಧಿ 2027- 28 ಕ್ಕೆ ಅಚ್ಚರಿ ಮೂಡಿಸಲಿದೆ. ಪಟ್ಟಣದ ಒಳಗೆ ರಸ್ತೆಗಳು ಅತ್ಯಂತ ಅಚ್ಚುಕಟ್ಟಾಗಿವೆ. ಜೊತೆಗೆ ಗ್ರಾಮೀಣ ಪ್ರದೇಶದ ರಸ್ತೆಗಳು ಸಹ ಅತ್ಯುತ್ತಮ ಸ್ಥಿತಿಯಲ್ಲಿವೆ. ಈ ಕ್ಷೇತ್ರದಲ್ಲಿ 1 ಸಾವಿರ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.

“92 ಕೋಟಿ ರೂಪಾಯಿ ವೆಚ್ಚದಲ್ಲಿ 115 ಕಿ.ಮೀ ದೂರದಿಂದ ಕಾವೇರಿ ನೀರನ್ನು ತಂದು ಚಕ್ರಬಾವಿ ಸೇರಿದಂತೆ ಸುತ್ತಮುತ್ತಲ ಕೆರೆಗಳಿಗೆ ತುಂಬಿಸುವ ಕಾರ್ಯ ಇದಾಗಿದೆ. ಚಕ್ರಬಾವಿ ಕೆರೆಗೆ ನೀರನ್ನು ತುಂಬಿಸುವ ಯೋಜನೆ ಊಹಿಸಲು ಸಾಧ್ಯವಾಗದಂತಹ ಯೋಜನೆ ಎಂದು ಹೇಳಿದ್ದಾರೆ.

“ಪರಿಸರ ಇಲಾಖೆಯ ಒಂದಷ್ಟು ತೊಡಕುಗಳು ಇದ್ದ‌ ಕಾರಣ ಇನ್ನೊಂದೆರಡು ಕಿಲೋಮೀಟರ್ ಕಾಮಗಾರಿ ಬಾಕಿಯಿದೆ. ಮೇ ತಿಂಗಳ ಹೊತ್ತಿಗೆ ಕಾಮಗಾರಿ ಮುಗಿಯಲಿದೆ. ಇನ್ನು ವರ್ಷದ 365 ದಿನವೂ ವೈ.ಜಿ.ಗುಡ್ಡ ಕಾವೇರಿ ನೀರಿನಿಂದ ತುಂಬಿರಲಿದೆ. ಅಂದರೆ ಅಷ್ಟೂ ದಿನವೂ ನಿಮ್ಮ‌ ಕೆರೆಗಳು ತುಂಬಿರುತ್ತವೆ. ಉಪಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿ ಇನ್ನೆರಡು ವರ್ಷದೊಳಗೆ ಈ ಯೋಜನೆಯನ್ನು ಸಂಪೂರ್ಣಗೊಳಿಸಬೇಕು. ಕಟ್ಟುನಿಟ್ಟಿನ ಆದೇಶ ನೀಡಬೇಕು ಅಂತ ಮನವಿ ಮಾಡುತ್ತೇನೆ ಎಂದು ಅಣ್ಣನಲ್ಲಿ ಕೋರಿಕೊಂಡಿದ್ದಾರೆ.

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

ಕಾವೇರಿ ನದಿ ದೂರವಿದೆ ಅಂದರೆ ಪಶ್ಚಿಮದಿಂದ ಪೂರ್ವಕ್ಕೆ ನೀರನ್ನು ತಂದು ಕೆರೆಗಳನ್ನು ತುಂಬಿಸುವ ಕಾರ್ಯ ಮಾಡಲಾಗುತ್ತಿದೆ. ವೈ.ಜಿ.ಗುಡ್ಡಕ್ಕೆ ಕಾವೇರಿ ನೀರು ಬರುತ್ತಿದೆ ಎಂದು ಯಾರೂ ಊಹಿಸಿರಲಿಲ್ಲ. ನಾನು ಸಂಸದನಾಗಿದ್ದಾಗ ಸ್ಥಳೀಯ ನಾಯಕರಾದ ಚಂದ್ರೇಗೌಡರ ಒಟ್ಟಿಗೆ ಸ್ಥಳಕ್ಕೆ ಭೇಟಿ ಮಾಡಿ ಅದಕ್ಕೆ ಹೇಗೆ ನೀರನ್ನು ತುಂಬಿಸಬಹುದು ಅಧಿಕಾರಿಗಳ ಬಳಿ ಚರ್ಚೆ ನಡೆಸಿದ್ದೇನೆ ಎಂದಿದ್ದಾರೆ.

ಹಿಂದಿನ ಸರ್ಕಾರದಲ್ಲಿ ಡಿ.ಕೆ.ಶಿವಕುಮಾರ್ ನೀರಾವರಿ ಸಚಿವರಾಗಿದ್ದಾಗ ಈ ಭಾಗದ ಮುಖ್ಯ ಎಂಜಿನಿಯರ್ ಆಗಿದ್ದ ಮೋಹನ್ ಅವರ ಬಳಿ ನೀರು ಹರಿಸುವ ಕುರಿತು ಚರ್ಚೆ ನಡೆಸಿದೆ. ಕಾವೇರಿ ನೀರನ್ನು ಕಣ್ವ ಜಲಾಶಯಕ್ಕೆ ತಂದು ನಂತರ ಹೇಗೆ ಮಂಚನಬೆಲೆ ವೈ.ಜಿ ಗುಡ್ಡಕ್ಕೆ ತರಬಹುದು ಎಂದು ಯೋಜನೆ ತಯಾರಿಸಲು ಹೇಳಿದೆ. ಆನಂತರ ಇದರ ಸಾಧ್ಯತೆಗಳನ್ನು ಚರ್ಚೆ ನಡೆಸಿ ಸತ್ತೇಗಾಲದಿಂದ ವೈ.ಜಿ.ಗುಡ್ಡಕ್ಕೆ ಕಾವೇರಿ ನೀರು ತರಲಾಗಿದೆ ಎಂದು ಯೋಜನೆಯ ಯಶೋಗಾಥೆ ವಿವರಿಸಿದ್ದಾರೆ.

ನನ್ನ ಮೇಲೆ ನಿಮ್ಮ ಆಶೀರ್ವಾದ ಇರುತ್ತದೆ ಎಂದು ಭಾವಿಸುವೆ..

ನನ್ನ ಮೇಲೆ ನಿಮ್ಮೆಲ್ಲರ ಆಶೀರ್ವಾದ ಮುಂದಕ್ಕಾದರೂ ಇರುತ್ತದೆ ಎಂದು ಭಾವಿಸಿದ್ದೇನೆ. ನನ್ನ ಮೇಲೆ ನಂಬಿಕೆ ಇಟ್ಟವರ ಋಣವನ್ನ ಉಸಿರು ಇರುವ ತನಕ ತೀರಿಸುತ್ತೇನೆ. ಬಮುಲ್ ಅಧ್ಯಕ್ಷನನ್ನಾಗಿ ನನ್ನನ್ನು ಆಯ್ಕೆ ಮಾಡಲಾಗಿದೆ. ಅಂದರೆ ಪ್ರತಿದಿನ ಹಾಲು, ಮೊಸರು, ತುಪ್ಪ ತೆಗೆದುಕೊಳ್ಳಿ, ಹಸು ಕಟ್ಟಿ ಎಂದು ಹೇಳುವ ಕೆಲಸ ನೀಡಿದ್ದೀರಿ. ರೈತರನ್ನು ಕಾಪಾಡುವ ಕಾರ್ಯವನ್ನು ನನ್ನ ಎಲ್ಲಾ ಸಹೋದ್ಯೋಗಿಗಳು ಹಾಗೂ ನಾವು ಮಾಡಲಿದ್ದೇವೆ ಎಂದು ಭರವಸೆ ನೀಡಿದ್ದಾರೆ.

ಮಾಗಡಿ ಜನತೆ ಅದೃಷ್ಟವಂತರು. ನನ್ನನ್ನು ಸೋಲಿಸಿ ನನ್ನಿಂದಲೂ ಕೆಲಸ ಮಾಡಿಸಿಕೊಳ್ಳುತ್ತಿದ್ದೀರಿ. ಡಿ.ಕೆ.ಶಿವಕುಮಾರ್ ಅವರಿಂದಲೂ ಕೆಲಸ ಮಾಡಿಸಿಕೊಳ್ಳುತ್ತಿದ್ದೀರಿ. ಶಾಸಕ ಬಾಲಕೃಷ್ಣ ಎಲ್ಲೆಲ್ಲಿ ಕೆಲಸ ಆಗುತ್ತದೆಯೋ ಅಲ್ಲೆಲ್ಲ ಕಥೆ ಕಟ್ಟುತ್ತಾ ಇರುತ್ತಾರೆ” ಎಂದು ಡಿಕೆ ಸುರೇಶ್ ಹಾಸ್ಯ ಚಟಾಕಿ ಹಾರಿಸಿದ್ದಾರೆ.

Tags: BamulBenglore Milk UnionBenglore Rural MPcongress karnatakacowDCM DK ShivakumarDK Shivakumardk sureshForest DepartmentGovernment of KarnatakaHC Balakrishnairrigation department.JDS KarnatakaKaveri RiverkempegowdaMagadi TalukaMilk Union PresidentPratidhvaniWater ProblemsWater projectsY G Hill Water Project
Previous Post

ಯುದ್ಧ: ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ; ಇಂದು ಇಷ್ಟು ಲಕ್ಷ ಕೋಟಿ ನಷ್ಟ!

Next Post

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post
ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada