ಜಾರಿಗೆ ಬಂದ ಕಾರ್ಯಕ್ರಮಗಳನ್ನ ಎಲ್ಲಾ ಸರ್ಕಾರಗಳು ಉಳಿಸಿಕೊಂಡು ಬರುತ್ತಿವೆ. ಬಿಜೆಪಿ ಸರ್ಕಾರ ಕೂಡಾ ಹಿಂದಿನ ಸರ್ಕಾರಗಳು ಮಾಡಿದ ಯೋಜನೆ ಮುಂದುವರೆಸಿದೆ. ಈ ಗ್ಯಾರಂಟಿ ಯೋಜನೆಗಳು ಕೂಡಾ ಹಾಗೆ ಯಥಾಸ್ಥಿತಿಯಲ್ಲಿ ಮುಂದುವರೆದುಕೊಂಡು ಹೋಗುತ್ತದೆ ಎಂದು ಮಾಜಿ ಶಾಸಕ ಶ್ರೀರಾಮುಲು ಹೇಳಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅರಮನೆ ಮೈದಾನದಲ್ಲಿ ನನ್ನ ಮಗಳ ಮದುವೆ ಕಾರ್ಯಕ್ರಮ ಇದೆ. ಹೀಗಾಗಿ ಸಿಎಂ ಮತ್ತು ಡಿಸಿಎಂಗೆ ಆಹ್ವಾನ ನೀಡಲು ಬಂದಿದ್ದೆ. ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಸಪಷ್ಟಪಡಿಸಿದರು.
ಬಿಜೆಪಿ ಅಧಿಕಾರಕ್ಕೆ ಬಂದ್ರೆ ಗ್ಯಾರಂಟಿ ಯೋಜನೆ ನಿಲ್ಲುತ್ತದೆ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಕೊಟ್ಟಿರೋ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಗ್ಯಾರಂಟಿ ಯೋಜನೆಗಳು ಜನರಿಗೆ ತೃಪ್ತಿ ಆಗಿದ್ದರೆ, ಜನರೇ ಅರ್ಥ ಮಾಡಿಕೊಂಡು ಸಪೋರ್ಟ್ ಮಾಡ್ತಾರೆ. ಯೋಜನೆಗಳು ಸರಿಯಾಗಿ ಸಿಗದೇ ಹೋದರೆ ಜನ ವಿರೋಧ ಮಾಡೇ ಮಾಡ್ತಾರೆ. ಆದರೆ ಜಾರಿಗೆ ಬಂದ ಕಾರ್ಯಕ್ರಮಗಳನ್ನ ಎಲ್ಲಾ ಸರ್ಕಾರಗಳು ಉಳಿಸಿಕೊಂಡು ಬರುತ್ತಿವೆ. ಬಿಜೆಪಿ ಸರ್ಕಾರ ಕೂಡಾ ಹಿಂದಿನ ಸರ್ಕಾರಗಳು ಮಾಡಿದ ಯೋಜನೆ ಮುಂದುವರೆಸಿದೆ. ಈ ಗ್ಯಾರಂಟಿ ಯೋಜನೆಗಳು ಕೂಡಾ ಹಾಗೆ ಯಥಾಸ್ಥಿತಿಯಲ್ಲಿ ಮುಂದುವರೆದುಕೊಂಡು ಹೋಗುತ್ತದೆ ಎಂದು ಹೇಳಿದ್ದಾರೆ.

ಅಧ್ಯಕ್ಷ , ವಿಪಕ್ಷ ನೇಮಕ ವಿಷಯದಲ್ಲಿ ಅಸಮಾಧಾನ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅಶೋಕ್ ವಿಪಕ್ಷ ನಾಯಕ ಆಗಿ ನೇಮಕ ಆದ್ರು. ವಿಜಯೇಂದ್ರ ಕಿರಿಯರೇ ಇರಬಹುದು, ಆದ್ರೆ ಹೈಕಮಾಂಡ್ ಅವಕಾಶ ಮಾಡಿಕೊಟ್ಟಿದೆ. ಹೀಗಾಗಿ ಎಲ್ಲರೂ ಸಹಕಾರ ನೀಡಿದ್ರೆ ಪಕ್ಷ ಕಟ್ಟಲು ಅನುಕೂಲವಾಗುತ್ತೆ ಎಂದು ಹೇಳಿದ್ದಾರೆ.