
ಬೆಂಗಳೂರು: 30 ತಿಂಗಳ ಬಳಿಕ ಮುಖ್ಯಮಂತ್ರಿಬದಲಾವಣೆ ಆಲಿದೆ ಎಂಬ ಗಾಳಿಸುದ್ದಿ ಹರಿದಾಡುತ್ತಿದೆ.ಇತ್ತ ಈ ಗಾಳಿ ಸುದ್ದಿಗೆ ಡಿಸಿಎಂ ಡಿಕೆ ಶಿವಕುಮಾರ್ ಪುಷ್ಠಿ ನೀಡಿದರೇ, ಸಿಎಂ ಸಿದ್ದರಾಮಯ್ಯ ಮತ್ತೆ ಗಾಳಿಗೆ ತೂರುವ ಕೆಲಸ ಮಾಡುತ್ತಿದ್ದಾರೆ.

ಕಾಂಗ್ರೆಸ್ ಬಣದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಒಳಜಗಳ ಆರಂಭವಾಗಿದೆ ಎಂದು ಮಿತ್ರಪಕ್ಷಗಳು ಹೇಳಿದರೇ, ಇದೆಲ್ಲವೂ ಗಾಳಿ ಸುದ್ದಿ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಹಸ್ತಾಂತರ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮಲ್ಲಿ ಚರ್ಚೆಯಾಗಿದೆ. ಈ ಬಗ್ಗೆ ಸಮಯ ಬಂದಾಗ ಮಾತನಾಡುವುದಾಗಿ ಅವರು ಹೇಳಿದ್ದರು. ಮುಂದುವರೆದು, ನಾನೀಗ ಉಪ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ. ಅದರ ಬಗ್ಗೆ ಈಗ ಮಾತನಾಡುವುದು ಇಲ್ಲ. ಸಿಎಂ ಹಾಗೂ ನಾನು ರಾಜ್ಯ ಹಿತಕ್ಕಾಗಿ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಅಧಿಕಾರ ಹಂಚಿಕೆ ಸಂಬಂಧ ಒಪ್ಪಂದವಾಗಿದ್ದು, ಈ ಬಗ್ಗೆ ಸೂಕ್ತ ಸಮಯದಲ್ಲಿ ಮಾತನಾಡುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದರು.
ಈ ಹೇಳಿಕೆ ಮಂಡ್ಯದ ಕೆ.ಆರ್ ಪೇಟೆ ತಾಲೂಕು ಬಂಡಬೋಯಿನ ಹಳ್ಳಿ ಬಳಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಿಎಂ ಸ್ಥಾನ ಹಸ್ತಾಂತರ ಸಂಬಂಧ ಈವರೆಗೆ ಯಾವುದೇ ಒಪ್ಪಂದವಿಲ್ಲ. ಈ ಬಗ್ಗೆ ಹೈಕಮಾಂಡ್ ನಿರ್ದೇಶನದಂತೆ ನಡೆದುಕೊಳ್ಳುತ್ತೇವೆ. ನಮ್ಮ ನಡುವೆ ಯಾವುದೇ ಒಪ್ಪಂದವಾಗಿಲ್ಲ ಎಂದು ಹೇಳುವ ಮೂಲಕ ಎಲ್ಲಾ ಊಹಪೋಹಗಳಿಗೆ ಸಿಎಂ ತೆರೆ ಎಳೆದಿದ್ದಾರೆ.









