• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಾವು ಹುಟ್ಟಿನಿಂದಲೇ ಹಿಂದುಗಳು, ನಾಟಕೀಯ ಹಿಂದುತ್ವ ನಮ್ಮದಲ್ಲ : ಡಿ.ಕೆ.ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
December 19, 2022
in ಕರ್ನಾಟಕ, ರಾಜಕೀಯ
0
ನಾವು ಹುಟ್ಟಿನಿಂದಲೇ ಹಿಂದುಗಳು, ನಾಟಕೀಯ ಹಿಂದುತ್ವ ನಮ್ಮದಲ್ಲ : ಡಿ.ಕೆ.ಶಿವಕುಮಾರ್
Share on WhatsAppShare on FacebookShare on Telegram

ನಾವೆಲ್ಲರೂ ಹುಟ್ಟುತ್ತಲೇ ಹಿಂದೂಗಳು, ಸಾಯುವಾಗಲೂ ಹಿಂದೂಗಳೇ, ಹಿಂದೂ ಆಚರಣೆಗಳನ್ನೇ ಪಾಲಿಸುತ್ತಾ ಬಂದಿದ್ದೇವೆ. ನಮ್ಮಲ್ಲಿ ಹಿಂದೂ ಭಾವ, ಭಕ್ತಿ, ಆಚಾರ, ವಿಚಾರ, ಅಡಗಿದೆ. ಆದರೆ ಬಿಜೆಪಿಯವರು ನಾಟಕದ ಹಿಂದುತ್ವ ತೋರಿಸುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ.

ADVERTISEMENT

ಕಾಂಗ್ರೆಸ್‌ ನಾಯಕರು ಸುವರ್ಣ ಸೌಧದಲ್ಲಿ ಪ್ರತಿಭಟನೆಯಲ್ಲಿ ಮಾತನಾಡಿದ ಶಿವಕುಮಾರ್‌ ಈಗ ನಾವು ಸರ್ಕಾರಕ್ಕೆ ಆಗ್ರಹಿಸುತ್ತಿರುವುದೇನೆಂದರೆ, ಈ ಸುವರ್ಣಸೌಧದಲ್ಲಿ ದೇಶದ ಮೊದಲ ಪ್ರಧಾನಿ, ಆಧುನಿಕ ಭಾರತದ ನಿರ್ಮಾತೃ ಪಂಡಿತ್ ಜವಹಾರ್ ಲಾಲ್ ನೆಹರೂ, ಶಿಶುನಾಳ ಷರೀಫರು, ವಿಶ್ವಗುರು ಬಸವಣ್ಣ, ನಾರಾಯಣಗುರು, ಕನಕದಾಸರು, ಅಂಬೇಡ್ಕರ್, ಬಾಬು ಜಗಜೀವನ ರಾಮ್, ಸರ್ದಾರ್ ವಲ್ಲಭಬಾಯ್ ಪಟೇಲ್, ಕುವೆಂಪು ಹಾಗೂ ಈ ಭಾಗದ ಪ್ರಮುಖ ವ್ಯಕ್ತಿಗಳ ಭಾವಚಿತ್ರಗಳನ್ನು ಹಾಕಬೇಕು ಎಂದು ಆಗ್ರಹಿಸಿದ್ದಾರೆ.

ನನಗೆ ಸ್ಪೀಕರ್ ಅವರ ಕಚೇರಿಯಿಂದ ದೂರವಾಣಿ ಕರೆ ಮಾಡಿ ಇಂದು ಬೆಳಗ್ಗೆ 10 ಗಂಟೆಗೆ, ಮಹಾತ್ಮ ಗಾಂಧಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ಅನಾವರಣ ಕಾರ್ಯಕ್ರಮವಿದೆ, ನೀವು ಆಗಮಿಸಬೇಕು ಎಂದು ಆಹ್ವಾನಿಸಿದ್ದರು. ನಾವು ಬಹಳ ಸಂತೋಷದಿಂದ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದೆವು. ಆದರೆ ಇಲ್ಲಿ ಬಂದ ನಂತರ ಮಾಧ್ಯಮಗಳ ಮೂಲಕ ಸಾರ್ವಕರ್ ಫೋಟೋ ಕೂಡ ಹಾಕಲಾಗುತ್ತಿದೆ ಎಂದು ತಿಳಿಯಿತು. ಸಾರ್ವಕರ್ ಅವರಿಗೂ ರಾಜ್ಯಕ್ಕೂ ಯಾವುದೇ ಸಂಬಂಧವಿಲ್ಲ. ಇದು ವಿವಾದಾತ್ಮಕ ವಿಚಾರವಾಗಿದ್ದು, ಈ ಬಗ್ಗೆ ನಾವು ಬೇರೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಉತ್ತರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಇಲ್ಲಿ ಜ್ವಲಂತ ಸಮಸ್ಯೆಗಳಿವೆ. ಅನೇಕ ಪ್ರತಿಭಟನೆಗಳು ನಡೆದಿವೆ. ಭ್ರಷ್ಟಾಚಾರ, ಆತ್ಮಹತ್ಯೆ ಪ್ರಕರಣಗಳು ನಡೆದಿವೆ. ಇವೆಲ್ಲವೂ ಚರ್ಚೆ ಆಗಲಿದೆ ಎಂಬ ಕಾರಣಕ್ಕೆ, ದಾರಿ ತಪ್ಪಿಸಲು ಸರ್ಕಾರ ಈ ಪ್ರಯತ್ನಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ.

ನಾರಾಯಣಗುರು, ಕುವೆಂಪು, ಬಸವಣ್ಣ, ಕನಕದಾಸರು, ವಾಲ್ಮೀಕಿ ಸೇರಿದಂತೆ ನಮಗೆ ಎಲ್ಲರೂ ಬೇಕು. ಸಾಮಾಜಿಕ ನ್ಯಾಯ ಸಿಗಬೇಕು. ದೇಶ, ರಾಜ್ಯದ ಹಿತಕ್ಕೆ ಶ್ರಮಿಸಿ ಅಮರರಾದ ಎಲ್ಲಾ ಧರ್ಮದ ನಾಯಕರು ಬೇಕು ಎಂಬುದು ನಮ್ಮ ಅಜೆಂಡಾ ಎಂದು ಬಿಜೆಪಿಯ ಅಜೆಂಡಾ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.

ಭ್ರಷ್ಟಾಚಾರ, ಮತದಾರರ ಮಾಹಿತಿ ಕಳುವು, 40% ಕಮಿಷನ್, ಈ ಭಾಗದ ಜನರಿಗೆ ಆಗುತ್ತಿರುವ ಅನ್ಯಾಯ, ದುರಾಡಳಿತದ ಬಗ್ಗೆ ಚರ್ಚೆ ಆಗಬಾರದು ಎಂಬ ಕಾರಣಕ್ಕೆ ಈ ವಿಚಾರ ಪ್ರಸ್ತಾಪಿಸುತ್ತಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಸುಳ್ಳಿನ ರಾಜ. ಸಾರ್ವಕರ್ ಫೋಟೋ ಹಾಕಿರುವುದು ನನಗೆ ಗೊತ್ತೇ ಇಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ. ಈ ವಿಚಾರದಲ್ಲಿ ನೀವು ನಿಮಗೆ ಬೇಕಾದ ಸಮರ್ಥನೆ ಮಾಡಿಕೊಳ್ಳಿ. ಆದರೆ ನನಗೆ ಗೊತ್ತೇ ಇಲ್ಲ ಎಂದು ಸುಳ್ಳು ಹೇಳಿ ಮುಖ್ಯಮಂತ್ರಿ ಸ್ಥಾನಕ್ಕೆ ಧಕ್ಕೆ ತರಬಾರದು ಎಂದು ಬಿಜೆಪಿಯವರು ಈ ವಿಚಾರವನ್ನು ಈಗ ಯಾಕೆ ಪ್ರಸ್ತಾಪ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಎಂಬ ಪ್ರಶ್ನೆಗೆ ಉತ್ತರಿಸಿದ್ದಾರೆ.

Previous Post

ಸಾವರ್ಕರ್ ಬ್ರಿಟಿಷರ ಜೊತೆ ಶಾಮೀಲಾಗಿದ್ರು..| DK Shivakumar | Veer Savarkar | Pratidhvani

Next Post

D BOSS FANS | APPU FANS : ಹೊಸ್ಪೇಟೆಗೆ ಕಾಲಿಟ್ಟಿದ್ದೀರಾ, ಅಪ್ಪು ಫಸ್ಟು ಆಮೇಲೆ ನೀವು | PRATIDHVANI

Related Posts

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ
Top Story

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

by ಪ್ರತಿಧ್ವನಿ
August 28, 2026
0

ಬೆಂಗಳೂರು, ಆ.28: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕ ಸರ್ಕಾರ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮಾಡಿರುವ ಆರೋಪಗಳಿಗೆ ಕೆಪಿಸಿಸಿ ಮಾಧ್ಯಮ ಮತ್ತು...

Read moreDetails
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

August 28, 2026
Next Post

D BOSS FANS | APPU FANS : ಹೊಸ್ಪೇಟೆಗೆ ಕಾಲಿಟ್ಟಿದ್ದೀರಾ, ಅಪ್ಪು ಫಸ್ಟು ಆಮೇಲೆ ನೀವು | PRATIDHVANI

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada