ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಅಗಬೇಕು ಎಂಬ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದು, ಸದ್ಯಕ್ಕೆ ಎಲ್ಲರೂ ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ. ವ್ಯಕ್ತಿ ಪೂಜೆ ಬಿಟ್ಟು ಪಕ್ಷಕ್ಕಾಗಿ ಕೆಲಸ ಮಾಡಿ ಎಂದು ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ. ಎಲ್ಲ ಶಾಸಕರು ಕೂಡ ಮುಖ್ಯಮಂತ್ರಿ ಅಭ್ಯರ್ಥಿಗಳೆಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತನ್ನಿ. ಹೀಗಾಗಿ ವ್ಯಕ್ತಿ ಪೂಜೆ ಬಿಟ್ಟು ಎಲ್ಲರೂ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರಲು ಬಾಯಿ ಮುಚ್ಚಿಕೊಂಡು ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.