ಡಿಕೆ ಶಿವಕುಮಾರ್ ಸಿಬಿಐ ಕೇಸನ್ನು ಸಚಿವ ಸಂಪುಟ ವಾಪಸ್ ತಗೊಂಡಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ. ಕಳ್ಳ ಎಂದಿದ್ದರೂ ಕಳ್ಳನೇ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಟೀಕಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಈ ಪ್ರಕರಣದಲ್ಲಿ ಸಿಬಿಐ ತನಿಖೆ ಅಂತಿಮ ಹಂತಕ್ಕೆ ಬಂದಿದೆ. ಇಂತಹ ಸಂದರ್ಭದಲ್ಲಿ ಕೇಡಿ ಸಿದ್ದು ಸಚಿವ ಸಂಪುಟ ಕಳ್ಳರ ಗುಂಪಾಗಿದೆ. ಇನ್ನು, ಸುಪ್ರೀಂ ಕೋರ್ಟ್ ತಜ್ಞರು ಹೇಳ್ತಿದ್ದಾರೆ, ಸಿಬಿಐಗೆ ತನಿಖೆಗೆ ವಹಿಸಲು ಅನುಮತಿ ಇದೆ. ಆದರೆ ಹಿಂಪಡೆಯಲು ಅನುಮತಿ ಬೇಕಿಲ್ಲ. ಸಿದ್ದರಾಮಯ್ಯ ಅವರಿಗೆ ಈ ವಿಷಯ ಗೊತ್ತಿಲ್ವಾ? ಎಂದು ಪ್ರಶ್ನಿಸಿದ್ದಾರೆ.
![](https://pratidhvani.com/wp-content/uploads/2023/06/eshwarappa-dh-1208551-1681212310.jpg)
ಸಿದ್ದರಾಮಯ್ಯ ಅವರಿಗೆ ಖುರ್ಚಿ ಮುಖ್ಯನೇ ಹೊರತು ನ್ಯಾಯವಲ್ಲ. 135 ಸೀಟ್ ಬಂದಿದೆ ಅಂತಾ ಮಾಡಬಾರದ್ದನ್ನೆಲ್ಲಾ ಮಾಡ್ತಿದ್ದಾರೆ. 23 ಕೋಟಿ ಇದ್ದ ವರಮಾನ 163 ಕೋಟಿಗೆ ಹೆಚ್ಚಳವಾಗಿದೆ. ಡಿಕೆ ಶಿವಕುಮಾರ್ ಸಿಬಿಐ ಕೇಸನ್ನು ಸಚಿವ ಸಂಪುಟ ವಾಪಸ್ ತಗೊಂಡಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ ಎಂದು ಹೇಳಿದ್ದಾರೆ.