ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿ ಕೆಪಿಸಿಸಿ ಅಧ್ಯಕ್ಷರನ್ನ ಭೇಟಿ ಮಾಡಿದ ಎಚ್. ವಿಶ್ವನಾಥ್, ಕೆಲಕಾಲ ಸಮಾಲೋಚನೆ ಸಹ ನಡೆಸಿದರು. ಎಂಎಲ್ಸಿ ವಿಶ್ವನಾಥ್ ಅವರಿಗೆ ವಿಧಾನ ಪರಿಷತ್ ವಿರೋಧ ಪಕ್ಷದ ಮಾಜಿ ನಾಯಕ ಎಸ್.ಆರ್. ಪಾಟೀಲ್ ಅವರು ಸಾಥ್ ನೀಡಿದರು.
ಬಿಜೆಪಿ ಹಾಗೂ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನಗೊಂಡಿರುವ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್, ಕಾಂಗ್ರೆಸ್ ಸೇರುವ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ. ಇದರ ನಡುವೆಯೇ ಎಚ್. ವಿಶ್ವನಾಥ್ ಕಾಂಗ್ರೆಸ್ ನಾಯಕರನ್ನ ಭೇಟಿಯಾಗುತ್ತಿರುವುದು ಈ ಚರ್ಚೆಗೆ ಮತ್ತಷ್ಟು ಪುಷ್ಟಿ ನೀಡುತ್ತಿದೆ.
ಕಳೆದ ಕೆಲವು ದಿನಗಳಿಂದಲೂ ಬೆಂಗಳೂರಿನಲ್ಲಿರುವ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನ ಭೇಟಿಯಾಗಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿ ಕೆಪಿಸಿಸಿ ಅಧ್ಯಕ್ಷರನ್ನ ಭೇಟಿ ಮಾಡಿದ ಎಚ್. ವಿಶ್ವನಾಥ್, ಕೆಲಕಾಲ ಸಮಾಲೋಚನೆ ಸಹ ನಡೆಸಿದರು. ಎಂಎಲ್ಸಿ ವಿಶ್ವನಾಥ್ ಅವರಿಗೆ ವಿಧಾನ ಪರಿಷತ್ ವಿರೋಧ ಪಕ್ಷದ ಮಾಜಿ ನಾಯಕ ಎಸ್.ಆರ್. ಪಾಟೀಲ್ ಅವರು ಸಾಥ್ ನೀಡಿದರು.
ಇತ್ತೀಚೆಗಷ್ಟೇ ಅಡಗೂರು ಎಚ್. ವಿಶ್ವನಾಥ್, ಕಾಂಗ್ರೆಸ್ ಮುಖಂಡರೊಂದಿಗೆ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿಯಾಗಿ, ಕೆಲಕಾಲ ಮಾತುಕತೆ ಸಹ ನಡೆಸಿದ್ದರು. ಇದಕ್ಕೂ ಮುನ್ನ ದೆಹಲಿಗೆ ಭೇಟಿ ನೀಡಿದ್ದ ಅವರು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಸಹ ಭೇಟಿಯಾಗಿ, ಮಾತುಕತೆ ನಡೆಸಿದ್ದರು.
ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್, ಬಿಜೆಪಿ ನಾಯಕರ ವಿರುದ್ಧ ಅಸಮಾಧಾನಗೊಂಡು ಈಗಾಗಲೇ ಪಕ್ಷದ ಕಾರ್ಯಕ್ರಮಗಳಿಂದ ದೂರ ಉಳಿದಿದ್ದಾರೆ. ಇದರ ನಡುವೆಯೇ ಎಚ್. ವಿಶ್ವನಾಥ್ ಅವರು ಕಾಂಗ್ರೆಸ್ ನಾಯಕರನ್ನ ಭೇಟಿಯಾಗುತ್ತಿರುವುದನ್ನ ಗಮನಿಸಿದರೆ, ʼಹಳ್ಳಿಹಕ್ಕಿʼ ಮರಳಿ ಕಾಂಗ್ರೆಸ್ ಗೂಡು ಸೇರುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ. ಒಂದೆಡೆ ವಿಶ್ವನಾಥ್ ಕಾಂಗ್ರೆಸ್ ನಾಯಕರನ್ನ ಭೇಟಿಯಾಗುವುದರಲ್ಲಿ ತೊಡಗಿದ್ದರೆ, ಸರ್ಕಾರ ಇವರನ್ನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಿದೆ.