Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಮೇಕೆದಾಟು ಜತೆಯೇ ಬದುಕಿ, ಸಾಯಲು ಸಿದ್ಧ : ಬಿಜೆಪಿ, ಮೇಧಾ ಪಾಟ್ಕರ್, ಚೇತನ್ ಗೆ ನೇರ ಉತ್ತರ ಕೊಟ್ಟ ಡಿ ಕೆ ಶಿವಕುಮಾರ್

ಪ್ರತಿಧ್ವನಿ

ಪ್ರತಿಧ್ವನಿ

January 15, 2022
Share on FacebookShare on Twitter

ಮೇಕೆದಾಟು ಯೋಜನೆಗೆ ನರ್ಮದಾ ಬಚಾವೋ ಆಂದೋಲನದ ರೂವಾರಿ ಮೇಧಾ ಪಾಟ್ಕರ್ ಹಾಗೂ ನಟ ಚೇತನ್ ಅಹಿಂಸಾ ಸೇರಿದಂತೆ ಇತರರು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಅವರ ಅಭಿಪ್ರಾಯ ಅವರದ್ದು ಎಂದಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ರಾಜ್ಯಕ್ಕೆ ಏಮ್ಸ್ ನೀಡುವ ಭರವಸೆ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಕೋರಿಕೆಗೆ ಕೇಂದ್ರ ಸಕಾರಾತ್ಮಕ ಸ್ಪಂದನೆ!

ಇಂಜಿನಿಯರ್‌ಗಳು, ಕಂಟ್ರಾಕ್ಟರ್‌ಗಳು ಹಾಗೂ ಸರ್ಕಾರ ಎಲ್ಲರೂ ಸೇರಿ ಗೋಲ್ಮಾಲ್‌ ಮಾಡಿದ್ದಾರೆ : ಸಿದ್ದರಾಮಯ್ಯ

ಭ್ರಷ್ಟ ಬಿಜೆಪಿ ನಾಯಕರ ಆಸ್ತಿ ಹರಾಜು ಹಾಕಿ ಮಳೆ ಸಂತ್ರಸ್ತರಿಗೆ ಪರಿಹಾರ ನೀಡಿ : ಮೋಹನ್‌ ದಾಸರಿ ಆಗ್ರಹ

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಧಾ ಪಾಟ್ಕರ್ ಬಗ್ಗೆ ನಮಗೆ ಗೌರವವಿದೆ. ಅವರು ತಮ್ಮದೇ ಆದ ಚಿಂತನೆಗಳ ಮೇಲೆ ಹೋರಾಟ ಮಾಡಿಕೊಂಡು ಬಂದಿದ್ದಾರೆ. ನಮ್ಮ ಹೋರಾಟ ವ್ಯಕ್ತಿಗತ ಚಿಂತನೆಯಲ್ಲ, ಜನರ ಚಿಂತನೆ. ನಮ್ಮದು ಜನರ ಬಯಕೆ, ಬದುಕಿನ ಹೋರಾಟ. ನೀರು ನಮಗೆ ಜೀವ, ಜೀವ ಇದ್ದರಷ್ಟೇ ಜೀವನ. ಅವರ ಅಭಿಪ್ರಾಯ ಅವರದ್ದು. ಸರ್ಕಾರ ಇಂತಹ ಯೋಜನೆಗೆ ಪರಿಸರ ಇಲಾಖೆ ಅನುಮತಿಯಂತಹ ಕಾನೂನು ಮಾಡಿರುವುದು ಇವರಿಗಾಗಿಯೇ ಎಂದಿದ್ದಾರೆ.

ಕೆಲವರು ಒಂದು ಎಕರೆ ಮುಳುಗಡೆಯಾದರೆ ಎರಡು ಎಕರೆ ನೀಡಬೇಕು ಎಂದು ಹೇಳುತ್ತಾರೆ. ರಸ್ತೆ ಅಗಲ ಮಾಡಿದರೆ ಆಸ್ತಿ ಹೋಗುತ್ತದೆ ಎಂದು ಸುಮ್ಮನಿದ್ದರೆ ರಸ್ತೆ ಆಗುವುದಿಲ್ಲ. ರಾಜೀವ್ ಗಾಂಧಿ ಅವರು ಯೋಜನೆಗಳಿಗೆ ಆಸ್ತಿ ಸ್ವಾಧೀನ ಕಾನೂನು ತಂದು ಜನರಿಗೆ ಉತ್ತಮ ಪರಿಹಾರ ಸಿಗುವಂತೆ ಮಾಡಿದರು. ಕೆಲವರು ಸರ್ಕಾರಿ ಅಧಿಕಾರಿಗಳನ್ನು ಜೊತೆ ಮಾಡಿಕೊಂಡು ಸುಳ್ಳು ದಾಖಲೆ ಸೃಷ್ಟಿಸಿ ಕೋಟ್ಯಂತರ ಹಣ ಪರಿಹಾರಕ್ಕೆ ಆಗ್ರಹಿಸುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುಂದುವರೆದು ಮೇಕೆದಾಟು ಯೋಜನೆ ಎಲ್ಲರಿಗೂ ಅನುಕೂಲವಾಗಲಿದ್ದು, ನಮ್ಮ ಸರ್ಕಾರ ಇದ್ದಾಗ ಕಾವೇರಿ ನ್ಯಾಯಾಧಿಕರಣ ತೀರ್ಪು ಹೊರ ಬಂದಿತ್ತು. ಹೀಗಾಗಿ ಈ ಯೋಜನೆಗೆ ಜೀವ ಬಂದಿತು. ತೀರ್ಪು ಬಂದ ನಂತರ ಡಿಪಿಆರ್ ಮಾಡಿದ್ದೆವು. ನಮ್ಮ ಸರ್ಕಾರ ಇನ್ನೂ ಕೆಲ ತಿಂಗಳುಗಳ ಕಾಲ ಇದಿದ್ದರೆ ಈ ಯೋಜನೆ ಒಂದು ಹಂತಕ್ಕೆ ಬರುತ್ತಿತ್ತು. ಬಿಜೆಪಿ ಸರ್ಕಾರ ಈ ಯೋಜನೆ ಮುಂದಕ್ಕೆ ತೆಗೆದುಕೊಂಡು ಹೋಗಲಿದೆ ಎಂದು ಭಾವಿಸಿದ್ದೆ. ಆದರೆ ಅದು ಅಲಿಗೆ ನಿಂತಿದೆ ಎಂದು ವಿವರಿಸಿದರು.

ಉತ್ತರಿಸಲು ಬೊಮ್ಮಾಯಿ ಸೂಕ್ತ ವ್ಯಕ್ತಿ

ಯಾರು ಏನು ಬೇಕಾದರೂ ಮಾಡಿಕೊಳ್ಳಲಿ. ಅವರಿಗೆ ಉತ್ತರ ಕೊಡಲು ಸರ್ಕಾರ ಇದೆ, ನಾವ್ಯಾಕೆ ಉತ್ತರಿಸೋಣ? ನಾನು ಸರ್ಕಾರವಲ್ಲ. ನಾವು ಮೇಧಾ ಪಾಟ್ಕರ್ ಅವರ ಭಾವನೆ ಗೌರವಿಸುತ್ತೇವೆ. ಯೋಜನೆಗೆ ನನ್ನದೂ ಸೇರಿದಂತೆ ನಮ್ಮ ಕ್ಷೇತ್ರದ ಜನರ ಆಸ್ತಿಗಳು ಯೋಜನೆಗೆ ಹೋಗುತ್ತಿದ್ದು, ವಿರೋಧ ಮಾಡುವುದಾದರೆ ನಾವುಗಳು ಮಾಡಬೇಕು. ಈ ಯೋಜನೆಯಿಂದ ನಮ್ಮ ತಾಲೂಕಿಗೆ ಬಹಳ ನಷ್ಟ ಉಂಟಾಗಲಿದೆ. ಬೆಂಗಳೂರಿಗೆ ನೀರು ತರಬೇಕಾದರೆ ನಮ್ಮ ಜಮೀನು ಹೋಗುತ್ತವೆ. ರೈತರ ಜಮೀನಿಗೆ ಉತ್ತಮ ಬೆಲೆ ನೀಡುವಂತೆ ಹೋರಾಟ ಮಾಡುತ್ತೇವೆ. ಮಳವಳ್ಳಿ ಮೂಲಕವಾಗಿ ಬೆಂಗಳೂರಿಗೆ ನೀರು ತಂದಿದ್ದಾರಲ್ಲಾ, ಅಲ್ಲೆಲ್ಲಾ ರೈತರಿಗೆ ಎಷ್ಟು ಪರಿಹಾರ ಕೊಟ್ಟಿದ್ದಾರೆ ಗೊತ್ತಾ? ಎಕರೆಗೆ ಕೇವಲ 30 ಸಾವಿರ, 50 ಸಾವಿರ, 1 ಲಕ್ಷದಂತೆ ಪರಿಹಾರ ಕೊಟ್ಟಿದ್ದಾರೆ. ಅವರು ಹಿರಿಯ ಮಹಿಳೆ, ಅವರಿಗೆ ಉತ್ತರ ನೀಡಲು ಬೊಮ್ಮಾಯಿ ಅವರು ಸೂಕ್ತ ವ್ಯಕ್ತಿ’ ಎಂದು ಉತ್ತರಿಸಿದರು.

ಬೆಂಗಳೂರಿನ ಕೆರೆ ಕಟ್ಟೆಗಳ ಜೀರ್ಣೋದ್ಧಾರ ಮಾಡಿದರೆ ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸಬಹುದು ಎನ್ನುತ್ತಾರೆ. ಸರ್ಕಾರ ಈ ವಿಚಾರವಾಗಿ ಸಮಿತಿ ಮಾಡಲಿ. ಎಲ್ಲಿ ಕಟ್ಟುನಿಟ್ಟಿನ ಪಾಲನೆ ಆಗುತ್ತಿದೆ. ಎಲ್ಲರೂ ಮಳೆ ನೀರಿನ ಕೊಯ್ಲು ಪದ್ಧತಿ ಅಳವಡಿಸಿಕೊಳ್ಳಬೇಕು ಎಂಬ ನಿಯಮವಿದೆ. ಎಲ್ಲರೂ ಅದನ್ನು ಎಲ್ಲಿ ಮಾಡುತ್ತಿದ್ದಾರೆ?’ ಎಂದು ಪ್ರಶ್ನಿಸಿದರು.

ಬಿಜೆಪಿ ಸರ್ಕಾರ ಮೇಕೆದಾಟು ಮಾಡಲಿ ಬಿಡಲಿ, ನನ್ನ ಮೇಲೆ ಅವರು ಏನೆಲ್ಲ ಪ್ರಯೋಗ ಮಾಡಬಹುದೋ ಅದನ್ನು ಮಾಡುತ್ತಿದ್ದಾರೆ. ಈಗ ನನ್ನ ಮಗಳು ಹೇಳುತ್ತಿದ್ದಾಳೆ, ನಮ್ಮ ಶಾಲೆಗೂ ನೋಟೀಸ್ ಕೊಟ್ಟು ಕಿರುಕುಳ ನೀಡುತ್ತಿದ್ದಾರೆ. ಇದಕ್ಕೆ ಕೊನೆ ಇಲ್ಲ, ನಾವು ಇದರ ಜತೆಯೇ ಬದುಕಿ, ಸಾಯಲು ಸಿದ್ಧರಿದ್ದೇವೆ. ಇದನ್ನು ಎದುರಿಸದೆ ಬೇರೆ ಏನೂ ಮಾಡಲು ಆಗುವುದಿಲ್ಲ. ಕೇಸ್ ಹಾಕುವುದಾದರೆ ಒಟ್ಟಿಗೆ ಹಾಕಬಹುದು. ದಿನಾ ಒಂದೊಂದು ಕೇಸ್ ಯಾಕೆ ಹಾಕುತ್ತಾರೆ? ಎಲ್ಲರ ಮೇಲೂ ಕೇಸ್ ಹಾಕಬಹುದಲ್ಲಾ? ಯಾಕೆ ಬಿಜೆಪಿ ನಾಯಕರ ಮೇಲೆ ಕೇಸ್ ಇಲ್ಲ? ಬಿಜೆಪಿ ಕಾರ್ಯಕ್ರಮಗಳಲ್ಲಿ ಕೇವಲ 30 ಜನ ಮಾತ್ರ ಇದ್ದರಾ? ಅವರು ನನ್ನನ್ನು ಜೈಲಿಗೆ ಹಾಕಿ ಖುಷಿ ಪಡಬಹುದು, ಪಡಲಿ ಬಿಡಿ ಎಂದರು.

ಮುಖ್ಯಮಂತ್ರಿಗಳು ರಾಮನಗರ ಕಾರ್ಯಕ್ರಮಕ್ಕೆ ಬಂದ ದಿನವೇ ಆದೇಶ ಬಂದಿದ್ದು, ಅದರ ಮೇಲೆ ಕೇಸ್ ದಾಖಲಾಗಬೇಕು ಅಲ್ಲವೇ? ವಿಧಾನಸೌಧ ಕಾರ್ಯಕ್ರಮದ ವಿರುದ್ಧ ಕೇಸ್ ಹಾಕಲಿ. ಪೊಲೀಸ್ ಕಮಿಷನರ್ ಅವರು ತಮ್ಮ ವೃತ್ತಿ, ಸ್ಥಾನ ಹಾಗೂ ಸಮವಸ್ತ್ರಕ್ಕೆ ಗೌರವ ನೀಡುವುದಾದರೆ ಅಲ್ಲಿಗೆ ಬಂದಿದ್ದ ಎಲ್ಲರ ಮೇಲೂ ಕೇಸ್ ದಾಖಲಿಸಲಿ. ರಾಮನಗರ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಇತ್ತಾ? ಜನಾಶೀರ್ವಾದ ಯಾತ್ರೆ ವಿಚಾರದಲ್ಲಿ ಮಂತ್ರಿಗಳ ವಿರುದ್ಧ ಯಾಕೆ ಕ್ರಮ ಇಲ್ಲ?’ ಎಂದು ಪ್ರಶ್ನಿಸಿದ್ದಾರೆ.

ಪಾದಯಾತ್ರೆ ಬಾವುಟ ಕಟ್ಟಲು ತಮಿಳುನಾಡಿನ ಕಾರ್ಮಿಕರು ಬಂದಿದ್ದಾರೆ ಎಂಬ ಕುಮಾರಸ್ವಾಮಿಯವರ ಟೀಕೆಗೆ, ‘ತಮಿಳುನಾಡಿನ ಜನ ನಮ್ಮ ಸಹೋದರರು, ನಾವು ಭಾರತದಲ್ಲಿ ವಾಸಿಸುತ್ತಿದ್ದೇವೆ. ಬೆಂಗಳೂರಿನ ಅನೇಕ ಜನ ಹೊಸೂರಿನಲ್ಲಿ ಕೆಲಸ ಮಾಡಿ ಬರುತ್ತಿದ್ದಾರೆ. ತಮಿಳುನಾಡು ಜನರಿಗೆ ನಾವು ಶಿಕ್ಷಣ ನೀಡುತ್ತಿದ್ದೇವೆ. ಗಡಿಯಲ್ಲಿ ನಾವು ಕಿತ್ತಾಡಬೇಕಾ? ನಮ್ಮ ಜಮೀನು ಅವರ ಜಮೀನು ಅಕ್ಕಪಕ್ಕ ಇದೆ. ಅವರು ಬಂದು ಇಲ್ಲಿ ಕೆಲಸ ಮಾಡಬಾರದೆ? ಮುಂಚೆ ತಮಿಳುನಾಡು, ಆಂಧ್ರಪ್ರದೇಶಗಳಿಂದ ಭಟ್ಟರು ಬರುತ್ತಿದ್ದರು. ಈಗ ಅವರು ಎಲ್ಲಿದ್ದಾರೆ? ಅವರು ಸುಮ್ಮನೆ ತಮ್ಮ ಚಪಲಕ್ಕೆ ಮಾತನಾಡುತ್ತಾರೆ, ಮಾತನಾಡಲಿ ಬಿಡಿ’ ಎಂದರು.

RS 500
RS 1500

SCAN HERE

don't miss it !

ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಶಿಕ್ಷಣದ ಬಗ್ಗೆ ಬುದ್ಧಿಜೀವಿಗಳು ತಮ್ಮ ಬೂಟಾಟಿಕೆಯನ್ನು ಕೊನೆಗೊಳಿಸಬೇಕು
ಅಭಿಮತ

ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಶಿಕ್ಷಣದ ಬಗ್ಗೆ ಬುದ್ಧಿಜೀವಿಗಳು ತಮ್ಮ ಬೂಟಾಟಿಕೆಯನ್ನು ಕೊನೆಗೊಳಿಸಬೇಕು

by ಫೈಝ್
May 15, 2022
ಸೇನೆ-ಉಗ್ರರ ನಡುವಿನ ಗುಂಡಿನ ಕಾಳಗ ಓರ್ವ ನಾಗರೀಕ ಸಾವು
ದೇಶ

ಸೇನೆ-ಉಗ್ರರ ನಡುವಿನ ಗುಂಡಿನ ಕಾಳಗ ಓರ್ವ ನಾಗರೀಕ ಸಾವು

by ಪ್ರತಿಧ್ವನಿ
May 15, 2022
ನಿರ್ದೇಶಕ: ಕೆಜಿಎಫ್ ತರ ಸಿನಿಮಾ ಮಾಡೋ ತಾಕತ್ತಿದೆ 
ಇದೀಗ

ನಿರ್ದೇಶಕ: ಕೆಜಿಎಫ್ ತರ ಸಿನಿಮಾ ಮಾಡೋ ತಾಕತ್ತಿದೆ 

by ಪ್ರತಿಧ್ವನಿ
May 17, 2022
ಮುಂಬೈ ನಂತರ ಗುಜರಾತ್‌ ನಲ್ಲಿ ಎಕ್ಸ್‌ ವಿ ವೈರಸ್‌ ಪತ್ತೆ!
ಕರ್ನಾಟಕ

ರಾಜ್ಯದಲ್ಲಿಂದು 103 ಕೊರೊನಾ ಸೋಂಕು ದೃಢ

by ಪ್ರತಿಧ್ವನಿ
May 14, 2022
ಎಲ್ಲೆಮೀರಿ ಹಿಗ್ಗುತ್ತಿರುವ ಹಣದುಬ್ಬರ, ಏಪ್ರಿಲ್ ತಿಂಗಳಲ್ಲಿ ಶೇ.7.79ಕ್ಕೆ ಜಿಗಿತ
ದೇಶ

ಎಲ್ಲೆಮೀರಿ ಹಿಗ್ಗುತ್ತಿರುವ ಹಣದುಬ್ಬರ, ಏಪ್ರಿಲ್ ತಿಂಗಳಲ್ಲಿ ಶೇ.7.79ಕ್ಕೆ ಜಿಗಿತ

by ಪ್ರತಿಧ್ವನಿ
May 12, 2022
Next Post
ಜನವರಿ 22ರವರೆಗೂ ಚುನಾವಣಾ ಸಮಾವೇಶ ಮಾಡಕೂಡದು : ಚುನಾವಣಾ ಆಯೋಗ

ಜನವರಿ 22ರವರೆಗೂ ಚುನಾವಣಾ ಸಮಾವೇಶ ಮಾಡಕೂಡದು : ಚುನಾವಣಾ ಆಯೋಗ

ಉತ್ತರ ಕರ್ನಾಟಕದ ಸಾಲು ಸಾಲು ಜಾತ್ರೆಗಳು ಬಂದ್‌ : ಸ್ವಾವಲಂಬಿ ಜೀವನಕ್ಕೆ ತಣ್ಣೀರೆರಚಿದ ಕೋವಿಡ್

ಉತ್ತರ ಕರ್ನಾಟಕದ ಸಾಲು ಸಾಲು ಜಾತ್ರೆಗಳು ಬಂದ್‌ : ಸ್ವಾವಲಂಬಿ ಜೀವನಕ್ಕೆ ತಣ್ಣೀರೆರಚಿದ ಕೋವಿಡ್

ಸರಣಿ ಸೋಲಿನ ಬಳಿಕ ಟೆಸ್ಟ್ ನಾಯಕತ್ವ ತ್ಯಜಿಸಿದ ವಿರಾಟ್ ಕೊಹ್ಲಿ : ಟ್ವೀಟ್‌ ಮಾಡಿ ಸ್ಪಷ್ಟನೆ

ಸರಣಿ ಸೋಲಿನ ಬಳಿಕ ಟೆಸ್ಟ್ ನಾಯಕತ್ವ ತ್ಯಜಿಸಿದ ವಿರಾಟ್ ಕೊಹ್ಲಿ : ಟ್ವೀಟ್‌ ಮಾಡಿ ಸ್ಪಷ್ಟನೆ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist