ಹಿರಿಯ ನಟ ಮತ್ತು ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಸಂಸ್ಥಾಪಕ ನಾಯಕ ವಿಜಯಕಾಂತ್ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಹಲವು ದಿನಗಳಿಂದ ಉಸಿರಾಟದ ತೊಂದರೆ, ಜ್ವರ, ಕೆಮ್ಮಿನಿಂದ ಬಳಲುತ್ತಿದ್ದ ಅವರು ಚೆನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೇ ವೇಳೆ ಅವರಿಗೆ ಕರೊನಾ ಸೋಂಕು ತಗುಲಿರುವ ವರದಿ ಬಂದಿದೆ.

ಆಸ್ಪತ್ರೆಯು ಈ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ಕ್ಯಾಪ್ಟನ್ ವಿಜಯಕಾಂತ್ ಅವರು ನ್ಯುಮೋನಿಯಾದಿಂದ ಬಳಲುತ್ತಿದ್ದರು. ಇಲ್ಲಿ ದಾಖಲಾದ ಬಳಿಕ ವೆಂಟಿಲೇಟರಿ ಬೆಂಬಲದಲ್ಲಿದ್ದರು. ವೈದ್ಯಕೀಯ ಸಿಬ್ಬಂದಿಯ ಅತ್ಯುತ್ತಮ ಪ್ರಯತ್ನದ ಹೊರತಾಗಿಯೂ ಅವರು ಬೆಳಗ್ಗೆ ಅಸುನೀಗಿದರು ಎಂದು ತಿಳಿಸಿದೆ.











