ಟೈಟಲ್, ಟೀಸರ್ ಹಾಗೂ ಹಾಡುಗಳ ಮೂಲಕ ಸಿನಿರಸಿಕರ ಗಮನ ಸೆಳೆದಿದ ಧರಣಿ ಮಂಡಲ ಮಧ್ಯದೊಳಗೆ ಚಿತ್ರವು ಬಿಡುಗಡೆಯಾಗಿ ಎಲ್ಲೆಡೆ ದೊಡ್ಡ ಮಟ್ಟದ ರೆಸ್ಪಾನ್ಸ್ ಪಡೆದುಕೊಂಡಿದೆ.
ಡಿಸೆಂಬರ್ 2ರಂದು ಚಿತ್ರ ಬಿಡುಗಡೆಯಾಗಿದ್ದು ಚಿತ್ರ ವೀಕ್ಷಿಸಿದ ಪ್ರತಿಯೊಬ್ಬರು ಸಹ ಸಿನಿಮಾದ ಬಗ್ಗೆ ಮೆಚ್ಚುಗೆಯೆ ಮಾತುಗಳನ್ನಾಡಿದ್ದಾರೆ ಇದೀಗ ಚಿತ್ರವು 25ನೇ ದಿನದತ್ತ ಕಾಲಿಟ್ಟಿದೆ.
ಗುಳ್ಟು ಖ್ಯಾತಿಯ ನವೀನ್ ಶಂಕರ್, ಐಶಾನಿ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿರುವ ಈ ಚಿತ್ರದಲ್ಲಿ ಯಶ್ ಶೆಟ್ಟಿ, ಸಿದ್ದು ಮೂಲಿಮನಿ, ಪ್ರಕಾಶ್ ತುಮ್ಮಿನಾಡು, ಓಂಕಾರ್, ನಿತೇಶ್ ಮಹಾನ್, ಜಯಶ್ರೀ ಆರಾಧ್ಯ, ಶಾಂಭವಿ ಒಳಗೊಂಡ ತಾರಾಗಣವಿದೆ.
ಚಿತ್ರದ ಪ್ರತಿ ಪಾತ್ರವರ್ಗವೂ ಅಚ್ಚುಕಟ್ಟಾದ ನಟನೆ ಮೂಲಕ ಸಿನಿಮಾ ತೂಕವನ್ನು ಹೆಚ್ಚಿಸಿದ್ದು, ಡಾಲಿ ಧನಂಜಯ್, ಶೃತಿ ಹರಿಹರನ್ ಸೇರಿದಂತೆ ಚಿತ್ರರಂಗದ ಅನೇಕ ಕಲಾವಿದರು ಸಿನಿಮಾ ನೋಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಚಿತ್ರಕ್ಕೆ ಶ್ರೀಧರ್ ಶಿಕಾರಿಪುರ ಆಕ್ಷನ್ ಕಟ್ ಹೇಳಿದ್ದು ಬಾಕ್ಸ್ ಆಫೀಸ್ ಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿ ಒಂಕಾರ್ ಬಂಡವಾಳ ಹೂಡಿದ್ದಾರೆ. ವೀರೇಂದ್ರ ಕಂಚನ್, ಗೌತಮಿ ರೆಡ್ಡಿ ಸಹ ನಿರ್ಮಾಣವಿದೆ. ಕೀರ್ತನ್ ಪೂಜಾರಿ ಕ್ಯಾಮೆರಾ ವರ್ಕ್, ರೋಣದ ಬಕ್ಕೇಶ್, ಕಾರ್ತಿಕ್ ಚೆನ್ನೋಜಿರಾವ್ ಸಂಗೀತ ನಿರ್ದೇಶನ, ಉಜ್ವಲ್ ಚಂದ್ರ ಸಂಕಲನ ಚಿತ್ರಕ್ಕಿದೆ.