ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ರಕ್ಷಣಾ ಕಾರ್ಯಾಚರಣೆಗಳು ಮತ್ತು ಭದ್ರತಾ ಪಡೆಗಳ ಚಲನವಲನಗಳ ನೇರ ಪ್ರಸಾರವನ್ನು ತೋರಿಸದಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯಎಲ್ಲಾ ಮಾಧ್ಯಮ ವಾಹಿನಿಗಳಿಗೆ ಸಲಹೆ ನೀಡಿದೆ.

ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ, ಎಲ್ಲಾ ದೃಶ್ಯ ಮಾಧ್ಯಮ, ಸುದ್ದಿ ಸಂಸ್ಥೆಗಳು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು, ದೇಶದ ರಕ್ಷಣೆ ಮತ್ತು ಇತರ ಭದ್ರತೆಗೆ ಸಂಬಂಧಿಸಿದ ಕಾರ್ಯಾಚರಣೆಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ವರದಿ ಮಾಡುವಾಗ ಅತ್ಯಂತ ಜವಾಬ್ದಾರಿಯನ್ನು ವಹಿಸಬೇಕು ಮತ್ತು ಅಸ್ತಿತ್ವದಲ್ಲಿರುವ ಕಾನೂನುಗಳು ಮತ್ತು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಈ ಸಲಹೆಯಲ್ಲಿ ತಿಳಿಸಲಾಗಿದೆ.

ಪಹಲ್ಗಾಮ್ ನಲ್ಲಿ ಪ್ರವಾಸಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ ಬೆನ್ನಲ್ಲೇ , ಭಾರತೀಯ ಸೇನೆ ಆಪರೇಷನ್ ಟಿಕ್ಕಾ ಆರಂಭಿಸಿರುವ ಹಿನ್ನಲೆ, ವಾರ್ತಾ ಸಚಿವಾಲಯ ಈ ಸೂಚನೆ ನೀಡಿದೆ.