• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ ಅಭಿಮತ

ಸುಪ್ರೀಂ ಚಾಟಿ ಬಳಿಕ IT ಸೆಕ್ಷನ್‌ 66ಎ ಅಡಿ ಪ್ರಕರಣ ದಾಖಲಿಸದಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಗೃಹ ಇಲಾಖೆ ನಿರ್ದೇಶನ

ಪ್ರತಿಧ್ವನಿ by ಪ್ರತಿಧ್ವನಿ
July 15, 2021
in ಅಭಿಮತ, ದೇಶ
0
ಸುಪ್ರೀಂ ಚಾಟಿ ಬಳಿಕ IT ಸೆಕ್ಷನ್‌ 66ಎ ಅಡಿ ಪ್ರಕರಣ ದಾಖಲಿಸದಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಗೃಹ ಇಲಾಖೆ ನಿರ್ದೇಶನ
Share on WhatsAppShare on FacebookShare on Telegram

ಸುಪ್ರೀಂ ಕೋರ್ಟ್‌ ಶ್ರೇಯಾ ಸಿಂಗಾಲ್‌ ವರ್ಸಸ್‌ ಭಾರತ ಸರ್ಕಾರದ ಪ್ರಕರಣದಲ್ಲಿ ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್‌ 66ಎ ಅನ್ನು ವಜಾ ಮಾಡಿರುವ ಹಿನ್ನೆಲೆಯಲ್ಲಿ ಸದರಿ ಸೆಕ್ಷನ್‌ ಅಡಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ದಾಖಲಿಸಿರುವ ಎಲ್ಲಾ ದೂರುಗಳನ್ನು ಹಿಂಪಡೆಯುವಂತೆ ಹಾಗೂ ಮುಂದೆ ಆ ಸೆಕ್ಷನ್‌ ಅಡಿ ಯಾರ ವಿರುದ್ಧವೂ ದೂರು ದಾಖಲಿಸದಂತೆ ರಾಜ್ಯ ಸರ್ಕಾರಗಳಿಗೆ ಬುಧವಾರ ಕೇಂದ್ರ ಗೃಹ ಇಲಾಖೆ ನಿರ್ದೇಶನ ನೀಡಿದೆ.

ADVERTISEMENT

ತಂತ್ರಜ್ಞಾನ ಕಾಯಿದೆಯ ಸೆಕ್ಷನ್‌ 66ಎ ಅನ್ನು ವಜಾ ಮಾಡಿ ಅಸಾಂವಿಧಾನಿಕ ಎಂದು ಘೋಷಿಸಿರುವ ನಡುವೆಯೂ ಅದರ ಅಡಿ ಪ್ರಕರಣ ದಾಖಲಿಸುತ್ತಿರುವುದರ ಬಗ್ಗೆ ಸುಪ್ರೀಂ ಕೋರ್ಟ್‌ ಗಂಭೀರವಾಗಿ ತೆಗೆದುಕೊಂಡಿದ್ದು ಈ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಪೊಲೀಸ್‌ ಮಹಾನಿರ್ದೇಶಕರಿಗೆ ಪತ್ರ ಬರೆಯಲಾಗಿದೆ.

“ಐಟಿ ಕಾಯಿದೆಯ ವಜಾ ಮಾಡಲಾಗಿರುವ ಸೆಕ್ಷನ್‌ 66ಎ ಅಡಿ ಕೆಲವು ಪೊಲೀಸ್‌ ಠಾಣೆಗಳಲ್ಲಿ ದೂರು ದಾಖಲಿಸಲಾಗುತ್ತಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿರುವ ವಿಚಾರ ನಮ್ಮ ಗಮನಕ್ಕೆ ಬಂದಿದೆ. ಹೀಗಾಗಿ, ಸೆಕ್ಷನ್‌ 66ಎ ಅಡಿ ದೂರು ದಾಖಲಿಸದಂತೆ ಎಲ್ಲಾ ಪೊಲೀಸ್‌ ಠಾಣೆಗಳಿಗೆ ನಿರ್ದೇಶಿಸಬೇಕು. ಅಲ್ಲದೇ, 2015ರ ಮಾರ್ಚ್‌ 24ರಂದು ಸುಪ್ರೀಂ ಕೋರ್ಟ್‌ ಹೊರಡಿಸಿರುವ ಆದೇಶವನ್ನು ಪಾಲಿಸುವಂತೆ ಕಾನೂನು ಜಾರಿ ಸಂಸ್ಥೆಗಳಿಗೆ ಎಚ್ಚರಿಸಬೇಕು” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಅಲ್ಲದೇ, ಸೆಕ್ಷನ್‌ 66ಎ ಅಡಿ ದಾಖಲಿಸಲಾಗಿರುವ ಎಲ್ಲಾ ಪ್ರಕರಣಗಳನ್ನು ತಕ್ಷಣ ಹಿಂಪಡೆಯುವಂತೆಯೂ ಗೃಹ ಇಲಾಖೆ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಸುಪ್ರೀಂ ಕೋರ್ಟ್‌ ಶ್ರೇಯಾ ಸಿಂಘಾಲ್‌ ಪ್ರಕರಣದ ಐತಿಹಾಸಿಕ ತೀರ್ಪಿನಲ್ಲಿ ಐಟಿ ಕಾಯಿದೆಯ ಸೆಕ್ಷನ್‌ 66ಎ ಅನ್ನು ರದ್ದುಗೊಳಿಸಿದ್ದರೂ ಅದನ್ನು ಇನ್ನೂ ಚಾಲ್ತಿಯಲ್ಲಿ ಇಡಲಾಗಿದೆ ಎಂದು ಸರ್ಕಾರೇತರ ಸಂಸ್ಥೆ ಪಿಯುಸಿಎಲ್‌ ಸಲ್ಲಿಸಿದ್ದ ಮನವಿ ಆಧರಿಸಿ ಜುಲೈ 5ರಂದು ಕೇಂದ್ರ ಸರ್ಕಾರಕ್ಕೆ ಸರ್ವೋಚ್ಚ ನ್ಯಾಯಾಲಯ ನೋಟಿಸ್‌ ಜಾರಿ ಮಾಡಿತ್ತು.

ಆರು ವರ್ಷಗಳ ಹಿಂದೆಯೇ ಐಟಿ ಕಾಯಿದೆಯ ಸೆಕ್ಷನ್‌ 66ಎ ಅನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದ್ದರೂ ದೇಶಾದ್ಯಂತ ಹಲವು ಪ್ರಕರಣಗಳನ್ನು ದಾಖಲಿಸಲಾಗುತ್ತಿರುವುದಕ್ಕೆ ನ್ಯಾಯಾಲಯ ಆಘಾತ ವ್ಯಕ್ತಪಡಿಸಿತ್ತು. “ಈಗ ನಡೆಯುತ್ತಿರುವ ಬೆಳವಣಿಗೆ ಭಯಾನಕವಾಗಿದೆ” ಎಂದು ನ್ಯಾಯಮೂರ್ತಿ ರೋಹಿಂಟನ್‌ ನಾರಿಮನ್‌ ನೇತೃತ್ವದ ಪೀಠವು ಅಸಮಾಧಾನ ವ್ಯಕ್ತಪಡಿಸಿತ್ತು.

Source:‌ ಬಾರ್‌ ಅಂಡ್‌ ಬೆಂಚ್

Tags: Home Ministrysection 66aSupreme Court of India
Previous Post

ವಿಶ್ವವಿಖ್ಯಾತ ನಂದಿಬೆಟ್ಟಕ್ಕೆ ರೋಪ್ ವೇ ನಿರ್ಮಾಣ: ಸಚಿವ ಸಿ.ಪಿ.ಯೋಗೇಶ್ವರ್

Next Post

1970ರ ಸಂತಾನ‌ ನಿಯಂತ್ರಣ ಕ್ರಮವನ್ನು ಬಿಜೆಪಿ ವಿರೋಧಿಸದಿರುತ್ತಿದ್ದರೆ ಜನಸಂಖ್ಯೆ ಈಗ ನಿಯಂತ್ರಣದಲ್ಲಿರುತ್ತಿತ್ತು : ಭೂಪೇಶ್ ಬಾಗೆಲ್

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
Next Post
1970ರ ಸಂತಾನ‌ ನಿಯಂತ್ರಣ ಕ್ರಮವನ್ನು ಬಿಜೆಪಿ ವಿರೋಧಿಸದಿರುತ್ತಿದ್ದರೆ ಜನಸಂಖ್ಯೆ ಈಗ ನಿಯಂತ್ರಣದಲ್ಲಿರುತ್ತಿತ್ತು : ಭೂಪೇಶ್ ಬಾಗೆಲ್

1970ರ ಸಂತಾನ‌ ನಿಯಂತ್ರಣ ಕ್ರಮವನ್ನು ಬಿಜೆಪಿ ವಿರೋಧಿಸದಿರುತ್ತಿದ್ದರೆ ಜನಸಂಖ್ಯೆ ಈಗ ನಿಯಂತ್ರಣದಲ್ಲಿರುತ್ತಿತ್ತು : ಭೂಪೇಶ್ ಬಾಗೆಲ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!