• Home
  • About Us
  • ಕರ್ನಾಟಕ
Thursday, December 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ ಅಭಿಮತ

ಅಧಿಕಾರಿಗಳ ವಾಕ್ ಸ್ವಾತಂತ್ರ್ಯಕ್ಕೆ ಸರ್ಕಾರದಿಂದ ಕಡಿವಾಣ: ಅಧಿಕಾರಿಗಳು ಭಾವ ಶೂನ್ಯರಾಗಬೇಕೆಂಬುದು ಬಿಜೆಪಿ ಉದ್ದೇಶವೇ.!?

ಕರ್ಣ by ಕರ್ಣ
September 19, 2021
in ಅಭಿಮತ, ಕರ್ನಾಟಕ, ಸರ್ಕಾರಿ ಗೆಜೆಟ್
0
ಅಧಿಕಾರಿಗಳ ವಾಕ್ ಸ್ವಾತಂತ್ರ್ಯಕ್ಕೆ ಸರ್ಕಾರದಿಂದ ಕಡಿವಾಣ: ಅಧಿಕಾರಿಗಳು ಭಾವ ಶೂನ್ಯರಾಗಬೇಕೆಂಬುದು ಬಿಜೆಪಿ ಉದ್ದೇಶವೇ.!?
Share on WhatsAppShare on FacebookShare on Telegram

ಸರ್ಕಾರಿ ಅಧಿಕಾರಿಗಳ ಪತ್ರಿಕಾಗೋಷ್ಠಿ, ಪತ್ರಿಕಾ ಪ್ರಕಟಣೆಗಳ ಮೂಲಕ ಅನಪೇಕ್ಷಿತ ಹೇಳಿಕೆಗಳನ್ನು ನೀಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಖಡಕ್‌ ಆದೇಶ ಹೊರಡಿಸಿದೆ.ಇನ್ಮುಂದೆ ರಾಜ್ಯದ ಯಾವುದೇ ಇಲಾಖೆ ಅಧಿಕಾರಿಗಳು, ನಂಬಿಕಾರ್ಹ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವುದನ್ನು ಹೊರತುಪಡಿಸಿ, ಪತ್ರಿಕಾಗೋಷ್ಠಿ, ಪತ್ರಿಕಾ ಪ್ರಕಟಣೆಗಳ ಮೂಲಕ ಅನಪೇಕ್ಷಿತ ಹೇಳಿಕೆಗಳನ್ನು ನೀಡುವುದಕ್ಕೆ ಕಡಿವಾಣ ಹಾಕಿದ್ದು, ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಮಹತ್ವದ ಸುತ್ತೋಲೆ ಹೊರಡಿಸಿ ಆದೇಶ ಮಾಡಿದ್ದಾರೆ.

ADVERTISEMENT

ಸರ್ಕಾರಿ ನೌಕರರ ಕುಟುಂಬ ಸದಸ್ಯರನ್ನು ನಿಯಂತ್ರಿಸುವುದು ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆ – ಸಿದ್ದರಾಮಯ್ಯ

ಇತ್ತೀಚೆಗೆ ಸುಪ್ರೀಂ ಕೋರ್ಟ್‌ ಆದೇಶದಂತೆ ಅನಧಿಕೃತ ಕಟ್ಟಡದಲ್ಲಿ ನಿರ್ಮಾಣಗೊಂಡಿರುವ ದೇವಾಲಯಗಳನ್ನು ತೆರವು ಮಾಡುವ ವಿಚಾರವಾಗಿಯೂ ಈ ಅಧಿಕಾರಿಗಳಿಗೆ ಬಹಿರಂಗವಾಗಿ ಹೇಳಿಕೆ ನೀಡುವ ವಿಚಾರ ಬಹಳ ಚರ್ಚೆಯಾಗಿತ್ತು. ಮೈಸೂರು ಹಾಗೂ ಕೊಡಗು ಸಂಸದ ಪ್ರತಾಪ್‌ ಸಿಂಹ ಅಧಿಕಾರಿಗಳನ್ನು ಬಹಿರಂಗವಾಗಿ ಹೇಳಿಕೆ ಕೊಡುವುದರಿಂದ ದೂರ ಇಡಬೇಕು ಎಂದು ಅವರು ಒತ್ತಾಯಿಸಿದ್ದರು. ಅಲ್ಲದೆ ಈಗಾಗಲೇ ಬಿಬಿಎಂಪಿ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾಡಳಿತದಲ್ಲೂ ಡೆಪ್ಯೂಟಿ ಕಮಿಷನರ್‌ ಅಥವಾ ಅದಕ್ಕಿಂತ ಮೇಲ್ಪಟ್ಟ ಅಧಿಕಾರಿಗಳಿಗೆ ಮಾತ್ರ ಮಾಧ್ಯಮಗೋಷ್ಠಿ ಮಾಡಲು ಅವಕಾಶವಿದೆ. ಇದೀಗ ಎಲ್ಲರನ್ನೂ ಸೇರಿದಂತೆ ರಾಜ್ಯ ಸರ್ಕಾರ ಅಧಿಕಾರಿಗಳ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಿದೆ.

ಜನರ ತೆರಿಗೆ ಹಣದಿಂದ ಲಸಿಕೆ ನೀಡಿ ಅದರಲ್ಲಿ ಪ್ರಧಾನಿ ಮೋದಿ ಫೋಟೋ ಮುದ್ರಿಸಿ ಬಿಜೆಪಿ ಪ್ರಚಾರ ಪಡೆದುಕೊಳ್ಳುತ್ತಿದೆ. ಹೀಗೆ ಪಕ್ಷಾತೀತವಾಗಿ ಎಲ್ಲಾ ರಾಜಕಾರಣಿಗಳು ಸರ್ಕಾರದಿಂದ ಸಿಗುವ ಯೋಜನೆಗಳಿಗೆ ತಮ್ಮ ತಮ್ಮ ಕ್ಷೇತ್ರದ ಮಟ್ಟದಲ್ಲಿ ತಮ್ಮ ಫೋಟೋ ಅಂಟಿಸಿ ಇದು ನಮ್ಮ ʻಕೊಡುಗೆʼ ಎಂದು ಬಿಂಬಿಸಿ ಪ್ರಚಾರವನ್ನು ಪಡೆದುಕೊಳ್ಳಲಾಗುತ್ತಿದ್ದಾರೆ. ಅಲ್ಲದೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಎಲ್ಲದರ ʻಕ್ರೆಡಿಟ್‌ʼ ಅನ್ನೂ ತೆಗೆದುಕೊಳ್ಳಲೂ ರಾಜಕಾರಣಿಗಳು ಹಿಂಜರಿಯುವುದಿಲ್ಲ. ಸರ್ಕಾರವೂ ಅಷ್ಟೇ, ಜನರ ತೆರಿಗೆ ಹಣದಿಂದ ಯೋಜನೆ ರೂಪಿಸಿ ಇದು ತಮ್ಮ ಔದಾರ್ಯವೆಂಬಂತೆ ಜಾಹೀರಾತು ಮುದ್ರಿಸಿ ಹಂಚುತ್ತದೆ. ಇದಕ್ಕಂತಲೇ ಕೋಟಿ ಲೆಕ್ಕದಲ್ಲಿ ಹಣವನ್ನೂ ಎಲ್ಲಾ ಸರ್ಕಾರಗಳೂ ಮೀಸಲಿಡುತ್ತಿದೆ. ಇಷ್ಟೆಲ್ಲಾ ಇದ್ದ ಮೇಲೂ, ಇದೇ ಸರ್ಕಾರ ಆಡಳಿತಾತ್ಮಕ ಅಧಿಕಾರಿಗಳು, ಪೊಲೀಸ್‌ ಅಧಿಕಾರಿಗಳ Freedom of Expression ಅನ್ನು ಕಿತ್ತುಕೊಂಡಿರುವುದು ಸಂವಿಧಾನ ಬಾಹಿರವಲ್ಲದೆ ಇನ್ನೇನು.!?

ಸರ್ಕಾರದ ಸುತ್ತೋಲೆಯಲ್ಲಿದೆ ಏನಿದೆ.!?

ಸರ್ಕಾರಿ ಅಧಿಕಾರಿಗಳು ಪತ್ರಿಕಾಗೋಷ್ಠಿ, ಪತ್ರಿಕಾ ಪ್ರಕಟಣೆಗಳ ಮೂಲಕ ಅನಪೇಕ್ಷಿತ ಹೇಳಿಕೆಗಳನ್ನು ನೀಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಇಂತಹ ಪ್ರಸಂಗಗಳು ಸರ್ಕಾರದ ಆಡಳಿತ ವ್ಯವಸ್ಥೆಯ ಮೇಲೆ ದುಷ್ಪರಿಣಾಮ ಬೀರುತ್ತವೆ ಹಾಗೂ ಸರ್ಕಾರಕ್ಕೆ ಮುಜುಗರವನ್ನು ಉಂಟು ಮಾಡುವಂತದ್ದಾಗಿರುವುದರಿಂದ ಅಧಿಕಾರಿಗಳು ಇಂತಹ ನಡೆಯನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಆದುದರಿಂದ ಅಧಿಕಾರಿಗಳು ನಂಬಿಕಾರ್ಹ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವುದನ್ನು ಹೊರತುಪಡಿಸಿ, ಪತ್ರಿಕಾಗೋಷ್ಠಿ, ಪತ್ರಿಕಾ ಪ್ರಕಟಣೆಗಳ ಮೂಲಕ ಅನಪೇಕ್ಷಿತ ಹೇಳಿಕೆಗಳನ್ನು ನೀಡುವುದನ್ನು ನಿಷೇಧಿಸಲಾಗಿದೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಕರ್ನಾಟಕ ಸರ್ಕಾರದ ಅಥವಾ ಯಾವುದೇ ಇತರ ರಾಜ್ಯ ಸರ್ಕಾರದ ಅಥವಾ ಕೇಂದ್ರ ಸರ್ಕಾರದ ಕಾರ್ಯನೀತಿ ಅಥವಾ ಕ್ರಮವನ್ನು ಟೀಕಿಸುವುದು, ಯಾವುದೇ ಸರ್ಕಾರಿ ನೌಕರನು ಆಕಾಶವಾಣಿ ಪ್ರಸಾರದಲ್ಲಾಗಲಿ ಅಥವಾ ದೂರದರ್ಶನದ ಕಾರ್ಯಕ್ರಮದಲಾಗಲೀ ಅಥವಾ ಯಾವುದೇ ಸಾರ್ವಜನಿಕ ಮಾಧ್ಯಮದಲ್ಲಿ ವಾಸ್ತವ ಹೇಳಿಕ ಅಥವಾ ಅಭಿಪ್ರಾಯ ನೀಡುವುದಾಗಲಿ ಅವನ ಹೆಸರಿನಲ್ಲಿ ಅಥವಾ ಅನಾಮಧೇಯವಾಗಿ ಗುಪ್ತನಾಮದಲ್ಲಿ ಅಥವಾ ಬೇರೊಬ್ಬನ ಹೆಸರಿನಲ್ಲಿ ಪ್ರಕಟಿಸಲಾದ ಇತರ ಯಾವುದೇ ದಸ್ತಾವೇಜಿನಲ್ಲಿ ಅಥವಾ ಪತ್ರಿಕೆಗೆ ಬರೆದ ಯಾವುದೇ ಪತ್ರದಲ್ಲಿ ಅಥವಾ ಯಾವುದೇ ಸಾರ್ವಜನಿಕ ಹೇಳಿಕೆಯನ್ನು ನೀಡುವಂತಿಲ್ಲ.

ಪ್ರತಿರೋಧದ ದನಿ ಬಗ್ಗುಬಡಿಯಲು ಸರ್ಕಾರಿ ನೌಕರರ ಮೇಲೆ ಹೊಸ ನಿಯಮ ಪ್ರಯೋಗ!

ಕರ್ನಾಟಕ ಸರ್ಕಾರದ ಅಥವಾ ಕೇಂದ್ರ ಸರ್ಕಾರದ ಅಥವಾ ಯಾವುದೇ ಇತರೆ ರಾಜ್ಯ ಸರ್ಕಾರದ ಪ್ರಸ್ತುತ ಅಥವಾ ಇತ್ತೀಚಿನ ಯಾವುದೇ ನೀತಿ ಅಥವಾ ಕ್ರಮಗಳನ್ನು ಸಮರ್ಥಿಸಿಕೊಳ್ಳುವುದಾಗಲಿ ಅಥವಾ ಟೀಕಿಸುವುದಾಗಲಿ ಯಾವುದೇ ಸಂಗತಿಗಳನ್ನು ನೇರವಾಗಿ ಮಾಧ್ಯಮಗಳ ಜೊತೆ ಹಂಚಿಕೊಳ್ಳುವಂತಿಲ್ಲ ಎಂದು ಸುತ್ತೋಲೆಯಲ್ಲಿ ಸ್ಪಷ್ಟ ಪಡಿಸಲಾಗಿದೆ.

ಸರ್ಕಾರಿ ನೌಕರರ ಕೃತ್ಯಗಳ ಮತ್ತು ನಡತೆಯ ಸಮರ್ಥನೆಗಾಗಿ ನಿಯಮಿಸಲಾದ ಪ್ರಾಧಿಕಾರದ ಪೂರ್ವಾನುಮೋದನೆ ಪಡೆಯದ ಹೊರತು ಯಾವುದೇ ಸರ್ಕಾರಿ ನೌಕರನು ಸರ್ಕಾರದ ಯಾವ ಅಧಿಕೃತ ಕೆಲಸಗಳನ್ನು ಪ್ರತಿಕೂಲ ಟೀಕೆಯ ಅಥವಾ ಮಾನಹಾನಿ ಸ್ವರೂಪದ ನಿಂದನೆಯನ್ನು ಮಾಡುವ ಹಾಗಿಲ್ಲ. ಇನ್ನು ಸರ್ಕಾರದ ವಿರುದ್ಧ ಯಾವುದೇ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ನ್ಯಾಯಾಲಯ ಹಾಗೂ ಮಾಧ್ಯಮದ ಮೊರೆ ಹೋಗುವಂತಿಲ್ಲ.

e-DPAR-228-SAS-2021-18-09-2021-1Download

ಸಾಮಾಜಿಕ ಮಾಧ್ಯಮಗಳನ್ನು ವೇದಿಕೆಗಳನ್ನಾಗಿರಿಸಿಕೊಂಡು ಇಲಾಖೆಯ/ಸರ್ಕಾರದ ಸಾಧನೆಗಳನ್ನು ಅಧಿಕಾರಿಗಳ ವ್ಯಯಕ್ತಿಕ ಸಾಧನಗಳಂಬಂತೆ ಪುದರ್ಶಿಸಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಈ ನಿಟ್ಟಿನಲ್ಲಿ ಇಲಾಖೆಯ ಸಾಧನೆಗಳ ಬಗ್ಗೆ ಅಥವಾ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿಯನ್ನು ಪ್ರಸಾರ ಮಾಡಬೇಕಾದ ಸಂದರ್ಭದಲ್ಲಿ, ಅಧಿಕಾರಿಗಳು ವೈಯಕ್ತಿಕ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಬಳಸದೇ ಸರ್ಕಾರದ ಆಡಳಿತ ಹೆಸರಿನಲ್ಲಿ ತೆರೆಯಲಾದ ಖಾತೆಗಳನ್ನು ಮಾತ್ರ ಬಳಸಿಕೊಳ್ಳಬೇಕು ಎಂದು ಮುಖ್ಯಕಾರ್ಯದರ್ಶಿ ರವಿಕುಮಾರ್ ಅವರು ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಆದೇಶ ಉಲ್ಲಂಘಿಸಿದರೆ ಶಿಸ್ತು ಕ್ರಮ.!!


ಮೇಲಿನ ನಿಯಮಗಳಲ್ಲಿನ ಅವಕಾಶಗಳಿಗೆ ವ್ಯತಿರಿಕ್ತವಾಗಿ ಯಾವುದೇ ಅಧಿಕಾರಿ ಸರ್ಕಾರದ ಕಾರ್ಯನೀತಿಗೆ ವ್ಯತಿರಿಕ್ತವಾಗಿ ಅನಪೇಕ್ಷಿತ ವೇದಿಕೆಗಳಲ್ಲಿ ತಮ್ಮದೇ ಆದ ಅನಿಸಿಕೆಗಳನ್ನು ವ್ಯಕ್ತಪಡಿಸಿ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಉಂಟು ಮಾಡುವ ಹಾಗೂ ಸರ್ಕಾರಕ್ಕೆ ಮುಜುಗರ ಉಂಟು ಮಾಡುವ ಕೃತ್ಯಗಳಲ್ಲಿ ತೊಡಗುವುದು ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಈ ಮೂಲಕ ಎಲ್ಲಾ ಅಧಿಕಾರಿಗಳ ಗಮನಕ್ಕೆ ತರಲಾಗಿದೆ.

ಸರ್ಕಾರಿ ಯೋಜನೆಗಳು ಇತ್ಯಾದಿಗಳಿಗೆ ಸಂಬಂಧಿಸಿದಂತೆ ಅಧಿಕೃತ ಮಾಹಿತಿಯನ್ನು ಪ್ರಸಾರ ಮಾಡುವುದು ಸೇರಿದಂತೆ ಇತರ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸಲು ಅಗತ್ಯವಿದ್ದಲ್ಲಿ ಮಾತ್ರ ಅಧಿಕಾರಿಗಳು ಮಾಧ್ಯಮಗಳನ್ನು ಬಳಸಬಹುದಾಗಿದೆ. ಆದರೆ, ಸರ್ಕಾರದ ಕುಂದು ಕೊರತೆಗಳನ್ನು ವ್ಯಕ್ತಪಡಿಸಲು ಮಾಧ್ಯಮಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಹೀಗೆ ಬಿಜೆಪಿ ಸರ್ಕಾರ ಅಧಿಕಾರಿಗಳ ವಾಕ್ಸ್ವಾತಂತ್ರ್ಯವನ್ನು ಕಸಿದುಕೊಂಡಿದೆ. ಅಧಿಕಾರಿಗಳು ಭಾವ ಶೂನ್ಯರಾಗಿರಬೇಕೆಂದು ಈ ಮೂಲಕ ಸಿಎಂ ಬೊಮ್ಮಾಯಿ ಸರ್ಕಾರ ಉದ್ದೇಶಿಸಿದಂತಿದೆ. ಹೀಗೆ ಬಿಜೆಪಿ ಸರ್ಕಾರ ಕಾನೂನಿ ನೆರಳಲ್ಲೇ ತನ್ನ ಹಿಟ್ಲರ್‌ ಧೋರಣೆಯನ್ನು ಒಂದೊಂದೇ ಆಗಿ ಜಾರಿ ಮಾಡುತ್ತಿದೆ. ಮಾತು ಮಂಥನ ಇಲ್ಲದೆ, ಟೀಕೆ ವಿಮರ್ಶೆ ನಡೆಯದೆ ಒಂದು Productive ಕೆಲಸ ನಡೆಯಲು ಸಾಧ್ಯವಿಲ್ಲ. ಕೇವಲ ಏಕಗವಾಕ್ಷಿ ನಿರ್ಧಾರಗಳೇ ಆಡಳಿತದ ಮೂಲ ಮಂತ್ರವಾದರೆ ಅದು ಸರ್ವಾಧಿಕಾರಿ ಧೋರಣೆಯಾಗುತ್ತದೆ. ಈಗ ಬೊಮ್ಮಾಯಿ ಸರ್ಕಾರ ಹೊರಡಿಸಿರುವ ಈ ಆದೇಶವೂ ಇದೇ ಮಾದರಿಯ ಹಿಟ್ಲರ್‌ ಆಡಳಿತಕ್ಕಿರುವ ಜ್ವಲಂತ ಸಾಕ್ಷಿ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪಂಜಾಬ್ ಸಿಎಂ ರಾಜೀನಾಮೆ: ಹಳೆಯ ಬಿಕ್ಕಟ್ಟಿನ ಅಂತ್ಯವೋ? ಹೊಸ ಬಿಕ್ಕಟ್ಟಿನ ಆರಂಭವೋ?

Next Post

ಪಂಜಾಬ್‌ ನೂತನ ಮುಖ್ಯಮಂತ್ರಿಯಾಗಿ ಸುಖಜಿಂದರ್ ಸಿಂಗ್ ರಾಂಧವ ಆಯ್ಕೆ ಬಹುತೇಕ ಖಚಿತ.?

Related Posts

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
0

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣದೇವಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚೆ. ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ...

Read moreDetails

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
Next Post
ಪಂಜಾಬ್‌ ನೂತನ ಮುಖ್ಯಮಂತ್ರಿಯಾಗಿ ಸುಖಜಿಂದರ್ ಸಿಂಗ್ ರಾಂಧವ ಆಯ್ಕೆ ಬಹುತೇಕ ಖಚಿತ.?

ಪಂಜಾಬ್‌ ನೂತನ ಮುಖ್ಯಮಂತ್ರಿಯಾಗಿ ಸುಖಜಿಂದರ್ ಸಿಂಗ್ ರಾಂಧವ ಆಯ್ಕೆ ಬಹುತೇಕ ಖಚಿತ.?

Please login to join discussion

Recent News

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada