• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, September 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ರಾಜಕೀಯದಿಂದ ಹಿಂದೆ ಸರಿಯಬೇಡಿ’; ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಕಿವಿಮಾತು? ಹೇಳಿಕೆಗಳ ಬಗ್ಗೆ ಎಚ್ಚರಿಕೆ ನೀಡಿದ ರಾಗಾ

ಪ್ರತಿಧ್ವನಿ by ಪ್ರತಿಧ್ವನಿ
September 11, 2026
in Top Story
0
‘ರಾಜಕೀಯದಿಂದ ಹಿಂದೆ ಸರಿಯಬೇಡಿ’; ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಕಿವಿಮಾತು? ಹೇಳಿಕೆಗಳ ಬಗ್ಗೆ ಎಚ್ಚರಿಕೆ ನೀಡಿದ ರಾಗಾ
Share on WhatsAppShare on FacebookShare on Telegram

ನವದೆಹಲಿ: ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದ ರಾಜಕೀಯ ಬೆಳವಣಿಗೆಗಳ ನಡುವೆಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಹೈಕಮಾಂಡ್‌ ನಾಯಕರ ಬುಲಾವ್‌ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿದ್ದ ಸಿದ್ದರಾಮಯ್ಯ, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ADVERTISEMENT

ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ನಡುವೆ ರಾಜ್ಯದ ಪ್ರಸ್ತುತ ರಾಜಕೀಯ ಬೆಳವಣಿಗೆಗಳು ಸೇರಿದಂತೆ ಹಲವು ವಿಚಾರಗಳ ಕುರಿತು ಸುದೀರ್ಘ ಚರ್ಚೆ ನಡೆದಿದೆ ಎನ್ನಲಾಗಿದೆ. ಇದೇ ವೇಳೆ, ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯದಂತೆ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯಗೆ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ರಾಹುಲ್ ಗಾಂಧಿ ಸೂಚಿಸಿದ್ದಾರೆ ಎನ್ನಲಾಗಿದೆ. ಕರ್ನಾಟಕದಲ್ಲಿ ಪಕ್ಷ ಸಂಘಟನೆ ಹಾಗೂ ಮುಂದಿನ ಚುನಾವಣಾ ರಾಜಕೀಯದಲ್ಲಿ ಸಿದ್ದರಾಮಯ್ಯ ಅವರ ಅನುಭವ ಮತ್ತು ಮಾರ್ಗದರ್ಶನ ಕಾಂಗ್ರೆಸ್‌ಗೆ ಅಗತ್ಯವಿದೆ ಎಂದು ರಾಹುಲ್ ಗಾಂಧಿ ಹೇಳಿರುವುದಾಗಿ ಮೂಲಗಳು ತಿಳಿಸಿವೆ.ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಿದ್ದರಾಮಯ್ಯ ಅವರ ಆಪ್ತರಿಗೆ ಸೂಕ್ತ ಆದ್ಯತೆ ಸಿಗುತ್ತಿಲ್ಲ ಎಂಬ ಚರ್ಚೆಯೂ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸಲಹೆ ಹಾಗೂ ಬೇಡಿಕೆಗಳನ್ನು ಮುಕ್ತವಾಗಿ ಹೈಕಮಾಂಡ್ ಮುಂದೆ ಇಡುವಂತೆ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

B. K. Hariprasad on pm modi : ವಿಶ್ವ ಗುರು ಮೋದಿ, ತಡಿಪಾರ್‌ ಅಮಿತ್‌ ಶಾ, ಕೈ ನಾಯಕ ವ್ಯಂಗ್ಯ..! #bkhariprasad

ಸಿದ್ದರಾಮಯ್ಯ ಅವರು ಇತ್ತೀಚೆಗೆ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ಕುರಿತು ನೀಡಿದ್ದ ಹೇಳಿಕೆಯೂ ಸಭೆಯಲ್ಲಿ ಚರ್ಚೆಯಾಗಿದೆ ಎಂದು ತಿಳಿದುಬಂದಿದೆ. ಇಂತಹ ಹೇಳಿಕೆಗಳು ಪಕ್ಷದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಎಚ್ಚರಿಕೆಯಿಂದ ಮಾತನಾಡುವಂತೆ ರಾಹುಲ್ ಗಾಂಧಿ ಕಿವಿಮಾತು ಹೇಳಿದ್ದಾರೆ ಎನ್ನಲಾಗಿದೆ.ಪಕ್ಷಕ್ಕೆ ಸಿದ್ದರಾಮಯ್ಯ ಅವರಂತಹ ಹಿರಿಯ ನಾಯಕರ ಅಗತ್ಯವಿದ್ದು, ರಾಜಕೀಯ ನಿವೃತ್ತಿಯ ಕುರಿತು ಸಾರ್ವಜನಿಕವಾಗಿ ಹೇಳಿಕೆ ನೀಡದಂತೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ತಾವು ರಾಜಕೀಯದಿಂದ ನಿವೃತ್ತಿಯಾಗುವ ಬಗ್ಗೆ ಮಾತನಾಡಿಲ್ಲ. ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ಕುರಿತು ಮಾತ್ರ ಹೇಳಿದ್ದಾಗಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.ರಾಹುಲ್ ಗಾಂಧಿ ಅವರೊಂದಿಗಿನ ಸಭೆಯಲ್ಲಿ ರಾಜ್ಯದಲ್ಲಿ ಖಾಲಿ ಇರುವ ಸಚಿವ ಸ್ಥಾನಗಳ ಭರ್ತಿ, ಜಾತಿ ಸಮೀಕ್ಷೆ, ನಿಗಮ-ಮಂಡಳಿಗಳಿಗೆ ನೇಮಕಾತಿ, ರಾಜ್ಯದ ಪ್ರಸ್ತುತ ರಾಜಕೀಯ ಬೆಳವಣಿಗೆಗಳು ಸೇರಿದಂತೆ ಹಲವು ವಿಚಾರಗಳು ಚರ್ಚೆಗೆ ಬಂದಿರುವ ಸಾಧ್ಯತೆ ಇದೆ.

Madhu Bangarappa : ನಾನು ಬಂಗಾರಪ್ಪನವರ ಮಗ ಸುಳ್ಳು ಹೇಳೋದಿಲ್ಲ, ಅವರಪ್ಪನಾಣೆಗೂ ಅದು ಆಗೋದಿಲ್ಲ..

ಇದರ ಜೊತೆಗೆ ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ನಡೆದ ಇಡಿ ದಾಳಿ ಹಾಗೂ ಅಹಿಂದ ಸಂಘಟನೆಗೆ ಸಂಬಂಧಿಸಿದ ಚಟುವಟಿಕೆಗಳ ಬಗ್ಗೆಯೂ ಚರ್ಚೆ ನಡೆದಿರಬಹುದು ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.ರಾಹುಲ್ ಗಾಂಧಿ ಅವರ ಸಲಹೆ ಹಾಗೂ ದೆಹಲಿ ಭೇಟಿಯ ಬಳಿಕ ಸಿದ್ದರಾಮಯ್ಯ ಅವರ ಮುಂದಿನ ರಾಜಕೀಯ ನಡೆ ಏನಾಗಲಿದೆ ಎಂಬುದು ಇದೀಗ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದೆ.

Tags: congressCongress High CommandCongress PoliticsDK ShivakumarKarnataka CongressKarnataka ElectionsKarnataka Governmentkarnataka newskarnataka political newsKarnataka PoliticsPolitical developmentsRahul Gandhirahul gandhi meetingsiddaramaiah newsSiddaramaiah Retirement
Previous Post

ಗಣೇಶ ಹಬ್ಬದಿಂದ ಯಾರಿಗೆ ಎಷ್ಟು ಲಾಭ?; ₹30 ಸಾವಿರ ಕೋಟಿಯ ವಹಿವಾಟಿನ ಸಂಪೂರ್ಣ ಲೆಕ್ಕ ಇಲ್ಲಿದೆ

Next Post

ಸತೀಶ್ ಜಾರಕಿಹೊಳಿ ಕುಟುಂಬದ ಸ್ಥಳಗಳಲ್ಲಿ ಇಡಿ ಶೋಧ; ₹3.3 ಕೋಟಿ ನಗದು, ವಿದೇಶಿ ಕರೆನ್ಸಿ ಪತ್ತೆ?

Related Posts

ಸತೀಶ್ ಜಾರಕಿಹೊಳಿ ಕುಟುಂಬದ ಸ್ಥಳಗಳಲ್ಲಿ ಇಡಿ ಶೋಧ; ₹3.3 ಕೋಟಿ ನಗದು, ವಿದೇಶಿ ಕರೆನ್ಸಿ ಪತ್ತೆ?
Top Story

ಸತೀಶ್ ಜಾರಕಿಹೊಳಿ ಕುಟುಂಬದ ಸ್ಥಳಗಳಲ್ಲಿ ಇಡಿ ಶೋಧ; ₹3.3 ಕೋಟಿ ನಗದು, ವಿದೇಶಿ ಕರೆನ್ಸಿ ಪತ್ತೆ?

by ಪ್ರತಿಧ್ವನಿ
September 11, 2026
0

ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಅವರ ಪುತ್ರಿ ಹಾಗೂ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಮತ್ತು ಆಪ್ತರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ED) ನಡೆಸಿದ...

Read moreDetails
ಗಣೇಶ ಹಬ್ಬದಿಂದ ಯಾರಿಗೆ ಎಷ್ಟು ಲಾಭ?; ₹30 ಸಾವಿರ ಕೋಟಿಯ ವಹಿವಾಟಿನ ಸಂಪೂರ್ಣ ಲೆಕ್ಕ ಇಲ್ಲಿದೆ

ಗಣೇಶ ಹಬ್ಬದಿಂದ ಯಾರಿಗೆ ಎಷ್ಟು ಲಾಭ?; ₹30 ಸಾವಿರ ಕೋಟಿಯ ವಹಿವಾಟಿನ ಸಂಪೂರ್ಣ ಲೆಕ್ಕ ಇಲ್ಲಿದೆ

September 11, 2026
ಪಂಚಾಯಿತಿಯಿಂದ ಸಂಸತ್ ವರೆಗೆ ಹೊಸ ನಾಯಕತ್ವ ಅಗತ್ಯ : ಸಿಎಂ ಡಿ ಕೆ ಶಿವಕುಮಾರ್..

ಪಂಚಾಯಿತಿಯಿಂದ ಸಂಸತ್ ವರೆಗೆ ಹೊಸ ನಾಯಕತ್ವ ಅಗತ್ಯ : ಸಿಎಂ ಡಿ ಕೆ ಶಿವಕುಮಾರ್..

September 11, 2026
ವಿಜಯೇಂದ್ರ ನೇತೃತ್ವದ ಪಾದಯಾತ್ರೆಗೆ ನಿರೀಕ್ಷಿತ ಯಶಸ್ಸು ಸಿಗಲಿಲ್ಲವೇ?

ವಿಜಯೇಂದ್ರ ನೇತೃತ್ವದ ಪಾದಯಾತ್ರೆಗೆ ನಿರೀಕ್ಷಿತ ಯಶಸ್ಸು ಸಿಗಲಿಲ್ಲವೇ?

September 11, 2026
ಬ್ರಿಕ್ಸ್ ಶೃಂಗಸಭೆಗೆ ಭಾರತಕ್ಕೆ ಪುಟಿನ್ ಆಗಮನ; ಪ್ರಧಾನಿ ಮೋದಿ ಜೊತೆ ಮಹತ್ವದ ದ್ವಿಪಕ್ಷೀಯ ಮಾತುಕತೆ

ಬ್ರಿಕ್ಸ್ ಶೃಂಗಸಭೆಗೆ ಭಾರತಕ್ಕೆ ಪುಟಿನ್ ಆಗಮನ; ಪ್ರಧಾನಿ ಮೋದಿ ಜೊತೆ ಮಹತ್ವದ ದ್ವಿಪಕ್ಷೀಯ ಮಾತುಕತೆ

September 11, 2026
Next Post
ಸತೀಶ್ ಜಾರಕಿಹೊಳಿ ಕುಟುಂಬದ ಸ್ಥಳಗಳಲ್ಲಿ ಇಡಿ ಶೋಧ; ₹3.3 ಕೋಟಿ ನಗದು, ವಿದೇಶಿ ಕರೆನ್ಸಿ ಪತ್ತೆ?

ಸತೀಶ್ ಜಾರಕಿಹೊಳಿ ಕುಟುಂಬದ ಸ್ಥಳಗಳಲ್ಲಿ ಇಡಿ ಶೋಧ; ₹3.3 ಕೋಟಿ ನಗದು, ವಿದೇಶಿ ಕರೆನ್ಸಿ ಪತ್ತೆ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!