ಐಪಿಎಲ್ ಕೊನೆಯ ಘಟ್ಟಕ್ಕೆ ಬಂದು ನಿಂತಿದೆ. ಕ್ವಾಲಿಫೈಯರ್ ಪಂದ್ಯಗಳಿಗೆ ಎಲ್ಲ ತಂಡಗಳು ಸಿದ್ಧವಾಗಿವೆ.
ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್ ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿವೆ. ಲೀಗ್ ಹಂತದ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ 2 ತಂಡಗಳು ಮೊದಲ ಕ್ವಾಲಿಫೈಯರ್ ಆಡಲಿದೆ. ಮೇ 21 ರಂದು ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೆಕೆಆರ್ ಹಾಗೂ ಹೈದರಾಬಾದ್ ಪಂದ್ಯಗಳು ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್ ಗೆ ತಲುಪಲಿದೆ. ಸೋತ ತಂಡಕ್ಕೆ ಎಲಿಮಿನೇಟರ್ 1ದಲ್ಲಿ ಗೆದ್ದ ತಂಡದೊಂದಿಗೆ ಆಡುವ ಅವಕಾಶ ಸಿಗುತ್ತದೆ.
ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಎಲಿಮಿನೇಟರ್ ಪಂದ್ಯ ನಡೆಯಲಿದ್ದು, ಗೆಲ್ಲುವ ತಂಡದ ವಿರುದ್ಧ 2ನೇ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತ ತಂಡ ಐಪಿಎಲ್ ನಿಂದ ಹೊರಗೆ ಬೀಳುತ್ತದೆ.
ಮೇ 22 ರಂದು ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಸೋಲುವ ತಂಡ ಹೊರ ಬೀಳಲಿದೆ. ಗೆದ್ದ ತಂಡ ಮುಂದಿನ ಪಂದ್ಯದಲ್ಲಿ ಆಡಲಿದೆ. ಹೀಗಾಗಿ ಆರ್ ಸಿಬಿ ಪಾಲಿಗೆ ಪ್ರತಿ ಪಂದ್ಯವೂ ಮಾಡು ಇಲ್ಲವೇ ಮಡಿಯಂತಾಗಿದೆ.