
ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗುವ ಸಂಭವ ಹೆಚ್ಚಾಗಿದೆ. ಸಿಎಂಗೆ ರಾಜ್ಯಪಾಲರು ಶೋಕಾಸ್ ನೋಟಿಸ್ ಕೊಡ್ತಿದ್ದಂತೆ ಸಚಿವ ಸಂಪುಟ ಸಭೆ ನಡೆಸಿ, ರಾಜ್ಯಪಾಲರ ವಿರುದ್ಧ ನಿರ್ಣಯ ಕೈಗೊಳ್ಳಲಾಗಿತ್ತು. ಕೂಡಲೇ ಶೋಕಾಸ್ ನೋಟಿಸ್ ವಾಪಸ್ ಪಡೆಯುವಂತೆ ಒತ್ತಾಯದ ನಿರ್ಣಯ ಮಾಡಲಾಗಿತ್ತು. ಆ ಬಳಿಕ ಸುದ್ಧಿಗೋಷ್ಠಿ ನಡೆಸಿ ಸವಿವರವಾಗಿ ಮಾತನಾಡಿದ್ದ ಡಿಸಿಎಂ ಡಿ.ಕೆ ಶಿವಕುಮಾರ್, ಇದೀಗ ಮತ್ತೆ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ.

ಸಿಎಂ ಸಿದ್ದರಾಮಯ್ಯ ಬೆಂಗಾವಲು ಪಡೆಯನ್ನು ಬಿಟ್ಟು ಹೋಗಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಆಪ್ತರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿರುವ ಮಾಹಿತಿ ಇದೆ. ಆದರೆ ಸಿಎಂ ಸಿದ್ದರಾಮಯ್ಯ ಎಲ್ಲಿಗೆ ಹೋಗಿದ್ದಾರೆ ಅನ್ನೋ ಮಾಹಿತಿ ಗೌಪ್ಯವಾಗಿ ಉಳಿದುಕೊಂಡಿದೆ.

ಈ ನಡುವೆ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ ಅನ್ನೋ ಚರ್ಚೆ ಓಡಾಡ್ತಿದೆ. ಸಿಎಂ ಸಿದ್ದರಾಮಯ್ಯಗೆ ಮುಡಾ ಹಗರಣ ತಲೆಬಿಸಿ ಸೃಷ್ಟಿ ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಕುರ್ಚಿ ಕಳೆದುಕೊಳ್ತಾರಾ..? ಅನ್ನೋ ಅನುಮಾನ ಮೂಡಿಸುತ್ತಿದೆ. ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಆಗಿರುವ ಡಿ.ಕೆ ಶಿವಕುಮಾರ್ ತುರ್ತು ಸುದ್ದಿಗೋಷ್ಟಿಯನ್ನು ತುದಿಗಾಲಲ್ಲಿ ನಿಲ್ಲುವಂತೆ ಮಾಡಿದೆ.