
ನವದೆಹಲಿ:- ಕೋಲ್ಕತ್ತಾದ ವೈದ್ಯೆ ಅತ್ಯಾಚಾರ, ಕೊಲೆ ಕೇಸ್ ಗೆ ಸಂಬಧಪಟ್ಟಂತೆ ಸುಪ್ರೀಂಕೋರ್ಟ್ ಸ್ವಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆ ನಡೆಯಲಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ಇರುವ ನ್ಯಾಯಪೀಠ ಮಂಗಳವಾರ ಈ ಪ್ರಕರಣದ ವಿಚಾರಣೆ ನಡೆಸಲಿದೆ.ಪಶ್ಚಿಮ ಬಂಗಾಳದ ಕೋಲ್ಕತಾ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿರುವ ಟ್ರೈನಿ ವೈದ್ಯೆಯ ಅತ್ಯಾಚಾರ ಹಾಗೂ ಬರ್ಬರ ಕೊಲೆ ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದು, ಕೃತ್ಯವನ್ನು ಖಂಡಿಸಿ ಪ್ರತಿಭಟನೆ ನಡೆಯುತ್ತಿದೆ.
ಈ ಮಧ್ಯೆ ನಿರ್ಭಯಾ ಅವರ ತಾಯಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಿಡಿ ಕಾರಿದ್ದು, ಪರಿಸ್ಥಿತಿ ನಿಯಂತ್ರಿಸಲು ಅಸಮರ್ಥರಾದ ಕಾರಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.ನಿರ್ಭಯಾ 2012ರಲ್ಲಿ ನವದೆಹಲಿಯಲ್ಲಿ ಚಲಿಸುವ ಬಸ್‌ನಲ್ಲೇ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಕ್ರೂರವಾಗಿ ಕೊಲೆಯಾಗಿದ್ದರು.