• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದೊಡ್ಡರಂಗೇಗೌಡರು ಹೇಳಿಕೆ ಹಿಂದೆ ಪಡೆಯದಿದ್ದರೆ ಸಾಹಿತ್ಯ ಸಮ್ಮೇಳನದಲ್ಲೇ ಪ್ರತಿಭಟನೆ –ಕರವೇ ಎಚ್ಚರಿಕೆ

by
April 3, 2021
in ಕರ್ನಾಟಕ
0
ದೊಡ್ಡರಂಗೇಗೌಡರು ಹೇಳಿಕೆ ಹಿಂದೆ ಪಡೆಯದಿದ್ದರೆ ಸಾಹಿತ್ಯ ಸಮ್ಮೇಳನದಲ್ಲೇ ಪ್ರತಿಭಟನೆ –ಕರವೇ ಎಚ್ಚರಿಕೆ
Share on WhatsAppShare on FacebookShare on Telegram

ಹಿಂದಿ ರಾಷ್ಟ್ರಭಾಷೆ, ಅದಕ್ಕೆ ವಿರೋಧ ಯಾಕೆ ಎಂದು ಹಿಂದಿ ಸಾಮ್ರಾಜ್ಯಶಾಹಿಯ ಪರವಾಗಿ ಮಾತನಾಡಿರುವ ಸಾಹಿತಿ ಡಾ.ದೊಡ್ಡರಂಗೇಗೌಡರು ಕೂಡಲೇ ತಮ್ಮ ಹೇಳಿಕೆ ಹಿಂದಕ್ಕೆ ಪಡೆಯಬೇಕು. ಇಲ್ಲವಾದಲ್ಲಿ ಹಾವೇರಿಯಲ್ಲಿ ನಡೆಯಬೇಕಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲೇ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟಿಸಲಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಎಚ್ಚರಿಸಿದ್ದಾರೆ.

ADVERTISEMENT

ದೊಡ್ಡರಂಗೇಗೌಡರು ಕನ್ನಡದ ಹೆಸರಾಂತ ಕವಿ. ಅವರ ಮೇಲೆ ನಾವೆಲ್ಲರೂ ಅಭಿಮಾನ ಇಟ್ಟುಕೊಂಡಿದ್ದೇವೆ. ಹಿಂದೆ ಅವರು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಹಿಂದಿಹೇರಿಕೆ ವಿರುದ್ಧ ಮಾತನಾಡಿದ್ದರು. ಈಗ ಇದ್ದಕ್ಕಿದ್ದಂತೆ ಅವರಿಗೆ ಹಿಂದಿ ವ್ಯಾಮೋಹ ಹೇಗೆ ಬಂದಿತು? ಇದನ್ನು ಅವರು ಬಿಡಿಸಿ ಹೇಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ದೊಡ್ಡರಂಗೇಗೌಡರು ಅಖಿಲ ಭಾರತ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾದ ಸಂದರ್ಭದಲ್ಲೇ ಈ ಹೇಳಿಕೆ ಹೊರಬಂದಿರುವುದು ಕಳವಳಕಾರಿ. ‘ಹಿಂದಿ ನಮ್ಮ ರಾಷ್ಟ್ರಭಾಷೆ’ ಎಂದು ಅವರ ಬಾಯಿಂದ‌ ಕೆಲವು ಪಟ್ಟಭದ್ರ ಶಕ್ತಿಗಳು ಹೇಳಿಸಿರಬಹುದೇ ಎಂಬ ಅನುಮಾನ ನನಗಿದೆ. ಕನ್ನಡ ಜಾನಪದ ಸೊಗಡಿನ ಸಾಹಿತಿ ಇದ್ದಕ್ಕಿದ್ದಂತೆ ಬದಲಾಗಲು ಹೇಗೆ ಸಾಧ್ಯ? ಎಂದು ಅವರು ಪ್ರಶ್ನಿಸಿದ್ದಾರೆ.

ದೊಡ್ಡರಂಗೇಗೌಡರು ಹಿಂದಿಹೇರಿಕೆ ಪರವಾಗಿ ಮಾತನಾಡಲು ಏನು ಕಾರಣ ಎಂದು ಅವರೇ ಬಹಿರಂಗಪಡಿಸಲಿ. ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದ್ದಕ್ಕೆ ಋಣ ಸಂದಾಯ ಮಾಡುತ್ತಿದ್ದಾರೆಯೇ ಅಥವಾ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆ ಮಾಡುವ ಸಂದರ್ಭದಲ್ಲಿ ಹಿಂದಿಪರ ಮಾತಾಡಲು ಷರತ್ತು ವಿಧಿಸಲಾಗಿತ್ತೇ? ಎಂದು ಅವರು ಕೇಳಿದ್ದಾರೆ.

ಹಾವೇರಿಯಲ್ಲಿ ನಡೆಯಬೇಕಿರುವ ಸಾಹಿತ್ಯ ಸಮ್ಮೇಳನ ಸಾಂಗವಾಗಿ ನಡೆಯಬೇಕೆಂದರೆ ದೊಡ್ಡರಂಗೇಗೌಡರು ನೀಡಿರುವ ಹೇಳಿಕೆ ಹಿಂದಕ್ಕೆ ಪಡೆಯಬೇಕು. ಕಸಾಪ ಅಧ್ಯಕ್ಷ ಮನು ಬಳಿಗಾರ್ ಅವರಿಗೂ ಹೊಣೆಗಾರಿಕೆ ಇದೆ. ಅವರೂ ಸಹ‌ ಸ್ಪಷ್ಟನೆ ನೀಡಬೇಕು. ಸ್ವಾಭಿಮಾನಿ ಕನ್ನಡಿಗರ ತಾಳ್ಮೆಯನ್ನು ಯಾರೂ‌ ಪರೀಕ್ಷಿಸಬಾರದು ಎಂದು ನಾರಾಯಣ ಗೌಡ ಅವರು ತಾಕೀತು ಮಾಡಿದ್ದಾರೆ.

Previous Post

ಬಿಜೆಪಿಯಿಂದ ಇಡೀ ದೇಶವೇ ನಿರುದ್ಯೋಗಿಯಾಗಿದೆ : ಡಿ.ಕೆ. ಶಿವಕುಮಾರ್

Next Post

ಅಮೆರಿಕದ ಅಧ್ಯಕ್ಷೀಯ ಪದಗ್ರಹಣದಲ್ಲಿ ಮಿಂಚಿದ 22ರ ಕವಯಿತ್ರಿ

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ಅಮೆರಿಕದ ಅಧ್ಯಕ್ಷೀಯ ಪದಗ್ರಹಣದಲ್ಲಿ ಮಿಂಚಿದ 22ರ ಕವಯಿತ್ರಿ

ಅಮೆರಿಕದ ಅಧ್ಯಕ್ಷೀಯ ಪದಗ್ರಹಣದಲ್ಲಿ ಮಿಂಚಿದ 22ರ ಕವಯಿತ್ರಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada