• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೊಡ್ಡವರು ಚನ್ನಪಟ್ಟಣ ಜನರ ಸಮಸ್ಯೆ ಬಗೆಹರಿಸಿಲ್ಲ, ಹೀಗಾಗಿ ಬಂದಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
June 24, 2024
in Top Story, ರಾಜಕೀಯ
0
Share on WhatsAppShare on FacebookShare on Telegram

ಚನ್ನಪಟ್ಟಣದಲ್ಲಿ ಅಧಿಕಾರದಲ್ಲಿದ್ದ ದೊಡ್ಡವರು, ಅನುಭವಿ ನಾಯಕರು ಇಲ್ಲಿನ ಜನರ ಸಮಸ್ಯೆ ಬಗೆಹರಿಸುತ್ತಾರೆ ಎಂದು ನಾನು ಭಾವಿಸಿದ್ದೆ. ಆದರೆ ಸಮಸ್ಯೆ ಬಗೆಹರಿದಿಲ್ಲ. ಹೀಗಾಗಿ ನಾನು ಬಂದಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ADVERTISEMENT

ಚನ್ನಪಟ್ಟಣದಲ್ಲಿ ನಡೆದ ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯಿಸಿದರು.

ಚನ್ನಪಟ್ಟಣ ಈಗ ನೆನಪಾಗಿದೆಯೇ ಎಂಬ ಕುಮಾರಸ್ವಾಮಿ ಅವರ ಟೀಕೆ ಬಗ್ಗೆ ಕೇಳಿದಾಗ, ಅವರು ಹೇಳಿದ್ದಿಷ್ಟು:

“ಇಷ್ಟು ದಿನ ಈ ಕ್ಷೇತ್ರ ಖಾಲಿ ಇರಲಿಲ್ಲ. ಇಲ್ಲಿ ಅನುಭವಿಗಳು ದೊಡ್ಡವರು ಇದ್ದರು. ಅವರು ಜನರ ಸಮಸ್ಯೆಗೆ ಸ್ಪಂದಿಸಿ, ಪರಿಹಾರ ನೀಡುತ್ತಾರೆ ಎಂದು ಭಾವಿಸಿದ್ದೆ. ಇತ್ತೀಚೆಗೆ ಅಧಿಕಾರಿಗಳ ಸಭೆ ಮಾಡಿದ ಬಳಿಕ ಪರಿಸ್ಥಿತಿ ತಿಳಿಯಿತು. ಇಲ್ಲಿ ಏನೂ ಆಗಿಲ್ಲ ಎಂಬುದು ನನ್ನ ಗಮನಕ್ಕೆ ಬಂದಿದೆ. ಅದಕ್ಕೆ ನಮ್ಮ ಶೈಲಿಯಲ್ಲಿ ನಾವು ಕಾರ್ಯಕ್ರಮ ಮಾಡುತ್ತಿದ್ದೇವೆ. ರಾಮನಗರ, ಕನಕಪುರ, ಬೆಂಗಳೂರಿನಲ್ಲೂ ಈ ಕಾರ್ಯಕ್ರಮ ಮಾಡಿದ್ದೇವೆ” ಎಂದು ತಿಳಿಸಿದರು.

ಮಾಧ್ಯಮಗಳನ್ನು ಹೊರಗಿಟ್ಟು ಸಭೆ ಮಾಡಿ ಅಧಿಕಾರಿಗಳನ್ನು ಎದುರಿಸಿದ್ದೀರಿ ಎಂದು ಆರೋಪ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಯಾರಿಗಾದರೂ ಬೆದರಿಕೆ ಹಾಕಿದ್ದರೆ ದೂರು ನೀಡಲಿ” ಎಂದು ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ಬಿಟ್ಟುಹೋಗಿರುವ ಹೆಸರು ಸೇರ್ಪಡೆಗೆ ಸೂಚನೆ:

ಹೊಸ ಮತದಾರರ ಸೇರ್ಪಡೆಗೆ ಸೂಚಿಸಿದ್ದೀರಾ ಎಂದು ಕೇಳಿದಾಗ, “ಲೋಕಸಭಾ ಚುನಾವಣೆ ಸಮಯದಲ್ಲಿ ಮುಸಲ್ಮಾನ ಸಮುದಾಯದವರ ಹೆಸರು ತೆಗೆದು ಹಾಕಲಾಗಿದೆ ಎಂದು ದೂರುಗಳು ಬಂದಿದ್ದವು. ಹೀಗಾಗಿ ಜಿಲ್ಲಾಧಿಕಾರಿಗಳಿಗೆ ಮತ್ತೆ ಈ ಮತದಾರರ ಮನೆಗೆ ಭೇಟಿ ನೀಡಿ ಅವರ ಹೆಸರನ್ನು ಮತ್ತೆ ಸೇರಿಸಲು ಸೂಚಿಸಿದ್ದೇನೆ. ಹೊರಗಿನಿಂದ ಬೇರೆಯವರನ್ನು ತಂದು ಇಲ್ಲಿನ ಮತದಾರರ ಪಟ್ಟಿಯಲ್ಲಿ ಸೇರಿಸಲು ಆಗುವುದಿಲ್ಲ. ಇಲ್ಲಿ ಹೊಸದಾಗಿ ಸೇರಿಸಬೇಕು ಎಂದರೆ ಹಳೇ ಬೇರೆ ಕಡೆ ಇರುವ ಮತದಾರರ ಹೆಸರನ್ನು ಅಳಿಸಬೇಕು. ಹೀಗಾಗಿ ಹೊಸ ತಂತ್ರಜ್ಞಾನದಲ್ಲಿ ಈ ರೀತಿ ಬೇರೆಯವರನ್ನು ತಂದು ಸೇರಿಸಲು ಆಗುವುದಿಲ್ಲ” ಎಂದು ತಿಳಿಸಿದರು.

ಡಿ.ಕೆ. ಶಿವಕುಮಾರ್ ಚುನಾವಣಾ ಅಕ್ರಮ ಮಾಡುತ್ತಿದ್ದು ಚುನಾವಣಾ ಆಯೋಗಕ್ಕೆ ಪತ್ರ ಬರೆಯುತ್ತೇನೆ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಕೇವಲ ಪತ್ರ ಯಾಕೆ ಬರೆಯುತ್ತಾರೆ. ಚುನಾವಣಾ ಆಯೋಗದ ಕಚೇರಿಗೆ ಹಾಸಿಗೆ, ದಿಂಬು ತೆಗೆದುಕೊಂಡು ಹೋಗಿ ಮಲಗಲಿ” ಎಂದು ತಿಳಿಸಿದರು.

ಶಿವಕುಮಾರ್ ಅವರ ಚನ್ನಪಟ್ಟಣ ಪ್ರವೇಶ ಮೈತ್ರಿನಾಯಕರನ್ನು ಭಯ ಬೀಳಿಸಿದೆಯೇ ಎಂದು ಕೇಳಿದಾಗ, “ಅಲ್ಲಿ ದೊಡ್ಡ ದೊಡ್ಡ ನಾಯಕರು ಇದ್ದಾರೆ. ಹೀಗಾಗಿ ಅವರು ಭಯ ಯಾಕೆ ಬೀಳುತ್ತಾರೆ” ಎಂದರು.

ಕುಮಾರಸ್ವಾಮಿ ಅವರು ಶಾಸಕರಾಗಿ ಇಲ್ಲಿ ಕೆಲಸ ಮಾಡಿಲ್ಲವೇ ಎಂದು ಕೇಳಿದಾಗ, “ಅವರು ಕೆಲಸ ಮಾಡಿದ್ದಾರೋ ಇಲ್ಲವೋ ಎಂದು ಜನ ತೀರ್ಮಾನ ಮಾಡುತ್ತಾರೆ” ಎಂದು ತಿಳಿಸಿದರು.

ಪಕ್ಷದಲ್ಲಿ ಮೂವರು ಡಿಸಿಎಂ ಹುದ್ದೆ ಬೇಡಿಕೆ ಬಗ್ಗೆ ಕೇಳಿದಾಗ, “ಆ ಬಗ್ಗೆ ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನ ಮಾಡುತ್ತಾರೆ” ಎಂದು ತಿಳಿಸಿದರು.

ಜನರು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ತೀರ್ಮಾನ:

ಉಪಚುನಾವಣೆಗೆ ಸಚಿವ ಚೆಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಸಮಿತಿ ರಚನೆ ಬಗ್ಗೆ ಕೇಳಿದಾಗ, “ಪಕ್ಷದಲ್ಲಿ ಒಂದು ಪದ್ಧತಿ ಇರುತ್ತದೆ. ಮತದಾರರು ಹಾಗು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸುತ್ತೇವೆ. ನಂತರ ನಾನು, ಮುಖ್ಯಮಂತ್ರಿಗಳು ಹಾಗೂ ಪ್ರದಾನ ಕಾರ್ಯದರ್ಶಿಗಳು ಕೂತು ಚರ್ಚೆ ಮಾಡುತ್ತೇವೆ. ನಮ್ಮ ಪಕ್ಷದ ಚುನಾವಣಾ ಸಮಿತಿಯೂ ಚರ್ಚೆ ಮಾಡಿ ಯಾರು ಸ್ಪರ್ಧೆ ಮಾಡಬೇಕು ಎಂದು ತೀರ್ಮಾನ ಕೈಗೊಳ್ಳುತ್ತದೆ” ಎಂದು ತಿಳಿಸಿದರು.

ಸಮಿತಿ ನಿಮ್ಮ ಹೆಸರು ಸೂಚಿಸಿದರೆ ನೀವು ಸ್ಪರ್ಧೆ ಮಾಡುತ್ತೀರಾ ಎಂದು ಕೇಳಿದಾಗ, “ಪಕ್ಷ ಹೇಳಿದಂತೆ ನಾವು ಕೇಳಬೇಕು” ಎಂದು ತಿಳಿಸಿದರು.”

ಕನಕಪುರದ ಹೆದರಿಕೆ, ಬೆದರಿಕೆ, ಭ್ರಷ್ಟಾಚಾರದ ಮಾದರಿ ನಮಗೆ ಬೇಡ ಎಂಬ ಯೋಗೇಶ್ವರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಕನಕಪುರದಲ್ಲಿ ಭ್ರಷ್ಟಾಚಾರದ ಬಗ್ಗೆ ಏನಾದರೂ ದೂರು ಬಂದಿದೆಯೇ?” ಎಂದು ಕೇಳಿದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಚುನಾವಣೆ ಫಲಿತಾಂಶದ ಬಗ್ಗೆ ಕೇಳಿದಾಗ, “ಜನ ನಮಗೆ ತಿದ್ದಿಕೊಳ್ಳಲು ಅವಕಾಶ ನೀಡಿದ್ದಾರೆ. ಸುರೇಶ್ ಅವರಿಗೆ ವಿಶ್ರಾಂತಿ ಪಡೆಯಲು ಹೇಳಿದ್ದಾರೆ. ನೂತನ ಸಂಸದರಾಗಿ ಆಯ್ಕೆಯಾಗಿರುವ ಡಾ.ಮಂಜುನಾಥ್ ಅವರು ಸುರೇಶ್ ಅವರಿಗಿಂತ ಹೆಚ್ಚಿನ ಕೆಲಸ ಮಾಡಲಿ” ಎಂದರು.

ಸುರೇಶ್ ಅವರು ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದು, ಪಕ್ಷ ಅವರನ್ನು ಸ್ಪರ್ಧಿಸಲು ಸೂಚಿಸಿದರೆ ಅವರು ನಿಲ್ಲುತ್ತಾರಾ ಎಂದು ಕೇಳಿದಾಗ, “ಪಕ್ಷ ಹೇಳಿದರೆ ನಾನಾಗಲಿ, ಸುರೇಶ್ ಆಗಲಿ ಕೇಳಬೇಕು. ಸುರೇಶ್ ಅವರಿಗೆ ಸಂಸತ್ ಚುನಾವಣೆಗೂ ಸ್ಪರ್ಧೆ ಮಾಡುವ ಆಸಕ್ತಿ ಇರಲಿಲ್ಲ. ಕಾರ್ಯಕರ್ತರ ಒತ್ತಾಯದ ಮೇರೆಗೆ ಅವರು ಸ್ಪರ್ಧೆ ಮಾಡಿದ್ದಾರೆ. ಅವರು ಎಂದಿಗೂ ಅಧಿಕಾರಕ್ಕೆ ಆಸೆ ಪಟ್ಟವರಲ್ಲ” ಎಂದು ತಿಳಿಸಿದರು.

ಕುಮಾರಸ್ವಾಮಿ ಅವರು ನಿನ್ನೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿರುವ ಬಗ್ಗೆ ಕೇಳಿದಾಗ, “ಬಹಳ ಸಂತೋಷ, ಅವರಿಗೆ ಒಳ್ಳೆಯದಾಗಲಿ” ಎಂದು ತಿಳಿಸಿದರು.

ರಾಮನಗರ ಅಭಿವೃದ್ಧಿ ಮಾಡಿದ್ದು ನಾನು, ಅವರು ಕಲ್ಲು ಹೊಡೆಯುತ್ತಿದ್ದರು ಎಂಬ ಕುಮಾರಸ್ವಾಮಿ ಟೀಕೆ ಬಗ್ಗೆ ಕೇಳಿದಾಗ, “ಹೌದು, ಕಲ್ಲು ಒಡೆಯುತ್ತಿದ್ದೇವೆ. ಈಗಲೂ ಒಡೆಯುತ್ತಿದ್ದೇವೆ” ಎಂದು ಲೇವಡಿ ಮಾಡಿದರು.

Tags: channapattanacpyogeswaraDKSivakumarDKSureshmanjunathNikhil Kumaraswamyಎಚ್ ಡಿ ಕುಮಾರಸ್ವಾಮಿ
Previous Post

ಪವಿತ್ರ ಗೌಡಗೆ 2 ಕೋಟಿ ಕೊಟ್ಟಿದ್ಯಾಕೆ ಮೃತ ಸೌಂದರ್ಯ ಜಗದೀಶ್ ?! ಪ್ರೊಡ್ಯೂಸರ್ ಪತ್ನಿಯಿಂದ ದೂರು ! 

Next Post

ಮೊದಲ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಸಿಗುತ್ತಾ ಜಾಮೀನು ?! ತೀರ್ಪು ಕಾಯ್ದಿರಿಸಿದ ಕೋರ್ಟ್ ! 

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಪ್ರಜ್ವಲ್ ರೇವಣ್ಣ ಜೆಸಿನಾ? ಪಿಸಿನಾ?

ಮೊದಲ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಸಿಗುತ್ತಾ ಜಾಮೀನು ?! ತೀರ್ಪು ಕಾಯ್ದಿರಿಸಿದ ಕೋರ್ಟ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada