ಮಂಡ್ಯ(Mandya) ಲೋಕಸಭಾ(Loka Saba) ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯಾರು? ಎಂಬುದು ಸದ್ಯಕ್ಕಂತೂ ಭಾರೀ ಕುತೂಹಲ ಮೂಡಿಸಿದೆ. ಮೂಲಗಳ ಪ್ರಕಾರ ಮಂಡ್ಯ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್(JDS) ಮಾಜಿ ಶಾಸಕ ಸಿ.ಎಸ್. ಪುಟ್ಟರಾಜು(CS Puttaraju) ಕಣಕ್ಕಿಳಿಯುತ್ತಾರೆ ಎನ್ನಲಾಗುತ್ತಿದೆ. ಈ ನಡುವೆ ಹಾಲಿ ಸಂಸದೆ ಸುಮಲತಾ ಅಂಬರೀಶ್(Sumalatha Ambresh) ಕೂಡ ತಾವೇ ಮೈತ್ರಿ ಅಭ್ಯರ್ಥಿ ಎನ್ನುತ್ತಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಸಂಸದೆ ಸುಮಲತಾ ಅವರಿಗೆ ಟಿಕೆಟ್ ಕೈತಪ್ಪಿದ್ದೇ ಆದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಸಂಸದೆ ಮೈತ್ರಿ ಧರ್ಮ ಪಾಲಿಸುತ್ತಾರಾ? ಎಂಬ ಪ್ರಶ್ನೆ ಮೂಡಿದೆ. ಈ ಸಂಬಂಧ ಖಾಸಗಿ ವಾಹಿನಿ ಸಂದರ್ಶನದಲ್ಲಿ ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಬಗ್ಗೆ ಸುಮಲತಾ ಅಂಬರೀಶ್ ಹೇಳಿದ್ದೇನು? ಸುಮಲತಾ ಅಂಬರೀಶ್ ಹೇಳಿಕೆಯೇ ಬಹಳ Interesting ಆಗಿದೆ.
ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಸಂಸದೆಯಾಗಿರುವ ಸುಮಲತಾ ಅಂಬರೀಶ್, 2024ರ ಲೋಕಸಭಾ(Loka Saba) ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯಲು ಸಿದ್ಧತೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ 2024ರ ಲೋಕಸಭಾ ಚುನಾವಣೆಯನ್ನು ಮೈತ್ರಿಯಾಗಿ ಎದುರಿಸಬೇಕೆಂದಾಗ ಮೈತ್ರಿ ಧರ್ಮ ಪರಿಪಾಲನೆ ಮಾಡಲೇಬೇಕೆಂದಿದ್ದಾರೆ ಸಂಸದೆ ಸುಮಲತಾ(Sumalatha) ಅಂಬರೀಶ್, ಸದ್ಯ ನಾನು ಪಕ್ಷೇತರಳಾಗಿ ಸಂಸದೆಯಾಗಿದ್ದೇನೆ. ನನ್ನ ಬಾಹ್ಯ ಬೆಂಬಲವನ್ನು ಬಿಜೆಪಿಗೆ ಎಂದು ತಿಳಿಸಿದ್ದೇನೆ.
ಇನ್ನು ಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ. ಮೈತ್ರಿಯ ಹಿನ್ನೆಲೆಯಲ್ಲಿ, ಮಂಡ್ಯ ಕ್ಷೇತ್ರವನ್ನು ಬಿಜೆಪಿಯೇ ಉಳಿಸಿಕೊಳ್ಳಲಿ ಎನ್ನುವುದು ನನ್ನ ಆಸೆ. ಆದ್ರೆ, ಇದು ಎರಡು ಪಕ್ಷಗಳ ನಾಯಕರಿಗೆ ಸೇರಿರುವ ವಿಚಾರ. ಹೀಗಾಗಿ, ಮೈತ್ರಿಯಲ್ಲಿ ನನಗೆ ಟಿಕೆಟ್ ಸಿಕ್ಕರೆ, ಇನ್ನೊಂದು ಪಕ್ಷದ ನಾಯಕರನ್ನು ಕರೆದು, ಮೈತ್ರಿ ಧರ್ಮ ಪರಿಪಾಲನೆ ಮಾಡಲು ಸೂಚನೆ ನೀಡಬೇಕು. ಇಲ್ಲ ಕ್ಷೇತ್ರವನ್ನು ಅವರಿಗೆ ಬಿಟ್ಟುಕೊಟ್ಟಿದ್ದೇ ಆದ್ರೆ, ನನ್ನನ್ನು ಬಿಜೆಪಿ ಹೈಕಮಾಂಡ್ ನಾಯಕರು ಕರೆದು ಮಾತುಕತೆ ಮಾಡಬೇಕು. ಗೈಡ್‌ಲೈನ್ಸ್ ಪಕ್ಷ ಏನು ಹೇಳುತ್ತದೋ, ಹಾಗೇ ನಡೆದುಕೊಳ್ಳಬೇಕು. ನಾನು ಮೈತ್ರಿ ಧರ್ಮ ಪರಿಪಾಲನೆ ಮಾಡಲು ಸಿದ್ಧ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಸಂಸದೆ ಸುಮಲತಾ ಅವರ ಈ ಹೇಳಿಕೆ ಹಲವರಿಗೆ ಶಾಕ್ ನೀಡಿದೆ, ಕಾರಣ ಇಷ್ಟು ದಿನ ಕ್ಷೇತ್ರಕ್ಕಾಗಿ ಬಿಗಿಪಟ್ಟು ಹಿಡಿದಿದ್ದ ಸುಮಲತಾ ಅಂಬರೀಶ್, ಇದೀಗ ಮೈತ್ರಿಯಾಗಿ ಚುನಾವಣೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ಪಟ್ಟು ಸಡಿಲಿಸಿದಂತೆ ಕಾಣುತ್ತಿದೆ.
#Sumalatha #Mandya #MPelection #LokaSaba2024 #BJPJDS #CSPuttaraju