ಗೃಹ ಬಳಕೆಯ ಪ್ರತಿ ಎಲ್‌ಪಿಜಿ ಸಿಲಿಂಡರ್ ದರವನ್ನು ಹೆಚ್ಚುವರಿಯಾಗಿ 200 ರೂ. ಸಬ್ಸಿಡಿ ನೀಡುವುದಾಗಿ ಕೇಂದ್ರ ಸರ್ಕಾರ ಮಂಗಳವಾರ (ಆಗಸ್ಟ್ 29) ಘೋಷಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್, ಪ್ರಧಾನ ಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳು ಪ್ರತಿ ಎಲ್ಪಿಜಿ ಸಿಲಿಂಡರ್ಗೆ ಪಡೆಯುವ ಸಬ್ಸಿಡಿ ದರ 400 ರೂ.ಗೆ ಏರಿಕೆಯಾಗಲಿದೆ ಎಂದು ತಿಳಿಸಿದ್ದಾರೆ.
ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್ ಸಬ್ಸಿಡಿ ದರವು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆಯಾಗುವುದಿಲ್ಲ. ಬದಲಾಗಿ ಅನಿಲ ಕಂಪನಿಗಳಾದ ಇಂಡಿಯನ್ ಆಯಿಲ್, ಹಿಂದೂಸ್ತಾನ್ ಪೆಟ್ರೋಲಿಯಂ ಮತ್ತು ಭಾರತ್ ಪೆಟ್ರೋಲಿಯಂ ಖಾತೆಗಳಿಗೆ ಜಮೆ ಆಗಲಿದೆ ಕೇಂದ್ರ ಸರ್ಕಾರದ ಪ್ರಕಟಣೆ ಹೇಳಿದೆ.