ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕನಾಗಿ ಮರಳಿದ ಮಹೇಂದ್ರ ಸಿಂಗ್ ಧೋನಿ ಮತ್ತೆ ದಾಖಲೆಗಳನ್ನು ಮುಂದುವರಿಸಿದ್ದು, ಐಪಿಎಲ್ ನಲ್ಲಿ 6000 ರನ್ ಪೂರೈಸಿದ 2ನೇ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ ಧೋನಿ 8 ಎಸೆತಗಳಲ್ಲಿ 21 ರನ್ ಗಳಿಸುವ ಮೂಲಕ 6000 ರನ್ ಪೂರೈಸಿದರು. ಈ ಮೂಲಕ ಐಪಿಎಲ್ ನಲ್ಲಿ 6000 ರನ್ ಪೂರೈಸಿದ ವಿರಾಟ್ ಕೊಹ್ಲಿ ನಂತರದ ಎರಡನೇ ನಾಯಕ ಎಂಬ ದಾಖಲೆಗೆ ಪಾತ್ರರಾದರು.

ವಿರಾಟ್ ಕೊಹ್ಲಿ 6000ಕ್ಕೂ ಹೆಚ್ಚು ರನ್ ಗಳಿಸಿ ಮೊದಲ ಸ್ಥಾನದಲ್ಲಿದ್ದಾರೆ. ಅಲ್ಲದೇ ನಾಯಕ ಸ್ಥಾನದಿಂದ ಕೆಳಗಿಳಿದಿದ್ದು, ರನ್ ಬರ ಎದುರಿಸುತ್ತಿದ್ದಾರೆ.













