• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪಶ್ಚಿಮ ಬಂಗಾಳದಲ್ಲಿ ಬಿಎಸ್ಎಫ್ ಸಿಬ್ಬಂದಿಗೆ ಪ್ರವೇಶ ಬೇಡ: ಸಿಎಂ ಮಮತಾ ಬ್ಯಾನರ್ಜಿ ಪೊಲೀಸರಿಗೆ ಸೂಚನೆ

Any Mind by Any Mind
December 10, 2021
in ದೇಶ
0
ಪಶ್ಚಿಮ ಬಂಗಾಳದಲ್ಲಿ ಬಿಎಸ್ಎಫ್ ಸಿಬ್ಬಂದಿಗೆ ಪ್ರವೇಶ ಬೇಡ: ಸಿಎಂ ಮಮತಾ ಬ್ಯಾನರ್ಜಿ ಪೊಲೀಸರಿಗೆ ಸೂಚನೆ
Share on WhatsAppShare on FacebookShare on Telegram

ಗಡಿ ರಾಜ್ಯಗಳಲ್ಲಿ ಬಿಎಸ್‌ಎಫ್ ಅಧಿಕಾರ ವ್ಯಾಪ್ತಿಯನ್ನು ವಿಸ್ತರಿಸುವ ಕೇಂದ್ರದ ನಿರ್ಧಾರವನ್ನು ಖಂಡಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯ ಪೊಲೀಸರ ಅನುಮತಿಯಿಲ್ಲದೆ ಬಿಎಸ್‌ಎಫ್ ಸಿಬ್ಬಂದಿ ಗ್ರಾಮಗಳಿಗೆ ಪ್ರವೇಶಿಸಕೂಡದು ಎಂದು ಸೂಚಿಸಿದ್ದರು.

ADVERTISEMENT

ಈ ಕುರಿತು ರಾಜ್ಯಪಾಲ ಜಗದೀಪ್ ಧಂಖರ್ ಅವರು ಸಿಎಂ ಮಮತಾಗೆ ಪತ್ರ ಬರೆದು, “ನಿಮ್ಮ ನಿಲುವು ಒಕ್ಕೂಟ ವ್ಯವಸ್ಥೆ ಹಾಗೂ ರಾಷ್ಟ್ರೀಯ ಭದ್ರತೆಗೆ ಅಪಾಯಕಾರಿಯಾಗಿದೆ. ಸಾಮರಸ್ಯ ಮತ್ತು ಸಹಕಾರದ ವಾತಾವರಣವನ್ನು ಸೃಷ್ಟಿಸಲು ಬಿಎಸ್‌ಎಫ್ ಕಾರ್ಯನಿರ್ವಹಣೆಯ ಕುರಿತು ತಮ್ಮ ನಿಲುವನ್ನು ಮರುಪರಿಶೀಲಿಸಬೇಕು’’ ಎಂದು ತಿಳಿಸಿದ್ದಾರೆ.

 

ರಾಜ್ಯಪಾಲರ ಪತ್ರಕ್ಕೆ ಪ್ರತಿಕ್ರಿಯಿಸಿರುವ ಟಿಎಂಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕುನಾಲ್ ಘೋಷ್, ರಾಜ್ಯಪಾಲ ಧಂಖರ್ ಅವರು ಬಿಜೆಪಿ ವಕ್ತಾರರಂತೆ ವರ್ತಿಸುವುದನ್ನು ಮೊದಲು ನಿಲ್ಲಿಸಬೇಕು. ರಾಜ್ಯಪಾಲರು ತಮ್ಮ ಹುದ್ದೆಯ ಘನತೆಯನ್ನು ಕಾಪಾಡಬೇಕು. ಒಕ್ಕೂಟ ವ್ಯವಸ್ಥೆಯ ಬಗ್ಗೆ ಮಾತನಾಡುವ ರಾಜ್ಯಪಾಲರು ಪಶ್ಚಿಮ ಬಂಗಾಳದಿಂದ ಡಾರ್ಜಿಲಿಂಗ್ ಬೆಟ್ಟಗಳನ್ನು ಬೇರ್ಪಡಿಸುವ ಕುರಿತು ಬಿಜೆಪಿ ಶಾಸಕರೊಬ್ಬರ ಬೇಡಿಕೆಯ ಬಗ್ಗೆ ಅವರ ನಿಲುವು ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಬಾಂಗ್ಲಾದೇಶ ಮತ್ತು ಪಾಕಿಸ್ತಾನದೊಂದಿಗೆ ತಮ್ಮ ಗಡಿಯನ್ನು ಹಂಚಿಕೊಳ್ಳುವ ರಾಜ್ಯಗಳಾದ ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪಂಜಾಬ್‌ಗಳಲ್ಲಿ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ವ್ಯಾಪ್ತಿಯನ್ನು 15 ಕಿ.ಮೀ ನಿಂದ 50 ಕಿ.ಮೀ ವರೆಗೆ ವಿಸ್ತರಿಸಿ ಗೃಹ ಸಚಿವಾಲಯ ಇತ್ತೀಚೆಗೆ ಆದೇಶ ಹೊರಡಿಸಿತ್ತು.

ಪಶ್ಚಿಮ ಬಂಗಾಳ ಮತ್ತು ಪಂಜಾಬ್ ಎರಡೂ ಸರ್ಕಾರಗಳು ಕೇಂದ್ರದ ಕ್ರಮವನ್ನು ವಿರೋಧಿಸಿ ವಿಧಾನಸಭೆಯಲ್ಲಿ ಈ ಕುರಿತು ನಿರ್ಣಯಗಳನ್ನು ಅಂಗೀಕರಿಸಿವೆ. ನಾಡಿಯಾ ಜಿಲ್ಲೆಯ ಕೃಷ್ಣಾನಗರದಲ್ಲಿ ನಡೆದ ಆಡಳಿತ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಮಮತಾ, ಭದ್ರತಾ ಚೆಕ್‌ಪೋಸ್ಟ್‌ಗಳಲ್ಲಿ (ನಾಕಾ) ಹೆಚ್ಚು ಕಟ್ಟುನಿಟ್ಟಾಗಿ ಶೋಧ ನಡೆಸುವಂತೆ ಜಿಲ್ಲಾ ಪೊಲೀಸರಿಗೆ ಸೂಚಿಸಿದರು. “ಬಾಂಗ್ಲಾದೇಶದ ಗಡಿಯು ಕರೀಂಪುರದಿಂದ ಪ್ರಾರಂಭವಾಗುತ್ತದೆ ಮತ್ತು ನೀವು ಈ ಪ್ರದೇಶದಲ್ಲಿನ ಎಲ್ಲ ಚಟುವಟಿಕೆಗಳ ಮೇಲೆ ಕಣ್ಣಿಡಬೇಕು. ನಿಮ್ಮ ಅನುಮತಿಯಿಲ್ಲದೆ ಯಾವುದೇ ಚಟುವಟಿಕೆಯನ್ನು ಬಿಎಸ್‌ಎಫ್‌ ನಡೆಸುವುದಿಲ್ಲ ಎಂಬುದನ್ನು ನೀವು ಖಚಿತಪಡಿಸಿಕೊಳ್ಳಬೇಕು. ಕಾನೂನು ಮತ್ತು ಸುವ್ಯವಸ್ಥೆ ರಾಜ್ಯದ ವಿಷಯವಾಗಿದ್ದು, ಸಾಮಾನ್ಯ ನಾಗರಿಕರ ಮೇಲೆ ಯಾವುದೇ ರೀತಿಯ ದಬ್ಬಾಳಿಕೆಯನ್ನು ನಾನು ಸಹಿಸುವುದಿಲ್ಲ,”ಎಂದು ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮಮತಾ ನಿಲುವಿನ ಬಗ್ಗೆ ಟ್ವೀಟ್‌ ಮಾಡಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಎಸ್‌ಎಫ್ ಮತ್ತು ರಾಜ್ಯ ಪೊಲೀಸರ ನಡುವೆ ಬಿರುಕು ಮೂಡಿಸುತ್ತಿದ್ದಾರೆ. ಈ ರೀತಿಯಾದರೆ ರಾಜ್ಯದ ಮುಖ್ಯಮಂತ್ರಿಯಾಗುವಾಗ ಮಾಡಿದ ಪ್ರಮಾಣಕ್ಕೆ ಬದ್ಧರಾಗಿ, ಭಾರತದ ಸಂವಿಧಾನದ ಮೇಲೆ ನಂಬಿಕೆ ಮತ್ತು ನಿಷ್ಠೆಯನ್ನು ಹೇಗೆ ಹೊಂದುತ್ತಾರೆ? ಹಾಗೂ ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ಹೇಗೆ ಎತ್ತಿಹಿಡಿಯುತ್ತಾರೆ ಎಂಬುದು ನನಗೆ ಆಶ್ಚರ್ಯವಾಗಿದೆ,” ಎಂದು ಕುಟುಕಿದ್ದಾರೆ.

I wonder how, the Chief Minister of a State, bound by the oath taken by her, to bear true faith and allegiance towards the Constitution of India & supposed to uphold the sovereignty and integrity of India; could repeatedly malign @BSF_India, who are assigned to do just that.

— Suvendu Adhikari (Modi Ka Parivar) (@SuvenduWB) December 9, 2021
Tags: BJPBSFMamata BanerjeePoliceWestbengalನರೇಂದ್ರ ಮೋದಿಪಶ್ಚಿಮ ಬಂಗಾಳಪೊಲೀಸಬಿಎಸ್ಎಫ್ಬಿಜೆಪಿಮಮತಾ ಬ್ಯಾನರ್ಜಿಸಿಎಂ
Previous Post

ತಮ್ಮ ಹಕ್ಕಿಗಾಗಿ ಸಂಘಟಿತರಾದ ಕಾರ್ಮಿಕರನ್ನು ಕೆಲಸದಿಂದ ವಜಾಮಾಡಿದ ಐಟಿಐ; 80 ಕಾರ್ಮಿಕರು ಬೀದಿಗೆ

Next Post

ಬಿಜೆಪಿ ಸದಸ್ಯರೊಂದಿಗೆ ವಾಗ್ವಾದ ನಡೆಸಿದ ಡಿಎಂಕೆ ಸಂಸದ ದಯಾನಿಧಿ ಮಾರನ್

Related Posts

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ
Top Story

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

by ಪ್ರತಿಧ್ವನಿ
October 23, 2025
0

ಮಿಲೆನಿಯಂ ಸಮೂಹದ ಮುಂದೆ ಪರ್ಯಾಯವೊಂದನ್ನು  ಇಡದಿದ್ದರೆ  ನಮ್ಮ ಶ್ರಮ ನಿರರ್ಥಕವಾಗುತ್ತದೆ ನಾ ದಿವಾಕರ  ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್)‌ ರಾಜಕೀಯ ಚಟುವಟಿಕೆಗಳನ್ನು ನಿಯಂತ್ರಿಸುವ ಭರದಲ್ಲಿ...

Read moreDetails
ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

October 22, 2025

ನವೆಂಬರ್‌ ಕ್ರಾಂತಿ ನಡುವೆ ಡಿಕೆಶಿ ಟೆಂಪಲ್‌ ರನ್..!‌ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್ ಮತ್ತು ಪತ್ನಿ ಉಷಾ

October 22, 2025

ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?

October 22, 2025

ದರ್ಶನ್ ಅವರ ತಮ್ಮ ನೋಡಿ ನನ್ನ ಬಾಲಿವುಡ್ ಹೀರೋ ಅನ್ಕೊಂಡ್ರೂ

October 22, 2025
Next Post
ಬಿಜೆಪಿ ಸದಸ್ಯರೊಂದಿಗೆ ವಾಗ್ವಾದ ನಡೆಸಿದ ಡಿಎಂಕೆ ಸಂಸದ ದಯಾನಿಧಿ ಮಾರನ್

ಬಿಜೆಪಿ ಸದಸ್ಯರೊಂದಿಗೆ ವಾಗ್ವಾದ ನಡೆಸಿದ ಡಿಎಂಕೆ ಸಂಸದ ದಯಾನಿಧಿ ಮಾರನ್

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada