• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ತರಾತುರಿಯಲ್ಲಿ ದೇವಸ್ಥಾನಗಳನ್ನು ನೆಲಸಮ ಮಾಡಬೇಡಿ – ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
September 15, 2021
in ಕರ್ನಾಟಕ
0
ಕೋವಿಡ್-19 3ನೇ ಅಲೆ ಹಿನ್ನೆಲೆ ತೀವ್ರ ಕಟ್ಟೆಚರ ವಹಿಸಲು ಸೂಚನೆ.
Share on WhatsAppShare on FacebookShare on Telegram

ಸುಪ್ರೀಂ ಕೋರ್ಟ್ ಆದೇಶದ ನಂತರ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ತರಾತುರಿಯಲ್ಲಿ ದೇವಸ್ಥಾನಗಳನ್ನು ನೆಲಸಮ ಮಾಡದಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನ್ಯಾಯಲಯದ ಆದೇಶದ ನಂತರ ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಲಾಗಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಕೋರ್ಟ್ ಸೂಚಿಸಿದ ನಂತರ ಅಧಿಕಾರಿಗಳು ದೇವಸ್ಥಾನಗಳ ತೆರವಿಗೆ ಮುಂದಾಗಿದರು . ಆದರೆ ಅಧಿಕಾರಿಗಳು ತರಾತುರಿಯಲ್ಲಿ ನಿರ್ಧಾರವನ್ನ ತೆಗೆದುಕೊಳ್ಳಬಾರದೆಂದು ಮುಖ್ಯಮಂತ್ರಿ ಹೇಳಿದ್ದಾರೆ.

ADVERTISEMENT

ಸುಪ್ರೀಂ ಕೋರ್ಟ್ ಆದೇಶವನ್ನ ವಿವರವಾಗಿ ಅಧ್ಯಯನ ನಡೆಸಿ ಸಂಪುಟದಲ್ಲಿ ಚರ್ಚಿಸಿದ ನಂತರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಬೊಮ್ಮಾಯಿಯವರು ತಿಳಿಸಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ದೇವಸ್ಥಾನವನ್ನು ನೆಲಸಮಗೊಳಿಸಿದ್ದಕ್ಕಾಗಿ ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್ ವಿರುದ್ಧ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಕೋರ್ಟ್ ಆದೇಶದ ನಂತರ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಲಾಗಿರುವ ಧಾರ್ಮಿಕ ಸ್ಥಳಗಳ ತೆರವಿಗೆ ಸಂಬಂಧಿಸಿದಂತೆ ಆಡಳಿತರೂಢ ಬಿಜೆಪಿ ಸರ್ಕಾರವು ವ್ಯಾಪಕ ಟೀಕೆಗೆ ಗುರಿಯಾಗಿದೆ.ರಾಜ್ಯಾದ್ಯಂತ ಜಿಲ್ಲಾಡಳಿತಗಳು ದೇವಸ್ಥಾನಗಳ ತೆರವಿಗೆ ಮುಂದಾಗಿರುವುದಕ್ಕೆ ಸ್ವಪಕ್ಷೀಯ ಶಾಸಕರು, ವಿರೋಧ ಪಕ್ಷದ ಸದಸ್ಯರು ಮತ್ತು ಹಿಂದು ಪರ ಸಂಘಟನೆಗಳಿಂದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಿರೋಧ ವ್ಯಕ್ತವಾಗಿದೆ.

ಕರ್ನಾಟಕದ ಪ್ರಬಲ ಹಿಂದು ಸಂಘಟನೆ, ಹಿಂದೂ ಜಾಗರಣ ವೇದಿಕೆಯು ಮೈಸೂರು ಜಿಲ್ಲೆಯಲ್ಲಿರುವ 97 ಧಾರ್ಮಿಕ ಸ್ಥಳಗಳನ್ನು ಅದರಲ್ಲಿ 93 ಹಿಂದೂ ದೇವಾಲಯಗಳನ್ನು ತೆರವುಗೊಳಿಸಲು ಮುಂದಾಗಿರುವ ಜಿಲ್ಲಾಡಳಿತ ವಿರುದ್ಧ ಸರೆಪ್ಟೆಂಬರ್ 16ರಂದು ಬೃಹತ್ ಪ್ರತಿಭಟನೆಯನ್ನು ಆಯೋಜಿಸಿದೆ. ಪ್ರತಿಭಟನೆ ವೇಳೆ ಹಿಂದೂ ಜಾಗರಣ ವೇದಿಕೆ ದಕ್ಷಿಣ ಭಾರತದ ಉಸ್ತುವಾರಿ ಜಗದೀಶ್ ಕಾರಂತ್ ಮೈಸೂರಿಗೆ ಭೇಟಿ ನೀಡಲಿದ್ದಾರೆ.


ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನಂಜನಗೂಡಿನಲ್ಲಿ ದೇವಸ್ಥಾನವನ್ನು ಕೆಡವುತ್ತಿರುವ ವಿಡಿಯೋವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದು, ಬಿಜೆಪಿ ಆಡಳಿತದಲ್ಲಿ ರಾಜ್ಯದಲ್ಲಿ ದೇವಸ್ಥಾನಗಳು ಸುರಕ್ಷಿತವಾಗಿಲ್ಲ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಅಧಿಕಾರಿಗಳು ಬರೀ ಹಿಂದು ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡಿದ್ದಾರೆ ಮತ್ತು ದೇವಸ್ಥಾನಗಳ ಕಳಸವನ್ನು ಸ್ಥಳಾಂತರಿಸಲು ಅವರು ಸಮಯವನ್ನು ನೀಡುತ್ತಿಲ್ಲ ಸುಪ್ರೀಂ ಕೋರ್ಟ್‌ ಆದೇಶವನ್ನ ಅವರು ತಿರುಚಿದ್ದಾರೆ. ಸುಪ್ರೀಂ ಕೋರ್ಟ್‌ ಆದೇಶದಲ್ಲಿರುವುದು ಪರಿಶೀಲಿಸಿ ಎಂದು ಕೆಡವಿ ಎಂದಲ್ಲ ಇದನ್ನು ನಾವು ಸಹಿಸುವುದಿಲ್ಲ. ಅವರು ಅಕ್ರಮ ಮಸೀದಿಗಳು ಮತ್ತು ದರ್ಗಾಗಳನ್ನು ಮುಟ್ಟಲು ಧೈರ್ಯ ಮಾಡುತ್ತಾರೆಯೇ,ಎಂದು ಸಂಸದ ಪ್ರತಾಪ್‌ ಸಿಂಹ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: Basavaraj BommaiBJPCongress PartyMysoreMysuruPratap Simhaಬಿಜೆಪಿಸಿದ್ದರಾಮಯ್ಯ
Previous Post

ದೇವಾಲಯ ನೆಲಸಮ ವಿಚಾರವಾಗಿ ನಂಜನಗೂಡಿನಲ್ಲಿ ಪ್ರತಿಭಟನೆ

Next Post

ನಿಫಾ ವೈರಸ್‌ : ಗೋವಾದಿಂದ ಮಂಗಳೂರಿಗೆ ಬಂದ ವ್ಯಕ್ತಿಯಲ್ಲಿ ನಿಫಾ ಸೋಂಕಿನ ಗುಣಲಕ್ಷಣಗಳು ಪತ್ತೆ !

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
ಕೇರಳದಲ್ಲಿ ನಿಫಾ ಸೋಂಕು ಹಿನ್ನೆಲೆ ರಾಜ್ಯ ಸರ್ಕಾರದಿಂದ ಸೋಂಕಿನ ಗುಣ ಲಕ್ಷಣಗಳ ಪಟ್ಟಿ ಬಿಡುಗಡೆ!

ನಿಫಾ ವೈರಸ್‌ : ಗೋವಾದಿಂದ ಮಂಗಳೂರಿಗೆ ಬಂದ ವ್ಯಕ್ತಿಯಲ್ಲಿ ನಿಫಾ ಸೋಂಕಿನ ಗುಣಲಕ್ಷಣಗಳು ಪತ್ತೆ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada