• Home
  • About Us
  • ಕರ್ನಾಟಕ
Friday, December 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆಗೆ ಬನ್ನಿ- ಸಿದ್ದರಾಮಯ್ಯ ಸವಾಲು

ಪ್ರತಿಧ್ವನಿ by ಪ್ರತಿಧ್ವನಿ
September 26, 2024
in Top Story, ದೇಶ, ರಾಜಕೀಯ, ವಿಶೇಷ, ಶೋಧ
0
ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆಗೆ ಬನ್ನಿ- ಸಿದ್ದರಾಮಯ್ಯ ಸವಾಲು
Share on WhatsAppShare on FacebookShare on Telegram

ADVERTISEMENT

ಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ

ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆಗೆ ಬನ್ನಿ- ಸಿದ್ದರಾಮಯ್ಯ ಸವಾಲು

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹುದ್ದೆಯನ್ನು ಎರಡುವರೆ ಸಾವಿರ ಕೋಟಿ ರೂಪಾಯಿಗಳಿಗೆ ಹರಾಜು ಹಾಕಿ ಹಣ ಪೀಕಿದ್ದಾರೆ ಎಂಬ ಆರೋಪವನ್ನು ಸ್ವಪಕ್ಷದ ನಾಯಕರಿಂದಲೇ ಎದುರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ?

ತಮ್ಮ ಪಕ್ಷದ ಮುಖ್ಯಮಂತ್ರಿ ಹುದ್ದೆಯನ್ನು ಮಾರಾಟ ಮಾಡಲಾಗಿದೆ ಎಂದು ರಾಜ್ಯದ BJP MLA ಬಿಜೆಪಿ ಶಾಸಕರೊಬ್ಬರು ಬಹಿರಂಗವಾಗಿ ಆರೋಪಿಸಿದ್ದರೂ ಅವರ ಮೇಲೆ ಕ್ರಮ ಇಲ್ಲ. ದಿನ ಬೆಳಗಾದರೆ ಭ್ರಷ್ಟಾಚಾರದ ಆರೋಪದ ಕೆಸರೆರಚಾಟದಲ್ಲಿ ತೊಡಗಿರುವ ಬಿಜೆಪಿ ಶಾಸಕರ ವಿರುದ್ಧವೂ ಯಾವ ಕ್ರಮವೂ ಇಲ್ಲ. ನರೇಂದ್ರ ಮೋದಿ ಅವರೇ ಈ ಮೌನಕ್ಕೆ, ಈ ನಿಷ್ಕ್ರೀಯತೆಗೆ ಏನು ಕಾರಣ? ಈ ಭ್ರಷ್ಟಾಚಾರದಲ್ಲಿ ನೀವೂ ಭಾಗಿದಾರರೆಂದು ತಿಳಿದುಕೊಳ‍್ಳಬಹುದೇ?

Lawyer Jagadesh : ಹೇ ಬೊಮ್ಮಾಯಿಗೆ 10 ಸಾವಿರ ವಿಡಿಯೋ ಮಾಡೋ ಅಷ್ಟು ಕೆಪ್ಯಾಸಿಟಿ ಇಲ್ಲ ಬಿಡ್ರಿ ಎಂದ ಲಾಯರ್ ಜಗದೀಶ್

ನಮ್ಮ ಸರ್ಕಾರದ ವಿರುದ್ದ ಭ್ರಷ್ಟಾಚಾರದ ಆರೋಪ ಹೊರಿಸಿ ಭಾಷಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ.

ಗಣಿಗಾರಿಕೆಗೆ ಕಾನೂನುಬಾಹಿರವಾಗಿ ಭೂಮಿ ಮಂಜೂರು ಮಾಡಿರುವ, ನೂರಾರು ಕೋಟಿ ರೂಪಾಯಿ ಹಗರಣದ ಆರೋಪ ಎದುರಿಸುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಕೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿರುವ ನಿಮಗೆ ಇತರರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುವಾಗ ಆತ್ಮಸಾಕ್ಷಿಯೂ ಚುಚ್ಚುವುದಿಲ್ಲವೇ? ಈ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಕರ್ನಾಟಕದ ಲೋಕಾಯುಕ್ತರು ಕೋರಿರುವ ಅನುಮತಿ ಬಗ್ಗೆ ಘನತೆವೆತ್ತ ರಾಜ್ಯಪಾಲರು ಕಣ್ಣುಮುಚ್ಚಿಕೊಂಡಿರುವುದೇಕೇ? ಅವರ ಮೇಲೆ ಒತ್ತಡ ಹೇರುತ್ತಿರುವರು ಯಾರು?

Niketh Raj Mourya : CM ಪರ ನಿಂತು ..ಮೋದಿ ವಿರುದ್ಧ ರೊಚ್ಚಿಗೆದ್ದ ನಿಖಿತ್ ರಾಜ್ ಮೌರ್ಯ  #pratidhvani

ಪ್ರಧಾನಿ ನರೇಂದ್ರ ಮೋದಿ ಅವರೇ, ಕಳೆದ ಹನ್ನೊಂದು ವರ್ಷಗಳಲ್ಲಿ ನಿರಂತರವಾಗಿ ನಿಮ್ಮ ಕಾರ್ಯಾಲಯದ ವಾಷಿಂಗ್ ಮೆಷಿನ್ ಕೆಲಸ ಮಾಡುತ್ತಿರುವುದನ್ನು ದೇಶ ಗಮನಿಸುತ್ತಿದೆ. ನಿಮ್ಮಿಂದಲೇ ಭ್ರಷ್ಟಾಚಾರದ ಆರೋಪಕ್ಕೊಳಗಾಗಿರುವ ವಿರೋಧ ಪಕ್ಷಗಳ ನಾಯಕರನ್ನೆಲ್ಲಾ ವಾಷಿಂಗ್ ಮೆಷಿನ್ ನಲ್ಲಿ ಹಾಕಿ ಪರಮ ಪ್ರಾಮಾಣಿಕರನ್ನಾಗಿ ಮಾಡುತ್ತಿರುವ ನಿಮ್ಮ ಚಾಕಚಕ್ಯತೆಗೆ ಶಹಭಾಸ್ ಅನ್ನಲೇ ಬೇಕು. ಅಧಿಕೃತ ಮಾಹಿತಿಯ ಪ್ರಕಾರವೇ 2014ರಿಂದ ಇಲ್ಲಿಯ ವರೆಗೆ ಭ್ರಷ್ಟಾಚಾರದ ಆರೋಪ ಹೊತ್ತಿರುವ 25 ವಿರೋಧ ಪಕ್ಷದ ನಾಯಕರು ಬಿಜೆಪಿ ಸೇರಿದ್ದಾರೆ. ಇವರಲ್ಲಿ 23 ನಾಯಕರನ್ನು ಭ್ರಷ್ಟಾಚಾರದ ಆರೋಪಗಳಿಂದ ಕೇಂದ್ರ ತನಿಖಾ ಸಂಸ್ಥೆಗಳು ಮುಕ್ತಗೊಳಿಸಿವೆ.

ಹಿಮಂತಾ ಶರ್ಮಾ, ಸುವೇಂದು ಅಧಿಕಾರಿ, ಹೆಚ್.ಡಿ.ಕುಮಾರಸ್ವಾಮಿ, ಅಜಿತ್ ಪವಾರ್, ಅಶೋಕ್ ಚವ್ಹಾಣ್, ನಾರಾಯಣ ರಾಣೆ, ಪ್ರತಾಪ್ ಸರ್‌ನಾಯಕ್ ಅವರಿಂದ ಹಿಡಿದು ಇತ್ತೀಚಿನ ಏಡ್ಸ್ ಟ್ರ್ಯಾಪ್ ಗಿರಾಕಿ ಮುನಿರತ್ನ ವರೆಗೆ ಎಷ್ಟೊಂದು ಭ್ರಷ್ಟರನ್ನು ವಾಷಿಂಗ್ ಮೆಷಿನ್ ನಲ್ಲಿ ತೊಳೆದು ನೀವು ಕ್ಲೀನ್ ಮಾಡಿಲ್ಲ? ಇವೆಲ್ಲ ಕೇವಲ ಧರ್ಮಾರ್ಥ ಸೇವೆಯೇ ಪ್ರಧಾನಿಗಳೇ?

ಪ್ರಧಾನಿ ನರೇಂದ್ರ ಮೋದಿ ಅವರೇ,
ನಿಮ್ಮ ಪಕ್ಷದ ಖಜಾನೆಗೆ ಸಂದಾಯವಾಗಿರುವ ಚುನಾವಣಾ ಬಾಂಡ್ ಗಳ ಹಿಂದಿನ ಕೊಡುಗೈ ದಾನಿಗಳು ಯಾರು? ಅವರು ಕೊಟ್ಟದ್ದೆಷ್ಟು? ಅದಕ್ಕಾಗಿ ಅವರು ಪಡೆದದ್ದು ಎಷ್ಟು? ಎನ್ನುವುದು ಇಂದು ದೇಶದ ಜನರ ಕಣ್ಣಮುಂದಿದೆ. ನಿಮ್ಮ ಹನ್ನೊಂದು ವರ್ಷಗಳ ಅವಧಿಯಲ್ಲಿ ಬ್ಯಾಂಕ್ ಲೂಟಿಗೈದವರು ದೇಶ ಬಿಟ್ಟು ಓಡಿಹೋಗಲು ದಾರಿ ಮಾಡಿಕೊಟ್ಟವರು ಯಾರು? ಅದಾನಿ-ಅಂಬಾನಿ ಅವರ ಸಂಪತ್ತು ಎಷ್ಟು ಪಟ್ಟು ಹೆಚ್ಚಾಯಿತು? ಬಡವರ ಗಳಿಕೆ ಎಷ್ಟು ಪಟ್ಟು ಕಡಿಮೆಯಾಯಿತು?

ನೀವು ಭ್ರಷ್ಟಾಚಾರದ ಬಗ್ಗೆ ಚರ್ಚೆ ಪ್ರಾರಂಭಿಸಿರುವುದನ್ನು ನೋಡಿ ಸಂತೋಷವಾಯಿತು. ನನ್ನ ವಿರುದ್ಧ corruption ಭ‍್ರಷ್ಟಾಚಾರದ ಸುಳ್ಳು ಆರೋಪಗಳನ್ನು ಮಾಡಿ ಕುಣಿದಾಡುತ್ತಿರುವ ಪಾತ್ರಧಾರಿಗಳನ್ನಷ್ಟೇ ರಾಜ್ಯದ ಜನ ನೋಡಿದ್ದಾರೆ. ಈಗ ಇದರ ಹಿಂದಿರುವ ಸೂತ್ರಧಾರಿ ಯಾರು ಎನ್ನುವುದು ಕೂಡಾ ಜನರಿಗೆ ಗೊತ್ತಾಗಲಿ.

Zameer on Lokayukta case: ಸಿದ್ರಾಮಯ್ಯ ಕೇಸ್ ತನಿಖೆ ನಡೆದು ಸತ್ಯಾಂಶ ಹೊರಗೆ ಬರಲಿ #pratidhvani

Mr. Modi. ಮೋದಿಯವರೇ, ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, direct debate ನೇರಾನೇರ ಚರ್ಚೆ ಮಾಡಲು ನೀವು ಸಿದ್ಧ ಇದ್ದರೆ ನಾನು ಸದಾ ಸಿದ್ಧ.

Tags: BJPCM Siddaramaiahcm siddaramaiah mocks pm narendra modicm siddaramaiah on pm modiCongress PartyNarendra Modinarendra modi vs siddaramaiahPM Modipm modi on siddaramaiahPM Narendra Modipm narendra modi speechsiddaramaiahsiddaramaiah latest newssiddaramaiah muda scamsiddaramaiah narendra modisiddaramaiah newssiddaramaiah on modisiddaramaiah slams modisiddaramaiah to meet pm narendra modisiddaramaih on pm modiಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಿದ್ದರಾಮಯ್ಯ ವಿರುದ್ಧ FIR ದಾಖಲಿಸುವಂತೆ ಅರ್ಜಿ ರೊಚ್ಚಿಗೆದ್ದ ನಿಖಿತ್ ರಾಜ್

Next Post

ಮುಡಾ ಕೆಸ್‌ನಲ್ಲಿ ಸಿಎಂ ಸಿದ್ದರಾಮಯ್ಯ A1 ಆರೋಪಿ ?! ಇಂದು ದಾಖಲಾಗಲಿದೆ F.I.R !

Related Posts

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌
Top Story

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

by ಪ್ರತಿಧ್ವನಿ
December 11, 2025
0

ಈ ಹಿಂದೆ ಮಾರಿಗುಡ್ಡದ ಗಡ್ಡಧಾರಿಗಳು ಎಂಬ ಚಿತ್ರವನ್ನು ನಿರ್ಮಾಣ ಮಾಡಿದ್ದ ಸಲಗ ಖ್ಯಾತಿಯ ಸೂರಿ ಅಣ್ಣ(ದಿನೇಶ್) ಇದೀಗ ಮತ್ತೊಂದು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಆ ಚಿತ್ರದ ಹೆಸರೂ...

Read moreDetails
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

December 11, 2025
ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

December 11, 2025
Next Post
ಸಿದ್ದರಾಮಯ್ಯ ಟೆನ್ಶನ್ ಇನ್ನೆರಡು ದಿನ ಕಂಟಿನ್ಯೂ! ಸೋಮವಾರಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಮುಡಾ ಕೆಸ್‌ನಲ್ಲಿ ಸಿಎಂ ಸಿದ್ದರಾಮಯ್ಯ A1 ಆರೋಪಿ ?! ಇಂದು ದಾಖಲಾಗಲಿದೆ F.I.R !

Recent News

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌
Top Story

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

by ಪ್ರತಿಧ್ವನಿ
December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?
Top Story

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

by ಪ್ರತಿಧ್ವನಿ
December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?
Top Story

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

by ಪ್ರತಿಧ್ವನಿ
December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

December 11, 2025
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!