ಪ್ರಸಿದ್ದ ಧಾರ್ಮಿಕ ಕೇಂದ್ರ ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿ ಸಮೀಕ್ಷೆ ತಡೆಯಾಜ್ಞೆ ನೀಡುವಂತೆ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಪ್ರಕರಣದ ಬಗ್ಗೆ ನಮ್ಮಗೆ ತಿಳಿದಿಲ್ಲ ನಾವು ಆದೇಶವನ್ನು ಹೇಗೆ ನೀಡುವುದು ಎಂದು ಎನ್.ವಿ.ರಮಣ ನೇತೃತ್ವದ ಪೀಠವು ಅರ್ಜಿದಾರರಿಗೆ ಚಾಟಿ ಬೀಸಿದೆ.
ಈ ಹಿಂದೆ ವಾರಣಾಸಿ ಜಿಲ್ಲಾ ನ್ಯಾಯಾಲಯಕ್ಕೆ ಮಸೀದಿಯ ಸುತ್ತ ಸರ್ವೇ ನಡೆಸುವಂತೆ ಆದೇಶಿಸಿತ್ತು. ಸದ್ಯ ವಿಚಾರವನ್ನು ತಿಳಯದೆ ಯಾವುದೇ ಆದೇಶವನ್ನು ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ವಾರಣಾಸಿ ಜಿಲ್ಲಾ ನ್ಯಾಯಾಲಯಕ್ಕೆ ಮಸೀದಿ ಇರುವ ಜಾಗದಲ್ಲಿ ಸ್ವರ್ಣ ಗೌರಿ ದೇವಾಲಯಕ್ಕೆ ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ ವೇಳೆ ನ್ಯಾಯಾಲಯ ಸಮೀಕ್ಷೆ ನಡೆಸುವಂತೆ ಆದೇಶಿಸಿತ್ತು.










