ಕರ್ನಾಟಕದಲ್ಲಿ ತೀವ್ರವಾಗಿ ಚರ್ಚೆಗೆ ಗ್ರಾಸವಾಗಿರುವ ಹಿಜಾಬ್ ವಿವಾದವನ್ನು ರಾಷ್ಟ್ರೀಯ ಮಟ್ಟಕ್ಕೆ ತರಬಾರದು ಮತ್ತು ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗಿದ್ದರೆ ಸುಪ್ರೀಂ ಕೋರ್ಟ್ ಸೂಕ್ತ ಸಮಯದಲ್ಲಿ ಮಧ್ಯ ಪ್ರವೇಶಿಸಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಕರ್ನಾಟಕ ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಎನ್.ವಿ.ರಮಣ ನೇತೃತ್ವದ ಏಕಸದಸ್ಯ ಪೀಠವು, ವಿಚಾರವನ್ನು ರಾಷ್ಟ್ರಮಟ್ಟದಲ್ಲಿ ತರುವುದು ಸರಿಯೇ ಎಂದು ಅರ್ಜಿದಾರರ ಪರ ವಕೀಲರಿಗೆ ಪ್ರಶ್ನಿಸಿದ್ದಾರೆ.
ಗುರುವಾರ ಈ ಕುರಿತು ಕರ್ನಾಟಕ ಹೈಕೋರ್ಟ್ ಮುಂದಿನ ಆದೇಶ ಬರುವವರೆಗೂ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ಉಡುಪುಗಳನ್ನು ಧರಿಸಿ ಶಾಲಾ ಕಾಲೇಜುಗಳಿಗೆ ಹೋಗಬಾರದು ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿತ್ತು.

