• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಆ ತಾಯಿ ಬಗ್ಗೆ ಮಾತನಾಡಲ್ಲ: ಸುಮಲತಾ ಬಗ್ಗೆ ನಿಖಿಲ್ ಕುಮಾರಸ್ವಾಮಿ ಮೃದು ಧೋರಣೆ

ಪ್ರತಿಧ್ವನಿ by ಪ್ರತಿಧ್ವನಿ
February 14, 2023
in ಕರ್ನಾಟಕ, ರಾಜಕೀಯ
0
ಆ ತಾಯಿ ಬಗ್ಗೆ ಮಾತನಾಡಲ್ಲ: ಸುಮಲತಾ ಬಗ್ಗೆ ನಿಖಿಲ್ ಕುಮಾರಸ್ವಾಮಿ ಮೃದು ಧೋರಣೆ
Share on WhatsAppShare on FacebookShare on Telegram

ಮಂಡ್ಯ : ಆ ತಾಯಿ ಬಗ್ಗೆ ಹಿಂದೆಯೂ ಮಾತಮಾಡಿಲ್ಲ ಈಗಲು ಮಾತನಾಡಲ್ಲ ಎಂದು ಹೇಳುವ ಮೂಲಕ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸುಮಲತಾ ಅಂಬರೀಶ್ ಅವರ ಬಗ್ಗೆ ಮೃದು ಧೋರಣೆ ತಳೆದಿದ್ದಾರೆ.

ADVERTISEMENT

ನಿಖಿಲ್ ಇಮ್ಮೆಚ್ಚುರ್ ಎಂಬ ಸುಮಲತಾ ಅಂಬರೀಶ್ ಹೇಳಿಕೆಗೆ ಮಂಡ್ಯದಲ್ಲಿಂದು ಪ್ರತಿಕ್ರಿಯಿಸಿದ ನಿಖಿಲ್ ಕುಮಾರಸ್ವಾಮಿ, ಹಿಂದಿನ ಚುನಾವಣೆ ಸಂದರ್ಭದಲ್ಲಿ ಕೂಡ ಆ ತಾಯಿ ಬಗ್ಗೆ ಮಾತನಾಡಿಲ್ಲ. ಮುಂದೆಯೂ ಅವರ ಬಗ್ಗೆ ನಾನು ಮಾತನಾಡಲ್ಲ ಎಂದರು.

ಚನ್ನಪಟ್ಟಣದಲ್ಲಿ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧೆ

ಎಚ್.ಡಿ.ಕುಮಾರಸ್ವಾಮಿ ಮಂಡ್ಯದಲ್ಲಿ ಸ್ಪರ್ಧೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಕುಮಾರಣ್ಣ ಎಷ್ಟು ಕಡೆ ಅಂತ ಸ್ಪರ್ಧೆ ಮಾಡಲು ಸಾಧ್ಯ. ರಾಮನಗರ ಕ್ಷೇತ್ರ ಉಳಿಸಬೇಕು ಎಂಬ ನಿಟ್ಟಿನಲ್ಲಿ 2018ರಲ್ಲಿ ಚನ್ನಪಟ್ಟಣದಲ್ಲಿ ಸ್ಪರ್ಧಿಸಿದರು. ಈಗ ಕುಮಾರಸ್ವಾಮಿ ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ ಅವರ ಸ್ಪರ್ಧೆ ಚನ್ನಪಟ್ಟಣದಲ್ಲಿ ಮಾತ್ರ ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್ ಪಕ್ಷದ ಟಿಕೆಟ್ ಹಂಚಿಕೆ ವಿಚಾರವಾಗಿ ಮಾತನಾಡಿ, ನಾನು ಜೆಡಿಎಸ್ ಯುವ ಘಟಕದ ಅಧ್ಯಕ್ಷ. ನನಗೆ ಯುವಕರ ಸಂಘಟನೆ ಮಾಡಲು ಸೂಚನೆ ನೀಡಿದ್ದಾರೆ. ಕುಮಾರಸ್ವಾಮಿ ಅವರದ್ದು ಏಕಾಂಗಿ ಹೋರಾಟವಾಗಿದೆ. ಈ ಏಕಾಂಗಿ ಹೋರಾಟಕ್ಕೆ ಯುವಕರ ಸಂಘಟನೆ ಮಾಡೋ ಕೆಲಸ ನಾನು ಮಾಡುತ್ತಿದ್ದೇನೆ ಎಂದು ಹೇಳಿದರು.

ಮತ್ತೆ ಮಂಡ್ಯ ಕ್ಷೇತ್ರದಲ್ಲಿ ಚುನಾವಣೆ ಗೆಲ್ಲುವ  ಸವಾಲಿನ ಕುರಿತು ಪ್ರತಿಕ್ರಿಯಿಸಿ,  2024ರ ಎಂಪಿ ಚುನಾವಣೆಯಲ್ಲಿ ಸಾಧಾರಣ ಕಾರ್ಯಕರ್ತರನ್ನು  ನಿಲ್ಲಿಸಿ ಗೆಲ್ಲಿಸುತ್ತೇವೆ ಎಂದು ನಾವು ಸವಾಲು ಹಾಕಿದ್ದೇವೆ. ಎಂಪಿ ಚುನಾವಣೆ ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ 2024ರ ಎಂಪಿ ಚುನಾವಣೆ ಹೇಗೆ ಮಾಡುತ್ತೇವೆ ನೋಡುತ್ತಿರಿ. ರಾಜಕೀಯ ಷ್ಯಡ್ಯಂತರದಿಂದ ನಿಖಿಲ್ ಕುಮಾರಸ್ವಾಮಿ ಸೋತಿದ್ದು, ಅವತ್ತು ಜನ ನನಗೆ ಆಶಿರ್ವಾದ ಮಾಡಿದ್ದಾರೆ ಎಂದು ತಿಳಿಸಿದರು.

ಚೆನ್ನಪಟ್ಟಣದಲ್ಲಿ ರಮ್ಯಾ ಸ್ಪರ್ಧೆ ಕುರಿತು ಚರ್ಚೆ ಕುರಿತು ಮಾತನಾಡಿ, ಇದೆಲ್ಲ ಸುಳ್ಳು ಸುದ್ದಿ, ಮಾಧ್ಯಮಗಳು ಕ್ರಿಯೇಟ್ ಮಾಡಿವೆ ಅಷ್ಟೇ. ರಮ್ಯಾ, ನನ್ನ ಬಾಂಡಿಂಗ್ ಚೆನ್ನಾಗಿದೆ ಅವರು ಚೆನ್ನಪಟ್ಟಣಕ್ಕೆ ಬರುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್, ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂಬ ಸಿ.ಪಿ.ಯೋಗೀಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಸಿಪಿವೈ ಹತಾಶರಾಗಿದ್ದಾರೆ ಅವರ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ.. ಒಂದೊಂದು ಸರಿ ಒಂದೊಂದು ಹೇಳಿಕೆ ಕೊಡುತ್ತಲೆ ಇದ್ದಾರೆ ಎಂದರು.

ಎಚ್.ಡಿ.ಕುಮಾರಸ್ವಾಮಿ ಅವರು ಕೊಟ್ಟ ಕುದುರೆ ಏರಲಿಲ್ಲ ಎಂಬ ಡಿಕೆಶಿ ಹೇಳಿಕೆ ಬಗ್ಗೆ ಮಾತನಾಡಿ, ಕುದುರೆಯನ್ನು  ಕೊಟ್ಟರು ಆದರೆ ನಾಲ್ಕು ಕಾಲು ಕತ್ತರಿಸಿ ಕೊಟ್ಟರು. ನಾಲ್ಕು ಕಾಲು ಕಿತ್ತು ಕುದುರೆ ಸವಾರಿ ಮಾಡು ಅಂದ್ರೆ ಹೇಗೆ ಮಾಡಲು ಸಾಧ್ಯ ಎಂದು ತಿರುಗೇಟು ನೀಡಿದರು.

ನಮ್ಮ ಗುರಿ 123 ಸೀಟ್ ಇದೆ. ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷ ಮೊದಲ ಸ್ಥಾನದಲ್ಲಿರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Tags: JDSNikhil Kumaraswamy
Previous Post

ಆಶಾ ಕಾರ್ಯಕರ್ತೆಯರ ಎಲ್ಲಾ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಲು ಕ್ರಮ: ಡಾ.ಕೆ.ಸುಧಾಕರ್

Next Post

ರಾಮೇನಹಳ್ಳಿ ಜಗನ್ನಾಥ್ ಮೊದಲ ಚಿತ್ರಕ್ಕೆ ಪ್ರೇಕ್ಷಕರ ಪ್ರಶಂಸೆ:  ಬದುಕಿಗೆ ಆಪ್ತವೆನಿಸುವ ‘ಹೊಂದಿಸಿ ಬರೆಯಿರಿ’ ಎಲ್ಲೆಡೆ ಹೌಸ್ ಫುಲ್

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

by ಪ್ರತಿಧ್ವನಿ
April 28, 2026
0

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಆಡಳಿತ ವಿರೋಧಿ ಅಲೆ ಹೊಸ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ All India Trinamool Congress ಸರ್ಕಾರದ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
Next Post
ರಾಮೇನಹಳ್ಳಿ ಜಗನ್ನಾಥ್ ಮೊದಲ ಚಿತ್ರಕ್ಕೆ ಪ್ರೇಕ್ಷಕರ ಪ್ರಶಂಸೆ:  ಬದುಕಿಗೆ ಆಪ್ತವೆನಿಸುವ ‘ಹೊಂದಿಸಿ ಬರೆಯಿರಿ’ ಎಲ್ಲೆಡೆ ಹೌಸ್ ಫುಲ್

ರಾಮೇನಹಳ್ಳಿ ಜಗನ್ನಾಥ್ ಮೊದಲ ಚಿತ್ರಕ್ಕೆ ಪ್ರೇಕ್ಷಕರ ಪ್ರಶಂಸೆ:  ಬದುಕಿಗೆ ಆಪ್ತವೆನಿಸುವ ‘ಹೊಂದಿಸಿ ಬರೆಯಿರಿ’ ಎಲ್ಲೆಡೆ ಹೌಸ್ ಫುಲ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada