• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, October 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ಮಂಕಿ ಫಾಕ್ಸ್ ಆತಂಕ ಬೇಡ: ಸಚಿವ ಶರಣಪ್ರಕಾಶ್‌ ಪಾಟೀಲ್‌

ಪ್ರತಿಧ್ವನಿ by ಪ್ರತಿಧ್ವನಿ
August 23, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಆಫ್ರಿಕಾ ಖಂಡದಲ್ಲಿ ಆತಂಕ ಮೂಡಿಸಿರುವ ಮಂಕಿಫಾಕ್ಸ್ ಬಗ್ಗೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ವಿಶ್ವ ಆರೋಗ್ಯಸಂಸ್ಥೆ ಘೋಷಿಸಿದ್ದರೂ ಈ ಸೋಂಕು ಭಾರತದಲ್ಲಿ ಹರಡುವ ಅಪಾಯ ಕಡಿಮೆ.ಹೀಗಾಗಿ ಯಾರೊಬ್ಬರು ಆತಂಕಕ್ಕೆ ಒಳಗಾಗಬಾರದೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟಿಲ್‌ ರಾಜ್ಯದ ಜನತೆಗೆ ಅಭಯ ನೀಡಿದ್ದಾರೆ.

ADVERTISEMENT

ಶುಕ್ರವಾರ (ಇಂದು) ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮಂಕಿಫಾಕ್ಸ್ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ಕಳೆದ ಆ.14ರಂದು ವಿಶ್ವ ಆರೋಗ್ಯ ಸಂಸ್ಥೆ ಮಂಕಿಫಾಕ್ಸ ಅನ್ನು ಜಾಗತಿಕ ಆರೋಗ್ಯ ತುರ್ತುಸ್ಥಿತಿಯಾಗಿ ಘೋಷಿಸಿದೆ. ಆಫ್ರಿಕಾದಲ್ಲಿ ಹರಡಿರುವ ಸೋಂಕು ಕಾಣಿಸಿಕೊಂಡಿರುವ ಸೋಂಕನ್ನು ಎದುರಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.

ಈ ಸೋಂಕು ಇಲ್ಲಿಯವರೆಗೆ ಭಾರತದಲ್ಲಿ ಕಂಡು ಬಂದಿಲ್ಲ. ಈ ಹಿನ್ನೆಲೆ ಯಾವುದೇ ಆತಂಕ ಬೇಡ. ಎನ್‌ಸಿಡಿಸಿ ಜಂಟಿ ನಿರ್ವಹಣೆ ಸಂಸ್ಥೆ ಇದರ ಹರಡುವಿಕೆ ಅಪಾಯದ ಮೌಲ್ಯಮಾಪನ ನಡೆಸುತ್ತಿದೆ. ಒಂದು ವೇಳೆ ಪ್ರಕರಣಗಳಿದ್ದರೆ ಪ್ರವೇಶ ಹಂತದಲ್ಲೇ ಎಚ್ಚರಿಸಲಾಗುವುದು ಎಂದು ಪಾಟೀಲ್‌ ಮಾಹಿತಿ ನೀಡಿದರು.

“ಸರ್ಕಾರದ ಮಾರ್ಗಸೂಚಿ ಪ್ರಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ. ಮಂಕಿಫಾಕ್ಸ ಬಗ್ಗೆ ಬಹಳಷ್ಟು ಸುದ್ದಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಲಾಗಿದೆ. ನಮ ರಾಜ್ಯದಲ್ಲಿ ಮಂಕಿಫಾಕ್ಸ ಒಂದು ಪ್ರಕರಣವೂ ಕಂಡು ಬಂದಿಲ್ಲ. ಇದರಿಂದ ರಾಜ್ಯದ ಜನರು ಆತಂಕಕ್ಕೆ ಒಳಗಾಗುವುದು ಬೇಡ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇದರ ಟೆಸ್ಟ್‌ ಮಾಡುವ ಸೌಲಭ್ಯವಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯಲ್ಲಿ ಬೆಡ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ” ಎಂದು ಸಚಿವರು ಹೇಳಿದರು.

ಇದು ವೈರಲ್‌ ಇನ್ಫೆಕ್ಷನ್ ಆಗಿರಲಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗ ಪರೀಕ್ಷೆ ಉಚಿತವಾಗಿರುತ್ತದೆ. ಸದ್ಯಕ್ಕೆ 50 ಹಾಸಿಗೆಯ ಐದು ಐಸಿಯು ವ್ಯವಸ್ಥೆ ಮಾಡಲಾಗಿದೆ. ಇಲ್ಲಿಯವರೆಗೂ ಒಂದೇ ಒಂದು ಕೇಸ್‌‍ ಪತ್ತೆಯಾಗಿಲ್ಲದಿದ್ದರೂ ಏಕಾಏಕಿ ಕಂಡುಬಂದರೆ ಸಮಸ್ಯೆಯಾಗದಿರಲಿ ಎಂಬ ಉದ್ದೇಶದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಪಾಟೀಲ್ ತಿಳಿಸಿದರು.

ಈ ಸಂಬಂಧ ಆರೋಗ್ಯ ಇಲಾಖೆ ಜೊತೆಗೂ ಚರ್ಚೆ ನಡೆಸಲಾಗಿದೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್‌ ಮಾಡುವ ಬಗ್ಗೆ ಆರೋಗ್ಯಇಲಾಖೆಗೆ ಕೇಂದ್ರ ಸರ್ಕಾರ ಸೂಚನೆ ನೀಡುತ್ತದೆ ಎಂದು ಸಚಿವರು ತಿಳಿಸಿದರು.

Tags: Minister of Medical Education Dr. Sharanprakash Patilministry of health departmentmonkeypoxworld health organization
Previous Post

ಅತಿಯಾಗಿ ನಿಂಬೆಹಣ್ಣನ್ನು ಸೇವಿಸಿದರೆ ಆರೋಗ್ಯದಲ್ಲಿ ಈ ಸಮಸ್ಯೆಗಳು ಎದುರಾಗುತ್ತದೆ.!

Next Post

ಪ್ರಜ್ವಲ್ ದೇವರಾಜ್ – ಅದಿತಿ‌ ಪ್ರಭುದೇವ ಅಭಿನಯದ “ಮಾಫಿಯಾ” ಗೆ ಸೆನ್ಸಾರ್ ಈ ಚಿತ್ರ ಸದ್ಯದಲ್ಲೇ ತೆರೆಗೆ

Related Posts

Wife and her lover sentenced to death by court for murdering husband
Top Story

ಪತಿಯ ಹತ್ಯೆಗೈದ  ಪತ್ನಿ, ಪ್ರಿಯಕರನಿಗೆ ಕೋರ್ಟ್‌ನಿಂದ ಗಲ್ಲು ಶಿಕ್ಷೆ | Court

by ಪ್ರತಿಧ್ವನಿ
October 16, 2026
0

ಮೀರತ್: ಪತಿಯ ಕತ್ತು ಹಿಸುಕಿ ಕೊಲೆ (Murder) ಮಾಡಿ, ಅದನ್ನು ಹಾವಿನ ಕಡಿತದ ಸಾವು ಎಂದು ಬಿಂಬಿಸಲು ಶವದಡಿ ಹಾವು ಇರಿಸಿದ್ದ ಮಹಿಳೆ ಮತ್ತು ಆಕೆಯ ಪ್ರಿಯಕರನಿಗೆ...

Read moreDetails
Gold imports see a sharp decline of 81%, silver by 49% in September

ಸೆಪ್ಟೆಂಬರ್‌ನಲ್ಲಿ ಚಿನ್ನದ ಆಮದು ಶೇ. 81, ಬೆಳ್ಳಿ ಶೇ. 49 ರಷ್ಟು ಭಾರೀ ಕುಸಿತ | Gold imports

October 16, 2026
Petrol and diesel prices Big shock for motorists: Petrol and diesel prices likely to increase in November

ವಾಹನ ಸವಾರರಿಗೆ ಬಿಗ್ ಶಾಕ್ : ನವೆಂಬರ್‌ನಲ್ಲಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಸಾಧ್ಯತೆ | Petrol and diesel prices

October 16, 2026
Government Employees Inquiry into Anonymous, False Complaints Against Government Employees: Significant Order from the State Government

ಸರ್ಕಾರಿ ನೌಕರರ ವಿರುದ್ಧದ ಅನಾಮಧೇಯ, ಸುಳ್ಳು ದೂರುಗಳ ವಿಚಾರಣೆ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ | Government Employees

October 16, 2026
Praja Seva Abhiyana On-the-spot solutions for people's problemsa new guidelines issued by the government

ಪ್ರಜಾಸೇವಾ ಅಭಿಯಾನ: ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ, ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ | Prajaseva

October 16, 2026
Next Post

ಪ್ರಜ್ವಲ್ ದೇವರಾಜ್ - ಅದಿತಿ‌ ಪ್ರಭುದೇವ ಅಭಿನಯದ "ಮಾಫಿಯಾ" ಗೆ ಸೆನ್ಸಾರ್ ಈ ಚಿತ್ರ ಸದ್ಯದಲ್ಲೇ ತೆರೆಗೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada